ಬಾಗೇಪಲ್ಲಿ | ಕೃಷಿ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳು ನಿರ್ಣಾಯಕ ಪಾತ್ರವಹಿಸಬೇಕು; ಹೆಚ್.ವಿ.ನಾಗರಾಜು

Date:

ಪ್ರಸ್ತುತ ಕೃಷಿಯನ್ನು ಬಿಟ್ಟು ನಗರಗಳತ್ತ ಮುಖಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಸಹಕಾರ ಸಂಘಗಳು ಕೃಷಿ ಅಭಿವದ್ಧಿಯಲ್ಲಿ ನಿರ್ಣಾಯಕ ಪಾತ್ರವಹಿಸಬೇಕು. ಸರಕಾರಗಳು ನೂರಾರು ರೈತಪರ ಯೋಜನೆಗಳನ್ನು ಜಾರಿಗೆ ತಂದರೂ, ಕೃಷಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಿಲ್ಲ. ಆದ್ದರಿಂದ, ರೈತರ ಅಭಿವದ್ಧಿಗೆ ಸಂಘಗಳು ಪಕ್ಷಾತೀತವಾಗಿ ಕಾರ್ಯ ನಿರ್ವಹಿಸಬೇಕಿದೆ. ಆಹಾರ ಮತ್ತು ಆರ್ಥಿಕ ಸ್ವಾವಲಂಬನೆ ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಹೆಚ್‌.ವಿ.ನಾಗರಾಜು ಹೇಳಿದರು.

- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕು ದೇವರಗುಡಿಪಲ್ಲಿ ಗ್ರಾಮದ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟ ನಿ, ಚಿಕ್ಕಬಳ್ಳಾಪುರ ಸಹಕಾರ ಇಲಾಖೆ ಹಾಗೂ ಬಾಗೇಪಲ್ಲಿ ತಾಲ್ಲೂಕಿನ ವಿವಿಧ ಸಹಕಾರ ಸಂಘಗಳ ಸಂಯಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸವನ್ನು ಇರಿಸಿಕೊಂಡಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್‌ ನೆಹರೂರವರು ಸಹಕಾರ ತತ್ವದ ಮೂಲಕ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಬಹುದೆಂಬ ಆಶಯವನ್ನು ಇಟ್ಟುಕೊಂಡು ಹಲವಾರು ಯೋಜನೆಗಳನ್ನು ರೂಪಿಸಿದರು. ಇದು ಸಹಕಾರ ಚಳುವಳಿಯ ಬೆಳವಣಿಗೆಗೆ ದಾರಿಯಾಯಿತು ಎಂದು ಹೇಳಿದರು.

ಪಂಡಿತ್‌ ನೆಹರೂ ಅವರ ಜನ್ಮದಿನದ ಸ್ಮರಣಾರ್ಥ ಪ್ರತಿ ವರ್ಷ ನವೆಂಬರ್ 14ರಿಂದ 20 ರವರೆಗೆ ರಾಷ್ಟ್ರದಾದ್ಯಂತ “ಅಖಿಲ ಭಾರತ ಸಹಕಾರ ಸಪ್ತಾಹ” ನಡೆಯಲಿದ್ದು, ನಮ್ಮ ದೇಶ ವಿಶ್ವದಲ್ಲೇ ಅತ್ಯುತ್ತಮ ಸಹಕಾರ ಚಳುವಳಿಯನ್ನು ಹೊಂದಿದೆ ಎಂದು ತಿಳಿಸಿದರು.

ಕೋಚಿಮುಲ್ ಮಾಜಿ ಅಧ್ಯಕ್ಷ ವಿ.ಮಂಜುನಾಥ ರೆಡ್ಡಿ ಮಾತನಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವೃದ್ಧಿಯಾದರೆ ರೈತರ ಅಭಿವದ್ಧಿ ಸಾಧ್ಯವಾಗುತ್ತದೆ. ಸಂಘಗಳಲ್ಲಿ ರಾಜಕೀಯ ಬೆರೆಸುವ ಬದಲು ರಾಜಕೀಯ ಮುಕ್ತವಾಗಿ ಸಹಕಾರ ಸಂಘಗಳ ಏಳಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಸಹಕಾರ ಸಂಘಗಳು ಮುಕ್ತವಾಗಿ ಕೆಲಸ ಮಾಡಬೇಕು. ಸಹಕಾರ ಸಂಘಗಳ ಉಳಿವಿನಲ್ಲಿ ರೈತರ ಹಿತ ಮತ್ತು ಬಲವರ್ಧನೆಯು ಅಡಗಿದೆ. ಹಾಗಾಗಿ ಪಕ್ಷಾತೀತವಾಗಿ ಸಹಕಾರ ಕ್ಷೇತ್ರವನ್ನು ಮುನ್ನಡೆಸಲು ಎಲ್ಲಾ ರಾಜಕಾರಣಿಗಳು ಪಕ್ಷಬೇಧ ಮರೆತು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.

ಸಮಾರಂಭದಲ್ಲಿ ಸಹಕಾರ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದಲ್ಲಿ ವಿಶಿಷ್ಟ ಸಾಧನೆ ಮಾಡಿದ ಗಣ್ಯ ವ್ಯಕ್ತಿಗಳನ್ನು ಸನ್ಮಾನಿಸಲಾಯಿತು. ಮಲಕಚರವುಪಲ್ಲಿ ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡಕ್ಕೆ 2.5ಲಕ್ಷ ರೂ. ಚೆಕ್ ವಿತರಣೆ ಮಾಡಲಾಯಿತು.

ಇದನ್ನೂ ಓದಿ : ಬಾಗೇಪಲ್ಲಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಭೂಮಿ ಪೂಜೆ

ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಪದಾಧಿಕಾರಿಗಳಾದ ಅಮರ್, ಕೆ.ಎನ್.ಲಕ್ಷ್ಮೀಪತಿ, ಪ್ರಭಾಕರ್ ರೆಡ್ಡಿ, ಚಂದ್ರಶೇಖರ ರೆಡ್ಡಿ, ಲಕ್ಷ್ಮೀದೇವಮ್ಮ, ಶಂಕರ್, ಶ್ರೀನಿವಾಸ್ ಗೌಡ, ವೇಣು, ಪ್ರೇಮ್ ಕುಮಾರ್, ಕೆ.ಸಿ.ಗುರಪ್ಪ, ಜಿ.ಸಿ.ವಿನಯ್ ಕುಮಾರ್, ಬಾಬುರೆಡ್ಡಿ, ಮಲ್ಲಿಕಾರ್ಜುನ, ಎನ್.ನಾಗಭೂಷಣ, ಪ್ರದೀಪ್ ಬಿ.ವಿ, ಪತ್ರಕರ್ತರಾದ ಡಿ.ಎನ್.ಕೃಷ್ಣಾರೆಡ್ಡಿ ಹಾಗೂ ವಿವಿಧ ಸಂಘಗಳ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...