ವಡಗೇರಾ ಬರಪಟ್ಟಿಗೆ ಸೇರಿಸದಿದ್ದರೆ ಸರ್ಕಾರದ ವಿರುದ್ಧ ಬೃಹತ್ ಹೋರಾಟ: ಸರ್ವ ಸಂಘಟನೆಗಳ ಒಕ್ಕೂಟ ಎಚ್ಚರಿಕೆ

Date:

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ತಾಲೂಕಿನಲ್ಲಿ ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ವಡಗೇರಾ ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟರೆ ರೈತರೊಂದಿಗೆ ಸೇರಿ ಉಗ್ರ ಹೋರಾಟ ನಡೆಸುವುದಾಗಿ ಸರ್ವ ಸಂಘಟನೆಗಳ ಒಕ್ಕೂಟ ಎಚ್ಚರಿಕೆ ನೀಡಿದೆ.

- Advertisement -

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ಸೋಮವಾರ ಸರ್ವ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಶರಣು ಎಸ್. ಇಟಗಿ ಮಾತನಾಡಿ, ‘ಮಳೆಯನ್ನು ನಂಬಿ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದರು. ಆದರೆ ಮಳೆ ಬಾರದ ಕಾರಣ ಬೆಳೆಗಳು ಸಂಪೂರ್ಣ ಒಣಗಿ ಹೋಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

‘ಸ್ಥಳೀಯ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ವೈಫಲ್ಯದಿಂದ ವಡಗೇರಾ ತಾಲೂಕಿನ ರೈತರು ಬರ ಪರಿಹಾರದಿಂದ ವಂಚಿತರಾಗುವಂತಾಗಿದೆ ಎಂದು ಆರೋಪಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಸೆ.16ರಂದು ಪ್ರಕಟವಾಗಲಿರುವ ಮೂರನೇ ಬರಪೀಡಿತ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಸೇರಿಸಿ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ. ಅದರಂತೆ ವಡಗೇರಾ ತಾಲೂಕನ್ನೂ ಬರಪಟ್ಟಿಗೆ ಸೇರಿಸಬೇಕು’ ಎಂದು ಒತ್ತಾಯಿಸಿದರು.

‘ಒಂದು ವೇಳೆ ವಡಗೇರಾ ತಾಲೂಕನ್ನು ಬರಪಟ್ಟಿಯಿಂದ ಕೈಬಿಟ್ಟರೆ, ತಾಲೂಕಿನ ಎಲ್ಲ ರೈತರು ಹಾಗೂ ವಿವಿಧ ಸಂಘಟನೆಗಳನ್ನು ಒಗ್ಗೂಡಿಸಿ ಸರ್ಕಾರದ ವಿರುದ್ಧ ಬೃಹತ್ ಹೋರಾಟ ನಡೆಸಲಾಗುವುದು’ ಎಂದು ಶರಣು ಎಸ್. ಇಟಗಿ ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಊಡಗಿ ಶ್ರೀ ಲೋಕೇಶ್ವರ ದೇವಾಲಯಕ್ಕೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಅಧ್ಯಕ್ಷ ಮಲ್ಲಣ್ಣ ನೀಲಹಳ್ಳಿ, ರೈತ ಹೋರಾಟಗಾರ ಫಕೀರ್ ಅಹ್ಮದ್, ದಲಿತ ಸಂಘದ ಗುರುನಾಥ ನಾಟೇಕರ್, ನಮ್ಮ ಕರ್ನಾಟಕ ಸೇನೆಯ ಸತೀಶ್ ಜಡಿ, ಮಾದಿಗ ದಂಡೋರ ಸಮಿತಿಯ ಶರಣು, ಭೀಮ್ ಆರ್ಮಿಯ ಮರೆಪ್ಪ ಡಿ., ಕರವೇ ಅಧ್ಯಕ್ಷ ಅಬ್ದುಲ್ ಚಿಗನೂರ್, ಜಯ ಕರ್ನಾಟಕದ ಭೀಮಣ್ಣ ಬೂದಿನಾಳ, ಶ್ರೀನಿವಾಸ್ ಮಡಿವಾಳ, ಸಾಯಬಣ್ಣ ಹೊರಟೂರ್, ಪೋಲಪ್ಪ, ಸಂತೋಷ ನಾಟೇಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭದ್ರಾ ಉಪಕಣಿವೆ ಯೋಜನೆ: ತುರ್ತಾಗಿ ತುಂಬಿಸಿ; ರೈತ ಸಂಘ ಗುರುಶಾಂತಪ್ಪ

ಅಜ್ಜಂಪುರ ತಾಲ್ಲೂಕಿನಲ್ಲಿ ಬರಗಾಲ ಅನುಭವಿಸುತ್ತಿರುವ  ಜನರ ಒಳಿತಿಗೆ ಭದ್ರಾ ಉಪಕಣಿವೆ ಯೋಜನೆ...

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಅ. 31ರಂದು ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ...

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...