ಕಾಂಗ್ರೆಸ್‌ ಸರ್ಕಾರ ಮಕ್ಕಳ ವಿಚಾರದಲ್ಲಿ ಚೆಲ್ಲಾಟ ಆಡುತ್ತಿದೆ: ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ

Date:

  • ವಿವಿಧ ಜಿಲ್ಲೆಗಳ ಮುಖಂಡರ ಜತೆ ಜೆಡಿಎಸ್‌ ಆತ್ಮಾವಲೋಕನ ಸಭೆ
  • ‘ಗ್ಯಾರಂಟಿಗಳ ಬಗ್ಗೆ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ’

ಹಿಂದಿನ ಬಿಜೆಪಿ ಸರ್ಕಾರ ಪಠ್ಯ ಬದಲಾವಣೆ ಮಾಡಿದಾಗ ಆ ಬಗ್ಗೆ ಸಾಕಷ್ಟು ಗೊಂದಲ ಆಗಿತ್ತು. ಈಗ ಈ ಸರ್ಕಾರ ಕೂಡ ಅದೇ ದಾರಿಯಲ್ಲಿ ಇದೆ. ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಪಠ್ಯ ಪುಸ್ತಕಗಳನ್ನು ಮುದ್ರಿಸಿ ಶಾಲೆಗಳಿಗೆ ಕಳಿಸಲಾಗಿದೆ. ಈ ಕಾಂಗ್ರೆಸ್‌ ಸರ್ಕಾರ ಮಕ್ಕಳ ವಿಚಾರದಲ್ಲಿ ಚೆಲ್ಲಾಟ ಆಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹರಿಹಾಯ್ದರು.

ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಗುರುವಾರ ವಿವಿಧ ಜಿಲ್ಲೆಗಳ ಮುಖಂಡರ ಜತೆ ನಡೆದ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

“ಮಕ್ಕಳಿಗೆ ಪರಿಶುದ್ಧ ವಾತಾವರಣ ಸೃಷ್ಟಿ ಮಾಡಬೇಕು. ಮಕ್ಕಳಿಗೆ ಒಳ್ಳೆಯ ಜ್ಞಾನ ತುಂಬಬೇಕು. ದ್ವಂದ್ವ ಹೇಳಿಕೆಗಳನ್ನು ನೀಡುವ ಮೂಲಕ ಅವರ ಮೇಲೆ ಪರಿಣಾಮ ಬೀರುವಂತೆ ಮಾಡುವುದು ಬೇಡ. ಸರ್ಕಾರದ ಪ್ರಾರಂಭಿಕ ಹಂತದಲ್ಲಿ ಈ ರೀತಿಯ ಗೊಂದಲ ಬಿತ್ತನೆ ಮಾಡಿದರೆ ಹೇಗೆ? ಇನ್ನೂ ಐದು ವರ್ಷದ ಕಥೆ ಏನು? ಎನ್ನುವುದು ನನ್ನ ಪ್ರಶ್ನೆಯಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗ್ಯಾರಂಟಿ ಬಗ್ಗೆ ಸ್ವತಃ ಸಚಿವರಿಗೆ ಮಾಹಿತಿ ಇಲ್ಲ

ಗ್ಯಾರಂಟಿ ಬಗ್ಗೆ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ” ಎಂದು ಕುಮಾರಸ್ವಾಮಿ ಟೀಕಿಸಿದರು.

“ಗೃಹಜ್ಯೋತಿ ಯೋಜನೆಯ ಬಗ್ಗೆ ಹೇಳುವುದೇ ಬೇಡ ಎನಿಸುತ್ತದೆ. ಏಕೆಂದರೆ, ಇಂಧನ ಇಲಾಖೆಯನ್ನು ಮುನ್ನಡೆಸುತ್ತಿರುವ ಸಚಿವರಾದ ಜಾರ್ಜ್ ಅವರಿಗೆ ಈ ಕಾರ್ಯಕ್ರಮ ಅರ್ಥ ಆಗಿಲ್ಲ. ಅವರು ತಾಳಮೇಳ ಇಲ್ಲದ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಅವರಿಗೆ ಇಲ್ಲ, ಯಾಕೆ ಅಧಿಕಾರಿಗಳು ಅವರಿಗೆ ಮಾಹಿತಿ ನೀಡುತ್ತಿಲ್ಲವೇ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಬದಲಿಸಿದ್ದ ಪಠ್ಯಗಳನ್ನು ಕಾಂಗ್ರೆಸ್‌ ತೆಗೆಯಬೇಕು: ಕುಂ.ವೀ

“ಚುನಾವಣೆ ಪೂರ್ವದಲ್ಲಿ ಏನು ಘೋಷಣೆ ಮಾಡಿದ್ದರು ಎನ್ನುವುದು ನನಗೆ ಮಾತ್ರವಲ್ಲ ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಈಗ ನೋಡಿದರೆ ಸರ್ಕಾರ ಸಬೂಬುಗಳ ಪಟ್ಟಿ ಮಾಡಿಕೊಂಡು ಕಾಲಹರಣ ಮಾಡುತ್ತಿದೆ. ಜನರ ನಂಬಿಕೆಯ ಹರಣ ಮಾಡುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

ಇಂಧನ ಇಲಾಖೆಯ ಒಪ್ಪಂದ ರದ್ದಾಗಲಿ

“ಇಂಧನ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ, ನಡೆದಿದೆ ಎನ್ನುವ ಮಾಹಿತಿ ನನಗೂ ಇದೆ. ಹಿಂದೆ ಕಾಗೋಡು ತಿಮ್ಮಪ್ಪ ಅವರು ಸ್ಪೀಕರ್ ಆಗಿದ್ದರು. ಆಗ ಇಂಧನ ಇಲಾಖೆಯಲ್ಲಿ ನಡೆದ ಅಕ್ರಮಗಳ ತನಿಖೆಗೆ ಜಂಟಿ ಸದನ ಸಮಿತಿ ರಚನೆ ಮಾಡಲಾಯಿತು. ಮುಕ್ತ ಮಾರುಕಟ್ಟೆಯಲ್ಲಿ 2.30 ರೂಪಾಯಿಗೆ ಲಭ್ಯವಿದ್ದ ಸೋಲಾರ್ ವಿದ್ಯುತ್ತನ್ನು 9.50 ರೂಪಾಯಿ ಕೊಟ್ಟು ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ವಿಚಿತ್ರವೆಂದರೆ, ಆ ಸದನ ಸಮಿತಿ ಕಥೆ ಏನಾಯಿತು ಎಂದರೆ ಕುರಿ ಕಾಯಲು ತೋಳವನ್ನೆ ಬಿಟ್ಟಂತೆ ಆಯಿತು. ಈಗ ನಾನು ಕೇಳುತ್ತೇನೆ, ತಾಕತ್ತು ಇದ್ದರೆ ಈಗ ಆ ಒಪ್ಪಂದವನ್ನು ರದ್ದು ಮಾಡಿ” ಎಂದು ಸವಾಲು ಹಾಕಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...