ಉಡುಪಿ | ವೈದ್ಯ ಡಾ. ಕೀರ್ತನ್ ಉಪಾಧ್ಯರಿಂದ ಮುಸ್ಲಿಮರ ಬಗ್ಗೆ ದ್ವೇಷದ ಟ್ವೀಟ್; ಎಫ್‌ಐಆರ್ ದಾಖಲು

Date:

Advertisements

ಸಾಮಾಜಿಕ ಜಾಲತಾಣ ‘ಎಕ್ಸ್‌'(ಟ್ವಿಟ್ಟರ್‌)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಲ್ಯಾಪ್ರೋಸ್ಕೋಪಿ ಶಸ್ತ್ರ ಚಿಕಿತ್ಸಾ ತಜ್ಞನಾಗಿರುವ ಡಾ.ಉಪಾಧ್ಯ ‘@Lonelystranger_  ಎಂಬ ಹೆಸರಿನ ಎಕ್ಸ್ ಖಾತೆಯನ್ನು ಹೊಂದಿದ್ದರು. ಬಲಪಂಥೀಯರನ್ನು ಬೆಂಬಲಿಸುವ ‘ಅಭಿ ಆ್ಯಂಡ್ ನೀಯು’ ಎಂಬ ಯೂಟ್ಯೂಬರ್‌ ದಂಪತಿ ಜು.13ರಂದು ‘ಎಕ್ಸ್‌’ನಲ್ಲಿ, “ಈ ಜಗತ್ತಿನಿಂದ ನೀವು ಏನಾದರೂ ಒಂದನ್ನು ಇಲ್ಲವಾಗಿಸಲು ಬಯಸುವುದಾದರೆ ಅದು ಯಾವುದು?” ಎಂದು ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿದ್ದ ಡಾ.ಉಪಾಧ್ಯ, ತಮ್ಮ ಖಾತೆಯಿಂದ “ಮುಸ್ಲಿಂ ಕಮ್ಯೂನಿಟಿ” ಎಂದು ಪ್ರಚೋದನಕಾರಿಯಾಗಿ ಉತ್ತರಿಸಿದ್ದರು. ಇದರ ಸ್ಕ್ರೀನ್‌ಶಾಟ್ ಸಾಮಾಜಿಕ ತಾಣಗಳಲ್ಲಿ ವೈರಲಾಗಿ ದೊಡ್ಡ ವಿವಾದ ಸೃಷ್ಟಿಯಾಗಿತ್ತು.

Advertisements

ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್‌ನ ಉಸ್ತುವಾರಿ ಪೊಲೀಸ್ ಉಪನಿರೀಕ್ಷಕ (ನಿಸ್ತಂತು) ಅಜ್ಮಲ್ ಇಬ್ರಾಹಿಂ ಇ.ಎ. ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಭಾರತೀಯ ನಾಗರಿಕ ಸಂಹಿತೆ ಕಲಂ 196, 353ರಂತೆ ಪ್ರಕರಣ ದಾಖಲಾಗಿದೆ.

ಡಾ. ಕೀರ್ತನ್ ಉಪಾಧ್ಯ

ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡುವ ಮೂಲಕ ಧರ್ಮ- ಧರ್ಮಗಳ ನಡುವೆ ದ್ವೇಷವನ್ನುಂಟು ಮಾಡಿ, ಕೋಮು ಸೌಹಾರ್ದತೆಗೆ ಧಕ್ಕೆ ತರಲು ಪ್ರಯತ್ನಿಸಿದ ಡಾ.ಉಪಾಧ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ತಿಳಿಸಲಾಗಿದೆ.

ಖಾತೆಯೇ ಡಿಲೀಟ್!

ಡಾ. ಕೀರ್ತನ್ ಉಪಾಧ್ಯ ಅವರ ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತನ್ನ ಕಾಮೆಂಟ್‌ನ ಸ್ಕ್ರೀನ್ ಶಾಟ್ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿ, ವಿವಾದವಾಗುತ್ತಿದ್ದಂತೆಯೇ ಡಾ. ಉಪಾಧ್ಯ ತನ್ನ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ.

“ವೈದ್ಯ ವೃತ್ತಿಯಲ್ಲಿರುವ ವ್ಯಕ್ತಿಯೊಬ್ಬ ಇಂತಹ ಸಮುದಾಯ ದ್ವೇಷದ ಹೇಳಿಕೆ ಕೊಡುವುದು ಖಂಡನೀಯ” ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಾ. ಕೀರ್ತನ್ ಉಪಾಧ್ಯ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜನರು ಕರ್ನಾಟಕ ಡಿಜಿಪಿ ಅವರನ್ನು ಆಗ್ರಹಿಸಿ, ಹಲವರು ಟ್ವೀಟ್ ಮಾಡಿದ್ದಾರೆ.

“ಡಾ. ಕೀರ್ತನ್ ಉಪಾಧ್ಯ ತಾನು ಮಾಡಿದ್ದ ವಿವಾದಾತ್ಮಕ ಟ್ವೀಟ್ ಅನ್ನು ಡಿಲೀಟ್ ಮಾಡಿ ತನ್ನ ಎಕ್ಸ್ ಖಾತೆಯನ್ನೂ ಲಾಕ್ ಮಾಡಿ ಅವರ ಯಾವುದೇ ಟ್ವೀಟ್ ಅನ್ನು ನೋಡಲು ಆಗದಂತೆ ಮಾಡಿದ್ದಾರೆ” ಎಂದು ಆಲ್ಟ್‌ನ್ಯೂಸ್‌ನ ಪತ್ರಕರ್ತ ಮೊಹಮ್ಮದ್ ಝುಬೇರ್ ಹೇಳಿದ್ದಾರೆ.

ಡಾ. ಕೀರ್ತನ್ ಉಪಾಧ್ಯ ಅವರು ಇನ್ನೊಂದು ಟ್ವೀಟ್ ಮಾಡಿ ಯಾರೋ ತನ್ನ ಖಾತೆಯನ್ನು ಹ್ಯಾಕ್ ಮಾಡಿ ಅಂತಹ ಟ್ವೀಟ್ ಮಾಡಿದ್ದಾರೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

“ಡಾ. ಕೀರ್ತನ್ ಉಪಾಧ್ಯ ಈ ಹಿಂದೆಯೂ ಇದೇ ರೀತಿಯ ಇಸ್ಲಾಂ ದ್ವೇಷಿ ಟ್ವೀಟ್ ಮಾಡಿದ್ದಾರೆ” ಎಂದು ಜನ ಅವರ ಈ ಹಿಂದಿನ ಟ್ವೀಟ್‌ಗಳ ಸ್ಕೀನ್‌ಶಾಟ್‌ಗಳನ್ನು ಶೇರ್ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X