ಅಮಿತ್ ಶಾ ಹೇಳಿಕೆಗೆ ಖಂಡನೆ; ಜ. 9 ರಂದು ಹುಬ್ಬಳ್ಳಿ-ಧಾರವಾಡ ಬಂದ್

Date:

ಕೇಂದ್ರ ಗೃಹಸಚಿವ ಅಮಿತ್ ಶಾ ಅಂಬೇಡ್ಕರ್ ಕುರಿತು ಅಪಮಾನಕರ ಹೇಳಿಕೆ ನೀಡಿರುವ ಹಿನ್ನೆಲೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಯಶಸ್ವಿ ಆಗಿದೆ. ಅದರಂತೆ ನಾಳೆ ಜನೆವರಿ 8ರಂದು ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ದಲಿತ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳ ವತಿಯಿಂದ ಬಂದ್ ಗೆ ಕರೆ ನೀಡಿದ್ದಾರೆ.

- Advertisement -

ಈಗಾಗಲೇ ದಲಿತಪರ ಸಂಘಟಕರು ಹುಬ್ಬಳ್ಳಿಯ ಜನತಾ ಬಜಾರ್ ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರಿಗಳು, ಕಿರಾಣಿ ಅಂಗಡಿಗಳ ಮಾಲೀಕರಿಗೆ ಗುಲಾಬಿ ಹೂ ನೀಡಿ ಬಂದ್‌’ಗೆ ಸಹಕರಿಸುವಂತೆ ವಿನಂತಿಸಿದ್ದಾರೆ. ಬಂದ್’ಗೆ ಬಿಜೆಪಿಯಿಂದ ವಿರೋಧ ವ್ಯಕ್ತವಾಗಿದೆ. ಈ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯ ಬಿಗಿ ಬಂದೋಬಸ್ತ’ಗೆ ತಯಾರಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಮಿತ್‌ ಶಾ ವಜಾಕ್ಕೆ ಆಗ್ರಹಿಸಿ ಜನವರಿ 9 ರಂದು ಬೆಳಗ್ಗೆ 6 ರಿಂದ ಸಂಜೆ 6 ರ ವರೆಗೆ ಹುಬ್ಬಳ್ಳಿ – ಧಾರವಾಡ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌’ಗೆ 102 ಕ್ಕೂ ಹೆಚ್ಚು ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಶಾಂತಿಯುತವಾಗಿ ಬಂದ್‌ ಆಚರಣೆ ನಡೆಯಲಿದೆ. ಸಂವಿಧಾನ ಮತ್ತು ಸಂವಿಧಾನ ಶಿಲ್ಪಿಯನ್ನು ಗೌರವಿಸುವ ಎಲ್ಲ ಸಮುದಾಯಗಳು ಆಯಾ ಬಡಾವಣೆಗಳಿಂದ ಮೆರವಣಿಗೆ ಮೂಲಕ ಹುಬ್ಬಳ್ಳಿಯ ಚನ್ನಮ್ಮ ವೃತ್ತಕ್ಕೆ ಮತ್ತು ಧಾರವಾಡ ಜುಬ್ಲಿ ವೃತ್ತಕ್ಕೆ ಆಗಮಿಸಲಿವೆ ಎಂದು ದಲಿತಪರ ಸಂಘಟನೆ ಮುಖಂಡ ಗುರುನಾಥ ಉಳ್ಳಿಕಾಶಿ ಹೇಳಿದ್ದಾರೆ.

ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಪತ್ತೆ

ಈ ಕುರಿತು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಂದ್ ಮಾಡುವ ಪ್ರತಿಭಟನಾಕಾರರು ಶಾಂತಿಯುತವಾಗಿ ತಮ್ಮ ಹೋರಾಟ ನಡೆಸಬಹುದು. ಬಲವಂತವಾಗಿ ಬಂದ್ ಮಾಡಿಸಿದರೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಅಹಿತಕರ ಘಟನೆಗಳ‌ ಮುಂಜಾಗೃತಿಗೆ 1500 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...