ಭಾಲ್ಕಿ ತಾಲೂಕಿನ ನಿಟ್ಟೂರ್(ಬಿ) ಗ್ರಾಮದ ಮಹಾತ್ಮಾ ಜ್ಯೋತಿಭಾ ಫುಲೆ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಮುಂಭಾಗದ ರಸ್ತೆ ಮೇಲೆ ಸಂಗ್ರಹವಾದ ತ್ಯಾಜ್ಯವನ್ನು ವಿಲೇವಾರಿ ಮಾಡುವಂತೆ ಗ್ರಾಮ ಪಂಚಾಯತ್ ಪಿಡಿಒ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ʼಕಾಲೇಜು ಇರುವ ಓಣಿಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ನಿವಾಸಿಗಳು ರಸ್ತೆ ಮೇಲೆ ಕಸ ಸುರಿಯುತ್ತಿದ್ದಾರೆ. ಇನ್ನು ಮನೆಗಳ ಚರಂಡಿ ನೀರು, ಮಳೆ ನೀರು ರಸ್ತೆಯ ಗುಂಡಿಯಲ್ಲಿ ಸಂಗ್ರಹವಾಗುವ ಕಾರಣ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆʼ ಎಂದರು.
ʼಶೀಘ್ರದಲ್ಲೆ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ ಸಮಾರಂಭಕ್ಕೆ ಕ್ಷೇತ್ರದ ಸಂಸದ ಸಾಗರ್ ಖಂಡ್ರೆ ಅಗಮಿಸುತ್ತಿದ್ದಾರೆ. ಆದ್ದರಿಂದ ಸ್ವಚ್ಛತೆ ಹಿತದೃಷ್ಟಿಯಿಂದ ಕಾಲೇಜು ಎದುರಿನ ರಸ್ತೆ, ಚರಂಡಿ ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡಬೇಕೆಂದು ಕಾಲೇಜು ಪ್ರಾಚಾರ್ಯ ಬಾಬುರಾವ್ ಮಾಳಗೆ ಕೋರಿದ್ದಾರೆ.