ಇತ್ತೀಚಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಾದ್ಯಾಂತ ಹಾಗೂ ವಿಶೇಷವಾಗಿ ನಗರ ಪ್ರದೇಶದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿದೆ. ದ್ವಿಚಕ್ರ ವಾಹನದ ಮತ್ತು ಹಿಂಬದಿಯ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವುಗಳು ಸಂಭವಿಸಿವೆ.ಆದ್ದರಿಂದ ನವೆಂಬರ್ 01 ರಿಂದ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಆದೇಶ ಹೊರಡಿಸಿದ್ದಾರೆ.
ಸಂಭವಿಸುತ್ತಿರುವ ಅಪಘಾತ ತಡೆಗಟ್ಟಲು ತಡೆಗಟ್ಟಲು ಈ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಇದೇ ನವೆಂಬರ್ 1ರಿಂದ ಹೆಲ್ಮಟ್ ಧರಿಸಿವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ., ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ದ್ವಿಚಕ್ರ ವಾಹನದ ಸವಾರರು ಮತ್ತು ಹಿಂಬದಿಯ ಸವಾರರು ಹೆಲೈಟ್ ಧರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವು ಸಂಭವಿಸುತ್ತಿರುವುದು ಕಂಡು ಬಂದಿರುವುದರಿಂದ ಸಾರ್ವಜನಿಕರ ಅಮೂಲ್ಯವಾದ ಜೀವವನ್ನು ರಕ್ಷಿಸುವ ಹಿತದೃಷ್ಠಿಯಿಂದ ರಾಯಚೂರು ಜಿಲ್ಲೆಯಾದ್ಯಾಂತ ಇದೇ 01 ನವಂಬರ್ 2024 ರಿಂದ ಹೆಲ್ಮಟ್ ಧರಿಸಿವುದನ್ನು ಕಡ್ಡಾಯಗೊಳಿಸಲಾಗಿದೆ ಎಂಬುದನ್ನು ಸಾರ್ವಜನಿಕರ ಗಮನಕ್ಕೆ ತರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ರಸ್ತೆ ಅಪಘಾತಗಳು ಸಂಭವಿಸಿ, ಚಾಲಕರು, ಪ್ರಯಾಣಿಕರು, ಪಾದಚಾರಿಗಳು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಲ್ಲದೇ ಭಾರೀ ಪ್ರಮಾಣದ ಗಾಯಗಳಾಗಿ ದೂರುಗಳು ದಾಖಲಾಗಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದ್ಯಯ್ಯ, ಒಂದು ವೇಳೆ ಹೆಲ್ಮೆಟ್ ಧರಿಸದೇ ವಾಹನಗಳನ್ನು ಚಲಾಯಿಸಿದ್ದಲ್ಲಿ ಕಟ್ಟುನಿಟ್ಟಾಗಿ ಕಾನೂನು ಕ್ರಮವನ್ನು ಜಗಿಸಲಾಗುವುದು. ಸಾರ್ವಜನಿಕರ ಅಮೂಲ್ಯವಾದ ಜೀವವನ್ನು ರಕ್ಷಿಸುವ ಹಿತದೃಷ್ಟಿಯಿಂದ ರಾಯಚೂರು ಜಿಲ್ಲೆಯಾದ್ಯಂತ ನ.1ರಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸಾರ್ವಜನಿಕರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ನಾಗರಿಕರಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಬಗ್ಗೆ ಚಾಲಕರಿಗೆ/ ಪ್ರಯಾಣಿಕರಿಗೆ ಜಾಹೀರಾತುಗಳ ಮೂಲಕ ಮತ್ತು ಪೊಲೀಸರು ಸಂಬಂಧಿಸಿದ ಗಸ್ತಿನಲ್ಲಿ ಸಭೆ ಮಾಡುವ ಮೂಲಕ ಜಾಗೃತಿ ಮೂಡಿಸಲಾಗಿದೆ.
ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಚಾಲಕರ ಮೇಲೆ ಐ.ಎಂ.ವಿ ಕಾಯಿದೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದು, ಹಾಗೂ ಪ್ರಮುಖ ರಸ್ತೆಗಳಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಹಾಗೂ ಅಪಘಾತಗಳು ಹೆಚ್ಚಾಗಿ ಜರುಗುವಂತಹ ಸ್ಥಳಗಳನ್ನು ಗುರುತಿಸಿ ಅಲ್ಲಿ ಚಾಲಕರು ಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವಂತೆ ಸೂಚನಾ ಫಲಕಗಳನ್ನು ಅಳವಡಿಸಿದ್ದರೂ ಸಹ ಚಾಲಕರು ನಿರ್ಲಕ್ಷ್ಯತೆಯಿಂದ ಚಲಾಯಿಸುತ್ತಿದ್ದಾರೆ. ಎಲ್ಲಾ ಪೊಲೀಸ್ ಸಭೆ ಸಮಾರಂಭಗಳಲ್ಲಿ, ಸಂಚಾರ ನಿಯಮಗಳ ಕುರಿತು ಹಮ್ಮಿಕೊಂಡ ಸಭೆಗಳಲ್ಲಿ ವಿಶೇಷವಾಗಿ ಹೆಲ್ಮೆಟ್ ಧರಿಸಲು ತಿಳಿಸಿದರೂ ಸಹ ದ್ವಿಚಕ್ರ ವಾಹನ ಚಲಾಯಿಸುವಂತಹ ಪ್ರಯಾಣಿಕರು ಅದನ್ನು ಪಾಲಿಸದೇ ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸಿ ಸಾವು-ನೋವುಗಳು ಸಂಭವಿಸುತ್ತಿರುವುದು ವರದಿಯಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
