ಮಂಡ್ಯ | ಅರ್ಹ ಮತದಾರರ ಹಕ್ಕು ರಕ್ಷಣೆಗೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಮಗ್ರ ಬದಲಾವಣೆ ಅಗತ್ಯ: ಒಕ್ಕೂಟದ ಆಗ್ರಹ

Date:

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಜಾತ್ಯಾತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶನಿವಾರ ಮಂಡ್ಯದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು.

- Advertisement -

ದೇಶದ ಪ್ರಜಾಪ್ರಭುತ್ವದ ಅಡಿಪಾಯವಾದ ಮತದಾನದ ಹಕ್ಕನ್ನು ರಕ್ಷಿಸುವುದು ಸರ್ಕಾರ ಹಾಗೂ ಚುನಾವಣಾ ಆಯೋಗದ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ, Special Intensive Revision (SIR) ಹೆಸರಿನಲ್ಲಿ ಕೈಗೊಳ್ಳಲಾಗುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯು ಬಡವರು, ಕಾರ್ಮಿಕರು, ವಲಸೆ ಕಾರ್ಮಿಕರು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಹಾಗೂ ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಒಕ್ಕೂಟ ಆತಂಕ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಿಹಾರ ರಾಜ್ಯದಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆದಿರುವ ಕುರಿತು ವರದಿಗಳು ಬಂದಿವೆ. ಇದೇ ಮಾದರಿಯ ಪ್ರಕ್ರಿಯೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಿದರೆ ದಾಖಲೆಗಳ ಕೊರತೆ, ಸ್ಥಳಾಂತರ, ಅನಕ್ಷರತೆ ಹಾಗೂ ಆಡಳಿತಾತ್ಮಕ ತೊಂದರೆಗಳಿಂದ ಅನೇಕ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಅಪಾಯವಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತದ ಸಂವಿಧಾನವು 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ನೀಡಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಯಾವುದೇ ಅರ್ಹ ಮತದಾರರನ್ನು ಅನ್ಯಾಯವಾಗಿ ಪಟ್ಟಿಯಿಂದ ಕೈಬಿಡಬಾರದು ಎಂದು ಒತ್ತಾಯಿಸಲಾಗಿದೆ. ಮತದಾರರ ಹೆಸರುಗಳನ್ನು ತೆಗೆದುಹಾಕುವ ಮುನ್ನ ಸಮಗ್ರ ಪರಿಶೀಲನೆ ನಡೆಸಿ, ಸಂಬಂಧಪಟ್ಟವರಿಗೆ ಸಮರ್ಪಕ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.

ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಕೇವಲ ಒಂದು ಹಕ್ಕು ಮಾತ್ರವಲ್ಲ, ಅದು ನಾಗರಿಕರ ಮೂಲಭೂತ ರಾಜಕೀಯ ಹಕ್ಕಾಗಿದೆ. ಯಾವುದೇ ಆಡಳಿತಾತ್ಮಕ ಕ್ರಮದಿಂದ ಅರ್ಹ ಮತದಾರರು ತಮ್ಮ ಹಕ್ಕು ಕಳೆದುಕೊಳ್ಳದಂತೆ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಎಸ್‌ಐಆರ್ ವಿರೋಧಿ ಜಾತ್ಯಾತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಮುನ್ನ ಚುನಾವಣಾ ಆಯೋಗದ ಮ್ಯಾನ್ಯುಯಲ್‌ನಲ್ಲಿ ಉಲ್ಲೇಖಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಸಮಗ್ರ ಮತ್ತು ಜನಸ್ನೇಹಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿವಿಧ ಜನಪರ ಸಂಘಟನೆಗಳು ಮತ್ತು ನಾಗರಿಕ ಹೋರಾಟಗಾರರು ಒತ್ತಾಯಿಸಿದ್ದಾರೆ.

ಪ್ರತಿ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ವ್ಯಾಪ್ತಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಬಹಿರಂಗವಾಗಿ ಪ್ರಕಟಿಸಿ, ಸಾರ್ವಜನಿಕ ಪರಿಶೀಲನೆಗೆ ಒಳಪಡಿಸಬೇಕು. ಮುಕ್ತ ಹಾಗೂ ಪಾರದರ್ಶಕ ರೀತಿಯಲ್ಲಿ ಎಲ್ಲರ ಸಮ್ಮುಖದಲ್ಲಿ ತಿದ್ದುಪಡಿಗಳನ್ನು ನಡೆಸಿ ನಂತರವೇ ಅಂತಿಮ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಎಸ್‌ಐಆರ್ (Special Intensive Revision) ಪ್ರಕ್ರಿಯೆಯನ್ನು ಗಡಿಬಿಡಿಯಲ್ಲಿ ನಡೆಸಬಾರದು. ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ, ಕರಡು ಪಟ್ಟಿ ತಯಾರಿ, ಸಾರ್ವಜನಿಕ ಆಕ್ಷೇಪಣೆಗಳ ಸ್ವೀಕಾರ ಹಾಗೂ ಅಂತಿಮ ಪಟ್ಟಿ ಪ್ರಕಟಣೆಗಾಗಿ ಕನಿಷ್ಠ ಒಂದು ವರ್ಷದ ಅವಧಿಯನ್ನು ನಿಗದಿಪಡಿಸಬೇಕು. ಕರಡು ಪಟ್ಟಿ ಪ್ರಕಟಿಸಿದ ನಂತರ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಪರಿಶೀಲಿಸಲು ಕನಿಷ್ಠ ಆರು ತಿಂಗಳ ಕಾಲಾವಕಾಶ ನೀಡಬೇಕು ಎಂದು ತಿಳಿಸಲಾಗಿದೆ.

ರಾಜ್ಯದ ಒಬ್ಬ ಅರ್ಹ ಮತದಾರರೂ ತಮ್ಮ ಜನ್ಮಸಿದ್ಧ ಮತದಾನದ ಹಕ್ಕನ್ನು ಕಳೆದುಕೊಳ್ಳದಂತೆ ರಾಜ್ಯ ಸರ್ಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳಿಗಾಗಿ ರಾಜ್ಯ ಚುನಾವಣಾ ಆಯೋಗ ತಯಾರಿಸುವ ಮತದಾರರ ಪಟ್ಟಿಯನ್ನು ವೈಜ್ಞಾನಿಕ ಹಾಗೂ ಜನಸ್ನೇಹಿ ವಿಧಾನದಲ್ಲಿ ಪರಿಷ್ಕರಿಸಬೇಕು ಎಂದು ಮನವಿ ಮಾಡಲಾಗಿದೆ.

ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ‘ವಿಶೇಷ ಗ್ರಾಮ ಸಭೆ’ ಮತ್ತು ‘ವಾರ್ಡ್ ಸಭೆ’ಗಳನ್ನು ನಡೆಸಿ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ ನಡೆಸಬೇಕು. ಪರಿಶೀಲನೆಯ ಬಳಿಕ ಕರ್ನಾಟಕದ ಪಕ್ಕಾ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ ಪ್ರತಿಯೊಬ್ಬ ಅರ್ಹ ನಾಗರಿಕರ ಹಕ್ಕನ್ನು ರಕ್ಷಿಸುವ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ವಿಶೇಷ ಗ್ರಾಮ ಸಭೆಗಳಲ್ಲಿ ಪರಿಶೀಲನೆಗೊಂಡು ದೃಢೀಕರಣ ಪಡೆದ ಮತದಾರರಿಗೆ ಅಗತ್ಯ ದಾಖಲೆಗಳ ಸಮೇತ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಬೇಕು. ದಾಖಲೆಗಳ ಕೊರತೆಯಿರುವ ನಾಗರಿಕರಿಗೆ ತಕ್ಷಣವೇ ‘ವಾಸ ದೃಢೀಕರಣ ಪತ್ರ’ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.

ಈ ವಿಡಿಯೋ ವೀಕ್ಷಿಸಿ:https://youtu.be/AZ7t09oFqBM?si=zbu7mUsSm2Z7zX6L

ಇದೇ ವೇಳೆ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ‘ಮತದಾರರ ನೆರವು ಕೇಂದ್ರ’ಗಳನ್ನು ಆರಂಭಿಸಿ, ನಾಗರಿಕರಿಗೆ ಅಗತ್ಯ ದಾಖಲೆಗಳನ್ನು ತ್ವರಿತವಾಗಿ ಹಾಗೂ ತೊಂದರೆ ಇಲ್ಲದೆ ಒದಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?ಮೈಸೂರಿನಲ್ಲಿ ಎಸ್‌ಐಆರ್ ವಿರೋಧಿ ಒಕ್ಕೂಟದ ಪ್ರತಿಭಟನೆ: ಮತದಾರರ ಹಕ್ಕುಗಳ ರಕ್ಷಣೆಗೆ ನಾಲ್ಕು ಪ್ರಮುಖ ಆಗ್ರಹಗಳು

ಪ್ರತಿಭಟನೆಯಲ್ಲಿ ದಸಂಸ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು, ಎ ಐ ಎಲ್ ಯು ಜಿಲ್ಲಾಧ್ಯಕ್ಷ ಬಿ.ಟಿ. ವಿಶ್ವನಾಥ್. ಎಸ್ಡಿಪಿಐ ಜಿಲ್ಲಾಧ್ಯಕ್ಷ ಮೊಕ್ತರ್ ಅಹಮದ್, ಜಿಲ್ಲಾಧ್ಯಕ್ಷ ಕೆಂಪು ಗೌಡ, ನಿವೃತ್ತ ಪ್ರಾಂಶುಪಾಲ ಎಂ.ವಿ. ಕೃಷ್ಣ, ಸಿ. ಕುಮಾರಿ,
ಹಿಂದುಳಿದ ವರ್ಗಗಳ ವೇದಿಕೆಯ ಎಲ್. ಸಂದೇಶ್, ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಜಿ. ಪೂರ್ಣಿಮ, ವಕೀಲ ಚೀರನಹಳ್ಳಿ ಲಕ್ಷ್ಮಣ್, ಜಿ.ವಿ. ಮುತ್ತಯ್ಯ, ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಸಿದ್ದರಾಜು, ಭೂಮಿ-ವಸತಿ ಹಕ್ಕು ವಂಚಿತರ ಸಮಿತಿಯ ಅಂಜಲಿ, ಮಹಿಳಾ ಮುನ್ನಡೆಯ ಬಿ.ಎಸ್. ಶಿಲ್ಪಾ, ನರಸಿಂಹ ಮೂರ್ತಿ, ಪಿ. ನಾರಾಯಣಸ್ವಾಮಿ, ರಮಾನಂದ, ಇಂಪಾನ, ಶಿವಣ್ಣ, ಕೃಷ್ಣಪ್ಪ ಸೇರಿದಂತೆ ಇನ್ನಿತರೇ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ ಎಸಿಪಿ ವಿವೇಕ್ ಭಗತ್ FIR!

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...