ಮಂಡ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ: ಸಚಿವ ಎನ್. ಚಲುವರಾಯಸ್ವಾಮಿ

Date:

ಮಂಡ್ಯ ಜಿಲ್ಲೆ ದೇಶವನ್ನೇ ಮುನ್ನಡೆಸುವ ನಾಯಕರನ್ನು ನೀಡಿದ ಪುಣ್ಯಭೂಮಿಯಾಗಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

- Advertisement -

ಮಂಡ್ಯ ತಾಲ್ಲೂಕಿನ ತಗ್ಗಹಳ್ಳಿಯಲ್ಲಿ ಜೆಕೆ ಟೈರ್ ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದ ನಿರ್ಮಿಸಲಾದ ಸರ್ಕಾರಿ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳು, ಶಿಕ್ಷಣದ ಮಹತ್ವ ಹಾಗೂ ಸರ್ಕಾರದ ಜನಪರ ಯೋಜನೆಗಳ ಕುರಿತು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಪ್ರತಿ ಕುಟುಂಬಕ್ಕೆ ₹2,000 ಆರ್ಥಿಕ ನೆರವು, ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಅಕ್ಕಿ ವಿತರಣೆಯಂತಹ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗುತ್ತಿವೆ ಎಂದು ತಿಳಿಸಿದರು. ತಾಂತ್ರಿಕ ಕಾರಣಗಳಿಂದ ಕೆಲವರಿಗೆ ಸೌಲಭ್ಯ ತಲುಪಲು ವಿಳಂಬವಾಗಿರಬಹುದು, ಆದರೆ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಯೋಜನೆಗಳ ಲಾಭ ತಲುಪುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕಳೆದ ಮೂರು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸುಮಾರು ₹12 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಎಂದು ತಿಳಿಸಿದ ಸಚಿವರು, ಕೃಷ್ಣರಾಜ ಸಾಗರ ಅಣೆಕಟ್ಟಿನ ನವೀಕರಣ ಕಾಮಗಾರಿ ಹಾಗೂ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಹೊಸ ವೇಗ ನೀಡಿವೆ ಎಂದರು.

1939ರ ಬಳಿಕ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ಸಂಶೋಧನೆ ಮತ್ತು ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಒತ್ತು ನೀಡಲಾಗುತ್ತಿದೆ ಎಂದು ಹೇಳಿದ ಅವರು, ಕೃಷಿ ವಿದ್ಯಾಲಯ ಮಂಡ್ಯಕ್ಕೆ ಬಂದಿರುವುದು ಜಿಲ್ಲೆಯ ಭವಿಷ್ಯಕ್ಕೆ ಮಹತ್ವದ ಮೈಲಿಗಲ್ಲಾಗಿದೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರಿ ಶಾಲೆಗಳ ಶಿಕ್ಷಣದ ಮಹತ್ವವನ್ನು ಒತ್ತಿಹೇಳಿದ ಸಚಿವರು, “ಇಂದು ಜಿಲ್ಲೆಯನ್ನು ಮುನ್ನಡೆಸುತ್ತಿರುವ ಜಿಲ್ಲಾಧಿಕಾರಿ, ಎಸ್‌ಪಿ ಹಾಗೂ ಸಿಇಒ ಅವರೂ ಸರ್ಕಾರಿ ಶಾಲೆಯಲ್ಲೇ ಶಿಕ್ಷಣ ಪಡೆದಿದ್ದಾರೆ. ಇಂಗ್ಲಿಷ್ ಕೇವಲ ಸಂವಹನದ ಭಾಷೆ ಮಾತ್ರ. ಜ್ಞಾನ ಮತ್ತು ಸಂಸ್ಕಾರವಿದ್ದರೆ ಯಾರನ್ನೂ ತಡೆಯಲು ಸಾಧ್ಯವಿಲ್ಲ,” ಎಂದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದರು.

ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಟೀಕೆ ಮಾಡುವವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ನಾವು ಯಾರನ್ನಾದರೂ ವಿರೋಧಿಸಲು ಕೆಲಸ ಮಾಡುತ್ತಿಲ್ಲ. ಮಂಡ್ಯದ ಸರ್ವಾಂಗೀಣ ಪ್ರಗತಿಯೇ ನಮ್ಮ ಗುರಿ. ಅಭಿವೃದ್ಧಿ ವಿಚಾರದಲ್ಲಿ ನನ್ನೆದುರು ಬಂದು ವಾದ ಮಾಡಿ ಗೆದ್ದರೆ ನಾನು ಜಾತಿಯನ್ನೇ ಬಿಟ್ಟು ಹೋಗುತ್ತೇನೆ, ಎಂದು ಸವಾಲು ಹಾಕಿದರು.

ಮಂಡ್ಯವನ್ನು ಮೈಸೂರು ಹಾಗೂ ಬೆಂಗಳೂರಿನ ಮಟ್ಟಕ್ಕೆ ಬೆಳೆಸುವ ದೂರದೃಷ್ಟಿ ಸರ್ಕಾರಕ್ಕಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಎಲ್ಲರೂ ರಾಜಕೀಯ ಮರೆತು ಕೈಜೋಡಿಸಬೇಕು ಎಂದು ಸಚಿವರು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?ಕೊಡಗು | ಮೇ.13ರಂದು ವಿರಾಜಪೇಟೆಯ ತೋರದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’

ಕಾರ್ಯಕ್ರಮದಲ್ಲಿ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಜೆಕೆ ಟೈರ್ ಉಪಾಧ್ಯಕ್ಷ ಈಶ್ವರ್ ರಾವ್, ಜಗದೀಶ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಕಾಂಗ್ರೆಸ್ ಮಹಿಳಾ ಮುಖಂಡರಾದ ಪಲ್ಲವಿ, ಯಶೋಧ, ಬಿಇಒ ಮಹಾದೇವು ಸೇರಿದಂತೆ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...