ಉಡುಪಿ | ಕರಾವಳಿಯಲ್ಲಿ ಎರಡು ದಿನ ರೆಡ್‌ ಅಲರ್ಟ್‌ ಘೋಷಣೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

Date:

ರಾಜ್ಯ ಕರಾವಳಿಯ ಮೂರು ಜಿಲ್ಲೆಗಳಿಗೆ ಜು.20, 21ರಂದು ರೆಡ್ ಅಲರ್ಟ್ ಹಾಗೂ ನಂತರದ ಐದು ದಿನಗಳಲ್ಲಿ ಆರೆಂಜ್ ಅಲರ್ಟ್‌ನ್ನು ಹವಾಮಾನ ಇಲಾಖೆ ಘೋಷಿಸಿದೆ. ಈ ಸಂದರ್ಭದಲ್ಲಿ ಭಾರೀ ಮಳೆಯ ಸಾದ್ಯತೆಯನ್ನು ಅದು ನೀಡಿದೆ. ಮುಂದಿನ ಎರಡು ದಿನಗಳ ಕಾಲ ಗಂಟೆಗೆ 30ರಿಂದ 40ಕಿ.ಮೀ. ವೇಗದ ಗಾಳಿಯೊಂದಿಗೆ ಭಾರೀ ಮಳೆ ಸುರಿಯಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅದು ಎಚ್ಚರಿಸಿದೆ.

- Advertisement -

ಉಡುಪಿ ಜಿಲ್ಲೆಯಲ್ಲಿ ಇಂದು ಸರಾಸರಿ 28.4ಮಿ.ಮೀ. ಮಳೆ ದಾಖಲಾಗಿದೆ. ಕಾಪುವಿನಲ್ಲಿ ಅತ್ಯಧಿಕ 56.5ಮಿ.ಮೀ. ಮಳೆಯಾದರೆ ಉಡುಪಿಯಲ್ಲಿ 37.3, ಹೆಬ್ರಿಯಲ್ಲಿ 32.7, ಕಾರ್ಕಳದಲ್ಲಿ 30.6, ಬೈಂದೂರಿ ನಲ್ಲಿ 29.1, ಬ್ರಹ್ಮಾವರದಲ್ಲಿ 26.4ಮಿಮೀ. ಮಳೆಯಾಗಿದೆ. ದಿನದಲ್ಲಿ ಕಾಪು ತಾಲೂಕಿನ ಹೆಜಮಾಡಿ, ಬೆಳಪು ಹಾಗೂ ನಡ್ಪಾಲು ಅಲ್ಲದೇ ಕುಂದಾಪುರದ ಕೋಣಿಯಲ್ಲಿ ತಲಾ ಒಂದು ಮನೆಗಳಿಗೆ ಹಾನಿಯಾಗಿದ್ದು 1.5 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...