ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿ, ಜನರನ್ನು ಕಾಂಗ್ರೆಸ್‌ ಸರ್ಕಾರ ಯಾಮಾರಿಸಿದೆ: ಬಸವರಾಜ ಬೊಮ್ಮಾಯಿ ಕಿಡಿ

Date:

  • ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು, ಯಾವುದೇ ಜೀವಾಳ ಇಲ್ಲ
  • ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ: ಟೀಕೆ

ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಮಾತು ಇರಲಿಲ್ಲ. ಸುಳ್ಳಿನ ಕಂತೆ ಅಂತ ಸಾಬೀತಾಗಿದೆ. ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿ, ಜನರನ್ನು ಯಾಮಾರಿಸುವ ಕೆಲಸ ಕಾಂಗ್ರೆಸ್‌ ಸರ್ಕಾರ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.

- Advertisement -

ರಾಜ್ಯಪಾಲರ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು, ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿದ್ದರು. ಈ ಬಗ್ಗೆಯೂ ರಾಜ್ಯಪಾಲರಿಂದ ಸುಳ್ಳು ಹೇಳಿಸಲಾಗಿದೆ. ಈ ಸರ್ಕಾರಕ್ಕೆ ಅಭಿವೃದ್ಧಿಯ ಚಿಂತನೆಯಿಲ್ಲ. ಜವಾಬ್ದಾರಿಯಿಂದ ನುಸುಳಿಕೊಳ್ಳುತ್ತಿರುವ ಸರ್ಕಾರ ಇದು. ಅರ್ಥವಿಲ್ಲದೇ ಸುಮ್ಮನೆ ಬೊಗಳೆ ಭಾಷಣ ಮಾಡಿಸಿದ್ದಾರೆ” ಎಂದು ದೂರಿದರು.

“10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಹಿ ಮಾಡಿ ಹೇಳಿದ್ದರು. ಈಗ ಕೇಂದ್ರ ಸರ್ಕಾರ ಅಂತ ಹೇಳದೆ ಆಹಾರ ಭದ್ರತೆಯಲ್ಲಿ ಕೊಡುತ್ತೇವೆ ಅಂತಿದ್ದಾರೆ. ಅಕ್ಕಿಯನ್ನು ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಹೇಳಲು ಅವರಿಗೆ ನಾಚಿಕೆಯಾಗಿದೆ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ರಾಜಕೀಯ ಪಕ್ಷಗಳ ಒಡೆಯಲು ಇರುವ ಸಮಯ ಉದ್ಯೋಗ ಭರ್ತಿಗೆ ಏಕಿಲ್ಲ: ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ನಮ್ಮಲ್ಲಿ ಎಲ್ಲರೂ ಸಮರ್ಥರು!

ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, “ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. ಅಷ್ಟರೊಳಗೆ ವಿಪಕ್ಷ ನಾಯಕನ ಆಯ್ಕೆಯಾಗಲಿದೆ‌. ಪ್ರತಿಪಕ್ಷದ ನಾಯಕನಾಗಲು ನಮ್ಮಲ್ಲಿರುವ 66 ಜನರು ಸಮರ್ಥರಿದ್ದಾರೆ. ಬಿಟ್ ಕಾಯಿನ್ ಪ್ರಕರಣ ಎಸ್‌ಐಟಿಗೆ ವಹಿಸಿದ್ದು ಒಳ್ಳೆದಾಯಿತು. ಸರ್ಕಾರ ಯಾವುದೇ ರೂಪದಲ್ಲಿ ಬೇಕಾದರೂ ತನಿಖೆ ಮಾಡಿಸಲಿ” ಎಂದರು.

ಬೆಂಕಿ ಇಲ್ಲದೆ ಹೊಗೆಯಾಡಲ್ಲ

ಸಿಎಂ ಕಚೇರಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿ, “ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ‌ ರೂ. ಕೇಳಿದ್ದಾರೆ. ಅಲ್ಲಿ ಕೋಟ್ಯಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ ಅಧಿಕಾರಿ ಬಂದು ವರ್ಗಾವಣೆ ಮಾಡಿಸುವುದು. ಐಎಎಸ್‌, ಐಪಿಎಸ್ ಅಧಿಕಾರಿಗಳ ಮಾತೆ ಸ್ಪಷ್ಟವಾದ ಸಾಕ್ಷಿ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ‌” ಎಂದು ಎಚ್‌ಡಿಕೆ ಆರೋಪವನ್ನು ಸಮರ್ಥಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....