ಬಾಗೇಪಲ್ಲಿ | ಸೀತಾರಾಮ ಯೆಚೂರಿ ನಿಧನಕ್ಕೆ ಸಂತಾಪ

Date:

ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಐಎಂ ನಾಯಕ ಸೀತಾರಾಮ ಯೆಚೂರಿ(72) ಅನಾರೋಗ್ಯ ಹಿನ್ನೆಲೆ ನಿಧನರಾಗಿದ್ದು, ಸಿಪಿಐಎಂ ಮುಖಂಡ ಡಾ.ಅನಿಲ್‌ ಕುಮಾರ್‌ ಅವುಲಪ್ಪ ಸಂತಾಪ ಸೂಚಿಸಿದ್ದಾರೆ.

- Advertisement -

ತಮ್ಮ ರಾಜಕೀಯ ಜೀವನದುದ್ದಕ್ಕೂ ಪ್ರಗತಿಪರ ಚಿಂತನೆಗಳನ್ನು ಅಳವಡಿಸಿಕೊಂಡು ಬಂದಿದ್ದ ಯೆಚೂರಿ ರಾಜ್ಯಸಭೆಯಲ್ಲಿ ಅತ್ಯಂತ ಆಳವಾದ ಅಧ್ಯಯನದಿಂದ ಭಾಷಣವನ್ನು ಮಾಡುತ್ತಲೇ ದೇಶದ ಗಮನ ಸೆಳೆಯುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆಗಸ್ಟ್ 12, 1952 ರಂದು ಚೆನ್ನೈನಲ್ಲಿ ಜನಿಸಿದ ಸೀತಾರಾಂ ಯೆಚೂರಿ ಅವರು ಭಾರತೀಯ ರಾಜಕೀಯ ಕ್ಷೇತ್ರದಲ್ಲಿ ಸಮ್ಮಿಶ್ರ ರಾಜಕೀಯಕ್ಕೆ ಅವರ ಕಾರ್ಯತಂತ್ರದ ವಿಧಾನ ಮತ್ತು ಮಾರ್ಕ್ಸ್‌ವಾದದ ತತ್ವಗಳನ್ನು ಅನುಸರಿಸುವ ಮೂಲಕ ಹೆಸರು ಮಾಡಿದ್ದರು.

1974ರಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸೇರುವ ಮೂಲಕ ಅವರ ರಾಜಕೀಯ ಜೀವನ ಆರಂಭವಾಯಿತು. ಮೂರು ಬಾರಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿದ್ದರು. ಎಸ್‌ಎಫ್‌ಐ ಅಖಿಲ ಭಾರತದ ಅಧ್ಯಕ್ಷರಾದರು, 1984 ರಲ್ಲಿ ಅವರು ಸಿಪಿಐ (ಎಂ) ಕೇಂದ್ರ ಸಮಿತಿಗೆ ಆಯ್ಕೆಯಾದರು. 1992 ರಿಂದ ಮೂರು ದಶಕಗಳ ಕಾಲ ಪಾಲಿಟ್‌ಬ್ಯೂರೊದ ಸದಸ್ಯರಾಗಿದ್ದರು.ತಮ್ಮ ಜೀವನದ ಕೊನೆಯವರೆಗೂ ಪ್ರಗತಿಪರ ಚಳುವಳಿಯಲ್ಲಿ ಶ್ರಮಿಸಿ ಸಿದ್ದಾಂತವನ್ನೆ ಉಸಿರಾಗಿರಿಸಿಕೊಂಡು ಜೀವಿಸಿದ್ದರು.

ಈ ಸುದ್ದಿ ಓದಿದ್ದೀರಾ? ಆಂಧ್ರಪ್ರದೇಶ | ಭೀಕರ ಅಪಘಾತ: ಕಾರಿನ ಮೇಲೆ ಬಿದ್ದ ಲಾರಿ; ಚಿಕ್ಕಬಳ್ಳಾಪುರದ ಮೂವರು ಸಾವು

ಬಾಗೇಪಲ್ಲಿಗೆ ಬಿಡದ ನಂಟು

ಯೆಚೂರಿ ಅವರಿಗೂ ಜಿ.ವಿ.ಶ್ರೀರಾಮ ರೆಡ್ಡಿಯವರಿಗೂ ಉತ್ತಮ ನಂಟಿತ್ತು. ಅವರಿಗೆ ಬಾಗೇಪಲ್ಲಿ ಎಂದರೆ ಪಂಚ ಪ್ರಾಣ. ಬಾಗೇಪಲ್ಲಿಯ ಯಾವುದೇ ಸಮಸ್ಯೆಗಳಿದ್ದರೂ ಅವರ ಮಾರ್ಗದರ್ಶನ ಪಡೆಯುತ್ತಿದ್ದರು ಎಂದು ಅನಿಲ್‌ ಕುಮಾರ್ ಸ್ಮರಿಸಿದ್ದಾರೆ.

ಯೆಚೂರಿ1

ಇದೇ ವೇಳೆ ಚನ್ನರಾಯಪ್ಪ, ಮುನಿ ವೆಂಕಟಪ್ಪ, ರಘುರಾಮ ರೆಡ್ಡಿ, ವಾಲ್ಮೀಕಿ ಅಶ್ವಥಪ್ಪ, ಸಾವಿತ್ರಮ್ಮ, ಅಬ್ದುಲ್ ಕರೀಂ ಸಾಬ್, ಜಿ.ಕೃಷ್ಣಪ್ಪ ಸೇರಿದಂತೆ ಇತರೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಕೋಲಾರ | ಮಾನವ ಹಕ್ಕುಗಳ ಮಂಡಳಿಯ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್ ನೇಮಕ

ಅಖಿಲ ಭಾರತ ಮಾನವ ಹಕ್ಕುಗಳ ಮಂಡಳಿಯ ನೂತನ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್...

ಬಾಗೇಪಲ್ಲಿ | ಎತ್ತಿನಹೊಳೆ ಅಲ್ಲ ಹಣದಹೊಳೆ ಹರಿಸುವ ಯೋಜನೆ-ಸಂಸದ ಡಾ.ಕೆ.ಸುಧಾಕರ್

ಕೇರಳ,ತೆಲಂಗಾಣ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮತದಾರರ ಪಟ್ಟಿಯಲ್ಲಿ...

ಅ.18ರಂದು ಮೈಸೂರಿನಲ್ಲಿ ಎರಡನೇ ವರ್ಷದ ದಸರಾ ಕಲಾಜಾತ್ರೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ...