ಕುಂಬಾರರ ನಿಗಮ ಸ್ಥಾಪಿಸಿ 100 ಕೋಟಿ ಅನುದಾನ ನೀಡಲು ಸಮುದಾಯದವರ ಆಗ್ರಹ

Date:

ಕೋಲಾರ: ಕರ್ನಾಟಕದಲ್ಲಿ ಬಸವಣ್ಣನ ಬಳಿಕ ವಚನ ಕ್ರಾಂತಿ ನಿರ್ಮಿಸಿದ ದಾರ್ಶನಿಕ ಯುಗಪುರುಷ ಸರ್ವಜ್ಞ ಅವರು ಒಂದು ದಿನಕ್ಕೆ ಸರ್ವಜ್ಞ ಆದವರಲ್ಲ ನಿತ್ಯ ವಿಷಯ ಕಲೆಹಾಕಿ ಒಂದು ದಿನ ಸರ್ವವನ್ನೂ ಬಲ್ಲವರಾದರು ಎಂದು ಉಪವಿಭಾಗಾಧಿಕಾರಿ ಜಂಬಗಿ ರೇಣುಕ ಪ್ರಸಾದ್ ದಿಲೀಪ್ ತಿಳಿಸಿದರು.

- Advertisement -

ನಗರದ ಕನ್ನಡ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಜಿಲ್ಲಾ ಕುಂಬಾರರ ಸಂಘದ ಆಶ್ರಯದಲ್ಲಿ ನಡೆದ ಸಂತ ಸರ್ವಜ್ಞ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸರ್ವಜ್ಞ ಜನಸಾಮಾನ್ಯರಿಗೆ ಅರ್ಥವಾಗುವ ರೀತಿ ವಚನ ರಚಿಸಿದ್ದಾರೆ. ಒಂದು ಜಾತಿ ಸಮುದಾಯಕ್ಕೆ ಅವರು ಸೀಮಿತವಾದವರಲ್ಲ. ಅವರ ವಚನ ನೀತಿ ಮಾರ್ಗದರ್ಶನವನ್ನು ಜೀವನದಲ್ಲಿ ಅಳವಡಿಸಿಕೊಂಡ ಸಮಾಜಕ್ಕೆ ಮಾದರಿಯಾಗಬೇಕು ಎಂದರು ಕುಂಬಾರ ಸಮುದಾಯದವರು ತಮ್ಮ ಬೇಡಿಕೆ ಸಮಸ್ಯೆ ಹೇಳಿಕೊಂಡಿದ್ದಾರೆ ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದು ಈಡೇರಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಯಾವುದೇ ಸಮುದಾಯ ಸೀಮಿತ ಉದ್ದೇಶದ ರಾಜಕೀಯ ಬಿಡಬೇಕು ವೈಮನಸ್ಯ ಬಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು ವಿದ್ಯಾಭ್ಯಾಸಕ್ಕೆ ಆದ್ಯತೆ ಕೊಡಬೇಕು ಎಂದು ಕಿವಿಮಾತು ಹೇಳಿದರು.

ಸಂತ ಸರ್ವಜ್ಞ ಜಯಂತ್ಯುತ್ಸವ ಆಚರಣೆ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಸಮುದಾಯದ ಮುಖಂಡ ಕಲ್ಲಂಡೂರು ಡಾ.ಕೆ.ನಾಗರಾಜ್ ಮಾತನಾಡಿ ಕುಂಬಾರರ ಸಮಾಜ ಒಂದುಕಡೆ ಸೇರಲು ಅತ್ಯುತ್ತಮ ವೇದಿಕೆ ಸರ್ವಜ್ಞ ಜಯಂತಿ ದುರದೃಷ್ಟಕರ ಸಂಗತಿ ಎಂದರೆ ನಮ್ಮದು ಸಣ್ಣ ಸಮಾಜವೆಂದು ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ಬರುವುದಿಲ್ಲ‌ ಸಮುದಾಯದ ಮತಗಳು ಕಡಿಮೆ ಇರುವುದರಿಂದ ಪ್ರಯೋಜನವಿಲ್ಲ ಎಂಬುದು ಅವರ ಭಾವನೆ ಆಗಿರಬಹುದು ಎಂದು ಬೇಸರ ವ್ಯಕ್ತಪಡಿಸಿದರು.

ಹೀಗಾದರೆ ನಾವು ನಮ್ಮ ಸಮಾಜದ ಕಷ್ಟಸುಖಗಳನ್ನು ಯಾರ ಬಳಿ ಹೇಳಿಕೊಳ್ಳುವುದು ಎಂದು ಪ್ರಶ್ನಿಸಿದರು. ಶೈಕ್ಷಣಿಕವಾಗಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ನಮ್ಮ ಸಮುದಾಯ ಬಹಳ ಹಿಂದೆ‌ ಉಳಿದಿದೆ. ಹೀಗಾಗಿ ಸರ್ಕಾರವು ಕುಂಬಾರರ ನಿಗಮ ಮಂಡಳಿ ಮಾಡಿ ಕನಿಷ್ಠ ೧೦೦ ಕೋಟಿ ಅನುದಾನ ಕೊಡಬೇಕು. ಈ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಕುಂಬಾರಿಕೆ ವೃತ್ತಿ ಮಾಡುವವರಿಗೆ ಪ್ರೋತ್ಸಾಹ ನೀಡಬೇಕು ಎಂದರು.

ವಿದ್ಯಾರ್ಥಿಗಳಿಗೆ ಹಾಗೂ ದುಡಿಯುವ ಮಹಿಳೆಯರಿಗೆ ಹಾಸ್ಟೆಲ್ ಅಗತ್ಯವಿದೆ. ಹಾಸ್ಟೆಲ್ ನಿರ್ಮಿಸಬೇಕು ಕುಂಬಾರಿಕೆಗೆ ಕೆರೆ ಮೀಸಲಿಡಬೇಕು ಈ ಬಗ್ಗೆ ಪಿಡಿಒಗಳಿಗೆ ಮೇಲಧಿಕಾರಿಗಳು ಸೂಚನೆ ಕೊಡಬೇಕು ಎಂದು ಅವರು ಬೇಡಿಕೆ ಇಟ್ಟರು.

ಸರ್ವಜ್ಞ ಉದ್ಯಾನದಲ್ಲಿ ಸರ್ವಜ್ಞನ ಮೂರ್ತಿ ಇದೆ ಈಚೆಗೆ ಮರಬಿದ್ದು ಚಾವಣಿ ಮುರಿದು ಹೋಗಿದೆ ಸುತ್ತ ಸ್ವಚ್ಛತೆಯೂ ಇಲ್ಲ ಈ ಸಂಬಂಧ ಕ್ರಮ ವಹಿಸಿ ಎಂದು ಮನವಿ ಮಾಡಿದರು.

ಜಿಲ್ಲಾ ಕುಂಬಾರರ ಸಂಘದ ಕಾರ್ಯದರ್ಶಿ ರೆಡ್ಡಪ್ಪ ಮಾತನಾಡಿ ಸರ್ವಜ್ಞ ಎಂದರೆ ಎಲ್ಲಾ ವಿಷಯ ತಿಳಿದವರು. ಅನ್ಮದೇವರ ಮುಂದೆ ಇನ್ನು ದೇವರು ಉಂಟೆ ಎಂಬ ವಚನ ನೆನಪಿಸಿದರು ಆಡು ಮುಟ್ಟದ ಸೊಪ್ಪಿಲ್ಲ ಸರ್ವಜ್ಞ ಹೇಳದ ವಿಷಯವಿಲ್ಲ ಕನ್ನಡಕ್ಕೆ ಅಪಾರ ಕೊಡುಗೆ ನೀಡಿದ್ದು ಅವರು ಮತ್ತೆ ಹುಟ್ಟಿ ಬರಬೇಕು ಎಂದರು.

ಕುಂಬಕಲಾ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ.ಶ್ರೀನಿವಾಸ್ ಮಾತನಾಡಿ ಜಿಲ್ಲೆಯಲ್ಲಿ ಕುಂಬಾರ ಸಮುದಾಯದ ೧೬ ಸಾವಿರ ಜನಸಂಖ್ಯೆ ಇದೆ ಸರ್ವಜ್ಞ ‌ಜಯಂತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದರೆ ಶಾಸಕರು ಹಾಗೂ ಜನಪ್ರತಿನಿಧಿಗಳು ಬರುತ್ತಾರೆ ಎಂದು ತಿಳಿಸಿದರು .

ಇದನ್ನು ಓದಿದ್ದೀರಾ.? ಸವಿತಾ ಸಮಾಜದ ಬಂಧುಗಳಿಗೆ ನಿಗಮದ ಸೌಲಭ್ಯಗಳು ಕುರಿತಂತೆ ಅರಿವು ಕಾರ್ಯಕ್ರಮ

ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಕಲ್ಲಂಡೂರು ಶ್ರೀನಿವಾಸಪ್ಪ, ಕಾರ್ಯದರ್ಶಿ ರೆಡ್ಡಪ್ಪ, ನಾಗೇಶ್, ಈರಣ್ಣ, ಸರೋಜಾ ಶ್ರೀನಿವಾಸ್, ರಮೇಶ್, ಬಾಲಕೃಷ್ಣ, ನಂದೀಶ್, ಶಿವಪ್ರಸಾದ್, ರಾಜಣ್ಣ, ಕಲ್ಲಂಡೂರು ನಾರಾಯಣಸ್ವಾಮಿ, ನಾಗೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...