ರೈತರ ಮೇಲೆ ಬಿಜೆಪಿ ಸರ್ಕಾರಗಳ ದಾಳಿ ಖಂಡಿಸಿ; ರೈತ, ಕಾರ್ಮಿಕರ ಹಕ್ಕುಗಳಿಗೆ ಆಗ್ರಹಿಸಿ ಪ್ರತಿಭಟನೆ

Date:

Advertisements

ಸ್ವಾಮಿನಾಥನ್ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನೀಡುತ್ತೇವೆ. ಯುವಜನರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆಂದು 2014ರ ಚುನಾವಣೆಯ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಆದರೆ, ಈಗ ರೈತರ ಮೇಲೆ ದೌರ್ಜನ್ಯ ಎಸಗುತ್ತಿದೆ. ಯುವಜನರನ್ನು ನಿರುದ್ಯೋಗಿಗಳನ್ನಾಗಿಸಿದೆ. ಕಾರ್ಮಿಕರ ಶ್ರಮದ ಲೂಟಿ ನಡೆಯುತ್ತಿದೆ. ರೈತರ ಪ್ರತಿಭಟನೆ ಹತ್ತಿಕ್ಕಲು ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ಆಕ್ರೋಶ ವ್ಯಕ್ತಪಡಿಸಿದೆ.

ಎಂಎಸ್‌ಪಿ ಮತ್ತು ಸಾಲ ಮನ್ನಾಕ್ಕಾಗಿ ಆಗ್ರಹಿಸಿ, ದೆಹಲಿ ಚಲೋಗೆ ಕರೆಕೊಟ್ಟು ದೆಹಲಿಯತ್ತ ಹೊರಟಿದ್ದ ಪಂಜಾಬ್, ಹರಿಯಾಣ ರೈತರ ಮೇಲೆ ಬಿಜೆಪಿ ಸರ್ಕಾರ ನಡೆಸುತ್ತಿರುವ ದಾಳಿ ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. “ರೈತರ ಸಾಲ ಮನ್ನಾ ಮಾಡಬೇಕು. ಎಂಎಸ್‌ಪಿ ಜಾರಿ ಮಾಡಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯಬೇಕು. ಉದ್ಯೋಗ ಸೃಷ್ಟಿ ಮಾಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

“ಪ್ರಧಾನಿ ಮೋದಿ ಮಾತೆತ್ತಿದರೆ, ‘ಸಬ್‌ಕಾ ಸಾಥ್’ ಎನ್ನುತ್ತಾರೆ. ಆದರೆ, ಜನಸಾಮಾನ್ಯರ ಕೊಂಡುಕೊಳ್ಳುವ ಸಾಮಾರ್ಥ್ಯವನ್ನು ಕುಗ್ಗಿಸಿದ್ದಾರೆ. ಆಹಾರ, ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಅನುದಾನಗಳನ್ನು ಕಡಿತ ಮಾಡಿ ಆರೋಗ್ಯ ಮತ್ತು ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಣ ಮಾಡಿದ್ದಾರೆ. ಜನರಿಗೆ ಸರಿಯಾದ ಪ್ರಮಾಣದಲ್ಲಿ ಆಹಾರ ಸಿಗದೆ, ಭಾರತವು ಹಸಿವಿನ ಸೂಚ್ಯಾಂಕದಲ್ಲಿ 111ನೇ ಸ್ಥಾನಕ್ಕೆ ಕುಸಿದಿದೆ. 5 ಟ್ರಿಲಿಯನ್ ಆರ್ಥಿಕತೆ ಸಾಧಿಸಿದ್ದೇವೆ ಎನ್ನುತ್ತಾರೆ. ಆದರೆ, ಭಾರತದಲ್ಲಿ 42.3% ನಿರುದ್ಯೋಗವಿದೆ. ಬಂಡವಾಳ ಹೂಡಿಕೆಯಾಗುತ್ತಿದೆ ಎಂದು ಪ್ರತಿಪಾದನೆ ಮಾಡುವ ಸರ್ಕಾರ 100ಕ್ಕೆ 60% ಗುತ್ತಿಗೆ-ಹೊರಗುತ್ತಿಗೆಯ ಹುದ್ದೆಗಳನ್ನು ಸೃಷ್ಟಿಸುತ್ತಿದೆ. ಕೇಂದ್ರದ ಆರ್ಥಿಕ ನೀತಿಗಳು ಬಡವರ ಭಾರತ ಮತ್ತು ಶ್ರೀಮಂತರ ಭಾರತವನ್ನು ಸೃಷ್ಟಿಸಿ ದೊಡ್ಡ ಪ್ರಮಾಣದ ಆರ್ಥಿಕ ಅಸಮಾನತೆಯ ಕಂದಕವನ್ನು ಸೃಷ್ಟಿಸಿದೆ” ಎಂದು ಕಿಡಿಕಾರಿದ್ದಾರೆ.

Advertisements

skm

“ದೇಶಕ್ಕೆ ಅನ್ನ ನೀಡುವ ರೈತ ಬೆಳೆದ ಬೆಳೆಗಳಿಗೆ ಡಾ. ಸ್ವಾಮಿನಾಥನ್ ಶಿಫಾರಸ್ಸಿನಂತೆ ಬೆಂಬಲ ಬೆಲೆಗೆ ಕಾನೂನು ತರುವ ಬದಲು ರೈತನನ್ನು ಬಲಿ ತೆಗೆದು ಕೊಳ್ಳುತ್ತಿದೆ. ಕೋಮುಭಾವನೆಗಳನ್ನು ಪ್ರಚೋದನೆಗೊಳಿಸಿ ಜನರನ್ನು ಧಾರ್ಮಿಕವಾಗಿ ಕಿತ್ತಾಡುವಂತೆ ಮಾಡಲಾಗುತ್ತಿದೆ. ಸರ್ಕಾರ ತನ್ನ ನೀತಿಗಳನ್ನು ಬದಲಾಯಿಸಬೇಕೆಂದೂ ಒತ್ತಾಯಿಸಿ ದೇಶದ ಎಲ್ಲ ರೈತರು, ಕೂಲಿಕಾರರು, ಕಾರ್ಮಿಕರು ಒಂದಾಗಿ ಚಳುವಳಿ ನಡೆಸುತ್ತಿದ್ದಾರೆ. ಇಂತಹ ಚಳುವಳಿಗಳ ಮೇಲೆ ದೆಹಲಿಯಲ್ಲಿ ಪೊಲೀಸ್ ದಬ್ಬಾಳಿಕೆ ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  1. ಸ್ವಾತಂತ್ರ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಒಕ್ಕೂಟ ರಚನೆ ಮುಂತಾದವುಗಳ ಮೇಲಿನ ಆಕ್ರಮಣವನ್ನು ನಿಲ್ಲಿಸಬೇಕು. ಧರ್ಮ ನಿರಪೇಕ್ಷ (ಜಾತ್ಯಾತೀತ) ಪ್ರಜಾಪ್ರಭತ್ವ, ಗಣತಂತ್ರದ ಸಂವಿಧಾನ ರಕ್ಷಣೆ ಮಾಡಬೇಕು.
  2.  ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರಿಗೆ ಬದುಕಲು ಅವಕಾಶ ನೀಡುವ ನೀತಿಗಳನ್ನು ಜಾರಿಗೆ ತರಬೇಕು.
  3. ರೈಲ್ವೆ, ವಿದ್ಯುತ್ ಒಳಗೊಂಡು ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಮತ್ತು NMP ಯನ್ನೊಳಗೊಂಡಂತೆ ಎಲ್ಲ ಸ್ವರೂಪದ ಖಾಸಗಿಕರಣವನ್ನು ಕೈಬಿಡಬೇಕು. ಸಾರ್ವಜನಿಕ ರಂಗದ ಕೈಗಾರಿಕೆ ಹಾಗೂ ಸೇವೆಗಳನ್ನು ಬಲಪಡಿಸಬೇಕು.
  4. ಡಾ. ಸ್ವಾಮಿನಾಥನ್ ಶಿಫಾರಸ್ಸಿನಂತೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರಚಿಸಬೇಕು.
  5. ಕೃಷಿ ಕಾರ್ಮಿಕರಿಗೆ ಸಮಗ್ರವಾದ ಕಲ್ಯಾಣ ಯೋಜನೆಗಳನ್ನು ರೂಪಿಸಬೇಕು.
  6. ಮನರೇಗಾ ಯೋಜನೆಯನ್ನು 200 ದಿನಗಳಿಗೆ ಹೆಚ್ಚಿಸಿ, 600 ರೂ ಕೂಲಿ ನಿಗದಿ ಮಾಡಿ, ಬಯೋಮೆಟ್ರಿಕ್ ಪದ್ಧತಿಯನ್ನು ಕೈಬಿಡಬೇಕು.
  7. ನ್ಯಾಯಯುತ GST ಪಾಲನ್ನು ರಾಜ್ಯಗಳಿಗೆ ಕೊಡುವ ಮುಖಾಂತರ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಬೇಕು.
  8. ಕನಿಷ್ಟ ವೇತನವನ್ನು ಅಕುಶಲ ಕಾರ್ಮಿಕರಿಗೆ ರೂ 31,000 ಹಾಗು ಹೆಚ್ಚಿನ ಕೌಶಲ್ಯದ ಪ್ರತಿ ಹಂತಕ್ಕೆ 15% ಹೆಚ್ಚಳದೊಂದಿಗೆ ನಿಗದಿಪಡಿಸಬೇಕು.
  9. ಗ್ರಾಹಕ ಬೆಲೆ ಸೂಚ್ಯಾಂಕದ ಪ್ರತಿ ಅಂಶದ ಹೆಚ್ಚಳಕ್ಕೆ ಪ್ರತಿ ದಿನಕ್ಕೆ 6 ಪೈಸೆಗಳ ತುಟ್ಟಿಭತ್ಯೆ ನಿಗದಿಪಡಿಸಬೇಕು. ಬೆಲೆ ಸೂಚ್ಯಾಂಕವನ್ನು ಪ್ರಾಮಾಣಿಕವಾಗಿ ಪ್ರಕಟಿಸಬೇಕು. ಸರ್ವೋಚ್ಚ ನ್ಯಾಯಾಲಯದ ತೀರ್ಪಿನನ್ವಯ ವೈಜ್ಞಾನಿಕ ರೀತಿಯಲ್ಲಿ ಕನಿಷ್ಟ ವೇತನವನ್ನು ನಿಗದಿಪಡಿಸಿ ಸಮರ್ಪಕವಾಗಿ ಜಾರಿಗೊಳಿಸಬೇಕು.
  10.  ನಮ್ಮ ಸಂವಿಧಾನದ ಪರಿಚ್ಛೇದ 39(ಡಿ)ನಲ್ಲಿ ಪ್ರತಿಪಾದಿಸಿರುವ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಖಾತ್ರಿಪಡಿಸಬೇಕು. ಕಡಿಮೆ ವೇತನ ನೀಡುತ್ತಾ ಗುತ್ತಿಗೆ-ಹೊರಗುತ್ತಿಗೆ ಹಾಗೂ ಹಂಗಾಮಿ ನೌಕರರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ಕೊನೆಗಾಣಿಸಬೇಕು.
  11. ಕೇಂದ್ರ-ರಾಜ್ಯ ಸರ್ಕಾರಗಳು, ವಿವಿಧ ಇಲಾಖೆಗಳು, ನಿಗಮ ಮಂಡಳಿ ಆಸ್ಪತ್ರೆ, ಮುನ್ಸಿಪಾಲಿಟಿ, ಖಾಸಗಿ ಕಂಪನಿಗಳಲ್ಲಿ ಗುತ್ತಿಗೆ ಆಧಾರಿತವಾಗಿ ವರ್ಷಗಟ್ಟಲೆಯಿಂದ ದುಡಿಸಿಕೊಳ್ಳುತ್ತಿರುವ ಎಲ್ಲ ಗುತ್ತಿಗೆ ಕಾರ್ಮಿಕರನ್ನು ಖಾಯಂಯಾತಿಗೆ ಶಾಸನ ತರಬೇಕು. ದೇಶದಲ್ಲಿರುವ ಕೋಟ್ಯಾಂತರ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಭಾಗವಾಗಿ ಕನಿಷ್ಠ ಮಾಸಿಕ ಪಿಂಚಣಿ 6,000 ರೂ., ಪಿಎಫ್ ಪಿಂಚಣಿ 10,000ಕ್ಕೆ ಹೆಚ್ಚಿಸಬೇಕು. ಎಲ್ಲ ಅಸಂಘಟಿತ ಕಾರ್ಮಿಕರ ಸಮಗ್ರ ಸಾಮಾಜಿಕ ಭದ್ರತೆಗೆ ಜಿಡಿಪಿಯಲ್ಲಿ 6%ನ್ನು ಮೀಸಲಿರಿಸಬೇಕು.
  12. ಕೇಂದ್ರ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಕಾನೂನು-1996 ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸೆಸ್ ಕಾನೂನು-1996 ಗಳನ್ನು ಪುನರ್ ಸ್ಥಾಪಿಸಬೇಕು.
  13. ಆಹಾರ, ಆರೋಗ್ಯ, ಶಿಕ್ಷಣ ಮತ್ತು ಪೌಷ್ಠಿಕ ಆಹಾರಕ್ಕಾಗಿರುವ ಯೋಜನೆಗಳಾದ ICDS, MDM, NHM, ICPS, SSA, MNREG ಮುಂತಾದ ಯೋಜನೆಗಳನ್ನು ಖಾಯಂ ಮಾಡುವ ಮುಖಾಂತರ ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು.
  14. 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ಕೊಡಲು ಕಾನೂನು ರೂಪಿಸಬೇಕು. NEP ನಿಲ್ಲಿಸಬೇಕು.
  15. 49 ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು, 20 ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರು, ಆಶಾ ಮತ್ತು ಇತರೆ ಸಿಬ್ಬಂದಿಗಳಿಗೆ 31 ಸಾವಿರ ರೂ. ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳು ಹಾಗೂ ಕನಿಷ್ಟ 10 ಸಾವಿರ ರೂ. ಪಿಂಚಣಿ ಕೊಡಬೇಕು.
  16. 29 ಕಾರ್ಮಿಕ ಕಾನೂನುಗಳ ಸಂಹಿತೆಯನ್ನು ಕೈಬಿಟ್ಟು ಕಾರ್ಮಿಕ ಪರವಾದ ನೀತಿಗಳನ್ನು ಜಾರಿ ಮಾಡಬೇಕು.

ಪ್ರತಿಭಟನೆಯಲ್ಲಿ ಸಿಐಟಿಯು ಅಧ್ಯಕ್ಷೆ ವರಲಕ್ಷ್ಮಿ, ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕರ್ನಾಟಕ ಜನಶಕ್ತಿ ಆಧ್ಯಕ್ಷ ನೂರ್ ಶ್ರೀಧರ್, ಯಶವಂತ್ ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X