ಬೆಂಗಳೂರಿನ 100 ಕಡೆ ಏಕಕಾಲದಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಚಿಕ್ಕಪೇಟೆ ಹಾಗೂ ಸುತ್ತಮುತ್ತಲಿನ ಎಲೆಕ್ಟ್ರಿಕ್ ಶೋರೂಂ, ಗೃಹೋಪಯೋಗಿ ವಸ್ತುಗಳ ಅಂಗಡಿ ಸೇರಿದಂತೆ 100 ಕಡೆಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

ಸರಕುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ, ಅನಧಿಕೃತವಾಗಿ ಗೋದಾಮುಗಳಲ್ಲಿ ಶೇಖರಿಸಿಟ್ಟು, ಜಿಎಸ್‌ಟಿ ನೀಡದೇ ವ್ಯಾಪಾರ ನಡೆಸುತ್ತಿರುವ ಮಾಹಿತಿ ಮೇರೆಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಗೋದಾಮಿನಲ್ಲಿ ಲೆಕ್ಕಕ್ಕೆ ಸಿಗದ ಹಲವು ವಸ್ತು ಇಟ್ಟಿರುವುದು ಬೆಳಕಿಗೆ ಬಂದಿದೆ. ಅನಧಿಕೃತವಾಗಿ ಸರಕುಗಳನ್ನು ಶೇಖರಣೆ ಮಾಡಿಟ್ಟಿದ್ದ ಅಂಗಡಿ ಮಾಲೀಕರಿಗೆ ವಾಣಿಜ್ಯ ಅಧಿಕಾರಿಗಳು ದಂಡ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಸೆ.5ರ ತಡರಾತ್ರಿ ಚಿಕ್ಕಪೇಟೆ ಮತ್ತು ಸುತ್ತಮುತ್ತಲಿನ ಟೆಕ್ಸ್ ಟೈಲ್ಸ್ ವ್ಯಾಪಾರಿಗಳು, ರೆಡಿಮೇಡ್ ಗಾರ್ಮೆಂಟ್ಸ್, ಎಲೆಕ್ಟ್ರಿಕ್ ವಸ್ತುಗಳ ಶೋರೂಂ, ಗೃಹೋಪಯೋಗಿ ವಸ್ತುಗಳ ಶಾಪ್ ಸೇರಿದಂತೆ ನೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆಯ ಪ್ರಮಾಣವನ್ನು ಪತ್ತೆ ಹಚ್ಚಲು ಹಣಕಾಸಿನ ದಾಖಲೆಗಳು ಮತ್ತು ಇತರ ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಗೋಡೌನ್‌ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ವಾಣಿಜ್ಯ ತೆರಿಗೆ ಪಾವತಿಸದೆ ವಂಚನೆ ಎಸಗಿದ ಆರೋಪದ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ತೆರಿಗೆ ಪಾವತಿ ಮಾಡದೇ ಗೋಡೌನ್‌ನಲ್ಲಿರಿಸಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಗೋಡೌನ್ ಮತ್ತು ಅಂಗಡಿಗಳಿಗೆ ಜಿಎಸ್​ಟಿ ನಿಯಮಾವಳಿ ಪ್ರಕಾರ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಟ್ ಕಾಯಿನ್ ಹಗರಣ | ಪಂಜಾಬ್‌ನ ಹ್ಯಾಕರ್ ರಾಜೇಂದ್ರ ಸಿಂಗ್‌ ಎಸ್‌ಐಟಿ ವಶಕ್ಕೆ

ವ್ಯಾಪಾರಿಗಳು ಜಿಎಸ್‌ಟಿ ನೋಂದಣಿ ಪ್ರಮಾಣ ಪತ್ರ ಮತ್ತು ಸಂಖ್ಯೆಯನ್ನು ಪ್ರದರ್ಶಿಸಿಲ್ಲ. ನೋಂದಾಯಿತ ವ್ಯಾಪಾರ ಸ್ಥಳ ಮತ್ತು ಹೆಚ್ಚುವರಿ ವ್ಯಾಪಾರ ಸ್ಥಳ ಘೋಷಿಸಿಲ್ಲ. ಅಂಥವರಿಗೆ ವಾಣಿಜ್ಯ ತೆರಿಗೆ ಇಲಾಖೆ ದಂಡ ವಿಧಿಸಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...