ಉಡುಪಿ | ಹೃದಯಾಘಾತದಿಂದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನ

Date:

Advertisements

ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಸೋಮವಾರ ವಿಧಿವಶರಾಗಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಕೇಶ್ ಅವರ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್​ ಪೇಟೆ ಅವರು ಖಚಿತಪಡಿಸಿದ್ದಾರೆ.

Advertisements

ರಾಕೇಶ್ ಅವರ ಸಾವು ಅವರ ಅಭಿಮಾನಿಗಳು ಹಾಗೂ ಆಪ್ತ ಬಳಗಕ್ಕೆ ಶಾಕ್ ನೀಡಿದ್ದು, ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.

‘ಚೈತನ್ಯ ಕಲಾವಿದರು’ ನಾಟಕ ತಂಡದ ಮೂಲಕ ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದರು. ಬಳಿಕ 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಅನೇಕ ಜನರ ಮನ ಗೆದ್ದಿದ್ದರು. ನಂತರ ಹಲವು ಸಿನಿಮಾಗಳಿಗೆ ಆಡಿಷನ್ ನೀಡಿದ್ದರು. ಸುಮಾರು 150 ಆಡಿಷನ್ ನೀಡಿದ್ದ ರಾಕೇಶ್ ಪೂಜಾರಿ 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಶೋಗೆ ಆಯ್ಕೆಯಾಗಿ, ಇದರಲ್ಲಿ ರನ್ನರ್ ಅಪ್ ತಂಡದ ಸದಸ್ಯರಾಗಿದ್ದರು. ಬಳಿಕ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿಜೇತರಾಗಿದ್ದರು.

ರಾಕೇಶ್ ಅವರು ಕನ್ನಡ ಮತ್ತು ತುಳುವಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ರಾಕೇಶ್ ಕನ್ನಡದಲ್ಲಿ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ.

ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆ‌ರ್ ಪೊಲೀಸ್, ‘ಪಮ್ಮನ್ನೆ ದಿ ಗ್ರೇಟ್’, ‘ಉಮಿಲ್, ‘ಇಲ್ಲೋಕ್ಕೆಲ್’ ಸೇರಿದಂತೆ ಹಲವು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದರು.

ಕರಾವಳಿಯ ರಿಯಾಲಿಟಿ ಶೋಗಳಾದ ‘ಬಲೆ ತೇಲಿಪಾಲೆ’, ‘ಮೇ 22’, ‘ಸ್ಟಾರ್’, ‘ತುಯಿನಾಯೆ ಪೋಯೆ’ ಸೇರಿದಂತೆ ಕೆಲ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇದೀಗ ಕನ್ನಡದ ಕಿರುತೆರೆಯಲ್ಲಿ ಕಾಮಿಡಿ ಸ್ಟಾರ್ ಆಗಿ ಮಿಂಚುತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X