ಮೈಸೂರು | ಮದ್ದೂರಿನಲ್ಲಿ ಮುಸ್ಲಿಮರ ನಿಂದಿಸಿದ ಜ್ಯೋತಿ ವಿರುದ್ಧ ಐಜಿಪಿಗೆ ದೂರು

Date:

Advertisements

ಮಂಡ್ಯ ಜಿಲ್ಲೆ, ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟದ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರದವರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದ ಜ್ಯೋತಿ ಎಂಬ ಮಹಿಳೆ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಮೈಸೂರಿನಲ್ಲಿ ಐಜಿಪಿಯವರಿಗೆ ದೂರು ನೀಡಲಾಗಿದೆ.

ಮೈಸೂರು ನಗರ 12ನೇ ವಾರ್ಡ್ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಜುನೇದ್ ಎಂಬುವವರು ನೀಡಿದ ದೂರಿನಲ್ಲಿ ಮಂಡ್ಯ ಜಿಲ್ಲೆ, ಮದ್ದೂರಿನಲ್ಲಿ ಸೆ.8 ರಂದು ಗಣಪತಿ ವಿಸರ್ಜನಾ ಸ್ಥಳದಲ್ಲಿ ಕಲ್ಲು ತೂರಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ನಂತರ ನಡೆದ ಬಿಜೆಪಿ ಮತ್ತು ಸಂಘ ಪರಿವಾರದ ಪ್ರತಿಭಟನಾ ಮೆರವಣಿಯಲ್ಲಿ ಜ್ಯೋತಿ ಎಂಬ ಮಹಿಳೆಯು ಮುಸ್ಲಿಮರ ವಿರುದ್ಧ ಅತ್ಯಂತ ತುಚ್ಛಪದಗಳಿಂದ ನಿಂದನೆ ಮಾಡಿ ಸಮುದಾಯಕ್ಕೆ ಅಪಮಾನ ಮಾಡಿದ್ದು, ಭಯದ ವಾತಾವರಣ ಉಂಟು ಮಾಡಿದ್ದಾರೆ ಇವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕೋರಿದ್ದಾರೆ.

ಈ ವಿಶೇಷ ಸುದ್ದಿ ಓದಿದ್ದೀರಾ? ಮಂಡ್ಯ | ‘ಸ್ವರಾಜ್ ಉತ್ಸವ’ : ವಿಷಯಾಧಾರಿತ ಸಂವಾದ, ಚರ್ಚೆ, ಪ್ರದರ್ಶನ

ಸದರಿ ಪ್ರತಿಭಟನಾ ಮೆರವಣಿಗೆಯಲ್ಲಿ ಮುಸ್ಲಿಮರ ವಿರುದ್ಧ ಸಾರ್ವಜನಿವಾಗಿ ಅವಾಚ್ಯ ಶಬ್ದಗಳ ಬಳಕೆಯಿಂದ ಮುಸ್ಲಿಮ್ ಸಮುದಾಯದವರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇದರಿಂದಾಗಿ, ಕಾನೂನು ಮತ್ತು ಸುವ್ಯವಸ್ಥೆಗೂ ಧಕ್ಕೆ ಉಂಟಾಗಿದೆ. ಜನರಲ್ಲಿ ಭಯ ಹಾಗೂ ಗೊಂದಲ ಸೃಷ್ಟಿಯಾಗಿದೆ. ಇಂತಹ ಕೃತ್ಯವು ಸಾರ್ವಜನಿಕ ಶಾಂತಿಗೆ ಭಂಗ ತಂದಿದ್ದು, ಮೇಲ್ಕಂಡ ಕಲ್ಲು ತೂರಾಟ ನಡೆಸಿದವರ ಮತ್ತು ಮುಸ್ಲಿಮರಿಗೆ ಅವಾಚ್ಯ ಶಭ್ದಗಳಿಂದ ನಿಂದನೆ ಮಾಡಿದ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಜುನೇದ್ ಒತ್ತಾಯಿಸಿದ್ದಾರೆ.

ವಿಶೇಷ ವಿಡಿಯೋ ನೋಡಿ : https://youtu.be/A4kqUxXWMIw?si=9rHKSUllq1fU4JDi

ದೂರು ನೀಡುವಾಗ ಕಾಂಗ್ರೆಸ್ ಮುಖಂಡರಾದ ನಸ್ರುಲ್ಲಾ, ಮೈನಾರಿಟಿ ವಿಭಾಗದ ಝಬಿ, ಸೈಯದ್ ಫಾರೂಖ್, ಮೊಹಮ್ಮದ್ ಸಲೀಂ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X