ಬೀದರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಯವರು ಎದುರಾಳಿ ಬಿಜೆಪಿಯ ಕೇಂದ್ರ ಸಚಿವ ಭಗವಂತ ಖೂಬಾ ಅವರ ವಿರುದ್ಧ ಭಾರಿ ಮುನ್ನಡೆ ಸಾಧಿಸಿದ್ದಾರೆ. ಗೆಲುವಿನತ್ತ ದಾಪುಗಾಲುಟ್ಟಿದ್ದಾರೆ.
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ ಖಂಡ್ರೆ ರಾಜ್ಯದ ಅತ್ಯಂತ ಚಿಕ್ಕ ವಯಸ್ಸಿನ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮೊದಲಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಸಾಗರ ಖಂಡ್ರೆ ಮಧ್ಯಾಹ್ನ 12.30 ಗಂಟೆ ಸುಮಾರಿಗೆ 1 ಲಕ್ಷಕ್ಕೂ ಅಧಿಕ ಮತಗಳ ಅಂತರದ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ ಹುಮ್ಮಸ್ಸಿನಲ್ಲಿದ್ದಾರೆ.