ವಿಪರೀತ ಮಳೆಗೆ ತತ್ತರಿಸಿದ ಕರಾವಳಿ: ಹಲವೆಡೆ ನಾಶ-ನಷ್ಟ; ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಮಂಗಳೂರು, ಉಳ್ಳಾಲ, ಬಂಟ್ವಾಳ, ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ನಾಶ ನಷ್ಟದ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮಗಳನ್ನ ಮೊಟಕುಗೊಳಿಸಿ ಇಂದು ಮಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.

ಶುಕ್ರವಾರ ಸಂಜೆ ವೇಳೆಗೆ ಮಂಗಳೂರು ತಲುಪಲಿರುವ ಸಚಿವರು, ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.‌. ಭಾರೀ ಮಳೆ ಹಿನ್ನೆಲೆಯಲ್ಲಿ ಎಲ್ಲ ಮುಂಜಾಗ್ರತ ಕ್ರಮಗಳನ್ನ ಕೈಗೊಳ್ಳಲು ಈಗಾಗಲೇ ಜಿಲ್ಲಾಡಳಿತಕ್ಕೆ ಸಚಿವರು ಸೂಚನೆ ನೀಡಿದ್ದಾರೆ.

ಇಂದು ಮಂಗಳೂರಿನಲ್ಲಿಯೇ ತಂಗಲಿರುವ ಸಚಿವರು, ತ್ವರಿತಗತಿಯಲ್ಲಿ ವಿಪತ್ತು ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವತ್ತ ಸ್ಥಳದಲ್ಲೇ ಇದ್ದು, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಿದ್ದಾರೆ ಎಂದು ಉಸ್ತುವಾರಿ ಸಚಿವರ ಕಚೇರಿ ಮಾಹಿತಿ ನೀಡಿದೆ.

Advertisements

ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಜಿಲಾಧಿಕಾರಿಗಳಿಗೆ ಸ್ಪೀಕರ್ ಖಾದರ್ ಸೂಚನೆ

ವಿವಿಧೆಡೆ ಗುಡ್ಡ ಕುಸಿತ, ಪ್ರಾಣ ಹಾನಿಯ ಬಗ್ಗೆ ಹಜ್ಜ್‌ ಯಾತ್ರೆಯಲ್ಲಿರುವ ಸ್ಪೀಕರ್ ಯುಟಿ ಖಾದರ್ ಮದೀನದಿಂದ ಮಾಹಿತಿ ಪಡೆಯುತ್ತಿದ್ದಾರೆ. ಮುಂಜಾಗ್ರತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈ ಗೊಳ್ಳಲು ಜಿಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

WhatsApp Image 2025 05 30 at 9.46.53 AM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ,ಉಳ್ಳಾಲ ತಾಲೂಕಿನ ಬೆಳ್ಮ ಹಾಗೂ ಮಂಜನಾಡಿ ಗ್ರಾಮದಲ್ಲಿ ಗುಡ್ಡ ಕುಸಿದು ಪ್ರಾಣ ಹಾನಿ ಸಂಭವಿಸಿದೆ. ಉಳ್ಳಾಲ ನಗರಸಭೆ ವ್ಯಾಪ್ತಿಯ ಉಳ್ಳಾಲ ಬೈಲು, ಅಕ್ಕರೆಕೆರೆ, ಮಿಲ್ಲತ್ ನಗರ, ಉಳಿಯ, ಅಲೇಕಳ, ಸುಂದರಿಬಾಗ್, ಕಲ್ಲಾಪು ಸೋಮೇಶ್ವರ ಕೋಟೆಕಾರು ವ್ಯಾಪ್ತಿಯ ಕುಂಪಲ, ಕನೀರ್ ತೋಟ, ಉಚ್ಚಿಲ ಮುಂತಾದ ನದಿ ತಗ್ಗು ಪ್ರದೇಶಗಳಿಗೆ ನೆರೆಯಿಂದ ಮನೆಗಳಿಗೆ ನೀರು ನುಗ್ಗಿ ಆಸ್ತಿ ಪಾಸ್ತಿಗಳಿಗೆ ನಷ್ಟ ಉಂಟಾಗಿದೆ. ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ರಕ್ಷಣಾ ಕಾರ್ಯದ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿರುವ ಸ್ಥಳೀಯ ಶಾಸಕರೂ ಆಗಿರುವ ಯುಟಿ ಖಾದರ್, ಎನ್‌ಡಿಆರ್‌ಎಫ್ ಮುಂತಾದ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲು ಸೂಚಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು,ಕಂದಾಯ ಸಚಿವರ ಜೊತೆಯಲ್ಲಿ ಕೂಡಾ ಮಾತುಕತೆ ನಡೆಸಲಾಗಿದೆ, ವಿಷಯದ ಗಂಭೀರತೆಯನ್ನು ಮುಖ್ಯಮಂತ್ರಿಯ ಗಮನಕ್ಕೂ ತರಲಾಗಿದೆ. ಮೃತರ ಕುಟುಂಬಗಳಿಗೆ ಪರಿಹಾರ ಹಾಗೂ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದರ ವರದಿ ಆಧರಿಸಿ ಪರಿಹಾರ ನೀಡಿ ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಅಧಿಕಾರಿಯನ್ನು ನೇಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲು ಸೂಚನೆ ನೀಡಲಾಗಿದೆಯೆಂದು ಯು.ಟಿ.ಖಾದರ್ ತಿಳಿಸಿದ್ದಾರೆ.

ullal

ಕ್ಷೇತ್ರದ ಪ್ರತೀ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವ ಯು.ಟಿ.ಖಾದರ್, ಕ್ಷಣ ಕ್ಷಣದ ಮಾಹಿತಿಯನ್ನು ಪಡೆದುಕೊಂಡು ರಕ್ಷಣಾ ಕಾರ್ಯಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಆದಾಗ್ಯೂ, ಸಾರ್ವಜನಿಕರು ಅಗತ್ಯ ಬಿದ್ದಲ್ಲಿ 7026991111 ಮೊಬೈಲ್ ಸಂಖ್ಯೆಯನ್ನು ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು ನಗರ ಪೊಲೀಸ್ ಕಮಿಷನರ್‌ ಆಗಿ ಸುಧೀರ್ ಕುಮಾರ್ ರೆಡ್ಡಿ

ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ಕಾನಕರೆಯಲ್ಲಿರುವ ನೌಶಾದ್ ರ ಮನೆಗೆ ಹಿಂಬದಿಯ ಗುಡ್ಡೆ,ತಡೆಗೋಡೆ ಕುಸಿದು ಬಿದ್ದು ನೌಶಾದ್ ರ ಪುತ್ರಿ ಫಾತಿಮ ನಈಮ (10),ಮಂಜನಾಡಿ ಗ್ರಾಮದ ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ಗುಡ್ಡ ಜರಿದು ಐವರು ಮಣ್ಣಿನಡಿಯಲ್ಲಿ ಸಿಲುಕಿ ಪ್ರೇಮ ಪೂಜಾರಿ ಮೃತರಾಗಿದ್ದು ಇತರರ ರಕ್ಷಣಾ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ಅಪರ ಜಿಲ್ಲಾಧಿಕಾರಿ, ತಹಶೀಲ್ದಾರು ಹಾಗೂ ಇತರ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ,ಸಾರ್ವಜನಿಕರ ಸಂಪರ್ಕದಲ್ಲಿದ್ದುಕೊಂಡು ಸಹಕರಿಸುವಂತೆ ಸಭಾಧ್ಯಕ್ಷ ಯು ಟಿ ಖಾದರ್ ಸೂಚನೆ ನೀಡಿದ್ದು, ಜನ ಸಾಮಾನ್ಯರೂ ಕೂಡಾ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

ಈಗಾಗಲೇ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಪ್ರಭಾರ ಜಿಲ್ಲಾಧಿಕಾರಿ ಆನಂದ್ ರಜೆ ಘೋಷಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X