ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ, ಸಾರ್ವಜನಿಕ ಆಸ್ಪತ್ರೆ ಐಸಿಟಿಸಿ ವಿಭಾಗ ವತಿಯಿಂದ, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನೆಮ್ಮನಹಳ್ಳಿ ಗ್ರಾಮದಲ್ಲಿ ಸಮುದಾಯ ಆಧಾರಿತ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ, ಈ ದಿನ ನೆಮ್ಮನಹಳ್ಳಿ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿದ್ದು ಕಾಡಂಚಿನ ಗ್ರಾಮದ ಜನರ ಆರೋಗ್ಯ ವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವುದು ಅರ್ಥಪೂರ್ಣ. ನಾವು ಇಂದು 2ನೇ ಬಾರಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ. ಈ ಶಿಬಿರದಲ್ಲಿ ಕಣ್ಣಿನ ಪರೀಕ್ಷೆ, ಮಧುಮೇಹ ಮತ್ತು ರಕ್ತದೊತ್ತಡ, ಐಸಿಟಿಸಿ ರಕ್ತ ಪರೀಕ್ಷೆ, , ಕಫ ಪರೀಕ್ಷೆ ತಪಾಸಣೆ ಮಾಡಲಾಗುತ್ತದೆ.
ಸುತ್ತಮುತ್ತಲ ಗ್ರಾಮದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಕಾರ್ಯಕ್ರಮಗಳು ಹೆಚ್ಚಿನದಾಗಿ ಆಗಬೇಕು ಮತ್ತು ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕ್ಯಾನರ್ ಆರೋಗ್ಯ ಶಿಬಿರಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸುತ್ತೇವೆ ಎಂದರು.

ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಶೇಖರ್ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ನೆಮ್ಮನಹಳ್ಳಿ ಗ್ರಾಮದಲ್ಲಿ ಶಿಬಿರವನ್ನು ನಡೆಸಲು ಕೋರಿದ್ದೆವು. ಕಾರಣ ನೆಮ್ಮನಹಳ್ಳಿ ಗ್ರಾಮದ ಜನರಿಗೆ ಒಳ್ಳೆಯ ಆರೋಗ್ಯವನ್ನು ಒದಗಿಸುವುದು ಮತ್ತು ಜನರಿಗೆ ಆರೋಗ್ಯ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಗ್ರಾಮವನ್ನು ಆಯ್ಕೆ ಮಾಡಲಾಗಿದೆ. ಆದುದರಿಂದ, ಗ್ರಾಮದ ಹೆಚ್ಚಿನ ಜನರು ಭಾಗವಹಿಸಿ ಶಿಬಿರವನ್ನುವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವದಾಸ್ ಮಾತನಾಡಿ, ಆರೋಗ್ಯವೇ ಭಾಗ್ಯ, ಎಲ್ಲರೂ ಆರೋಗ್ಯವಾಗಿರಿ. ನಿಮ್ಮ ಆರೋಗ್ಯ ನಿಮ್ಮ ಕೈನಲಿ. ನಮ್ಮ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಿರುವುದು ತುಂಬಾ ಸಂತೋಷಕರ ವಿಷಯ ಎಂದರು.
ಈ ವಿಶೇಷ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸಾಗಡೆ ಗ್ರಾಮ ಪಂಚಾಯತಿ ಸಿಬ್ಬಂದಿಗಳ ಲಂಚದಾಹ; ‘ಇ-ಸ್ವತ್ತಿ’ಗಾಗಿ ಅಲೆದಾಟ
ಕಾರ್ಯಕ್ರಮದಲ್ಲಿ ದಂತ ತಜ್ಞರಾದ ಡಾ. ಪೂರ್ಣಿಮಾ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭಾಗ್ಯ, ಪಂಚಾಯಿತಿ ಸದಸ್ಯರಾದ, ನಾಗೇಂದ್ರ , ನಾಗ ನಾಯ್ಕ, ಬೊಮ್ಮ, ವೈದ್ಯಾಧಿಕಾರಿ ಡಾ. ಹೇಮಲತಾ , ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ ಶರಣಪ್ಪ, ರವಿರಾಜ್, ನಾಗರಾಜು, ಉಮೇಶ್, ಮಹೇಶ್, ಲೋಲಾಕ್ಷಿ , ಮಹದೇವ್ ಜಲಜ, ಜಯಲಕ್ಷ್ಮಿ, ಗಿರೀಶ್, ಆಶಾ ಕಾರ್ಯಕರ್ತೆಯರು ಗ್ರಾಮದ ಮುಖಂಡರು, ಗ್ರಾಮಸ್ಥರು ಸೇರಿದಂತೆ ಇನ್ನಿತರರು ಇದ್ದರು.