- ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು, ಯಾವುದೇ ಜೀವಾಳ ಇಲ್ಲ
- ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ: ಟೀಕೆ
ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಮಾತು ಇರಲಿಲ್ಲ. ಸುಳ್ಳಿನ ಕಂತೆ ಅಂತ ಸಾಬೀತಾಗಿದೆ. ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿ, ಜನರನ್ನು ಯಾಮಾರಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.
ರಾಜ್ಯಪಾಲರ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು, ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ” ಎಂದು ಕಿಡಿಕಾರಿದರು.
“ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿದ್ದರು. ಈ ಬಗ್ಗೆಯೂ ರಾಜ್ಯಪಾಲರಿಂದ ಸುಳ್ಳು ಹೇಳಿಸಲಾಗಿದೆ. ಈ ಸರ್ಕಾರಕ್ಕೆ ಅಭಿವೃದ್ಧಿಯ ಚಿಂತನೆಯಿಲ್ಲ. ಜವಾಬ್ದಾರಿಯಿಂದ ನುಸುಳಿಕೊಳ್ಳುತ್ತಿರುವ ಸರ್ಕಾರ ಇದು. ಅರ್ಥವಿಲ್ಲದೇ ಸುಮ್ಮನೆ ಬೊಗಳೆ ಭಾಷಣ ಮಾಡಿಸಿದ್ದಾರೆ” ಎಂದು ದೂರಿದರು.
“10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಹಿ ಮಾಡಿ ಹೇಳಿದ್ದರು. ಈಗ ಕೇಂದ್ರ ಸರ್ಕಾರ ಅಂತ ಹೇಳದೆ ಆಹಾರ ಭದ್ರತೆಯಲ್ಲಿ ಕೊಡುತ್ತೇವೆ ಅಂತಿದ್ದಾರೆ. ಅಕ್ಕಿಯನ್ನು ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಹೇಳಲು ಅವರಿಗೆ ನಾಚಿಕೆಯಾಗಿದೆ” ಎಂದು ವಾಗ್ದಾಳಿ ನಡೆಸಿದರು.
ಈ ಸುದ್ದಿ ಓದಿದ್ದೀರಾ? ರಾಜಕೀಯ ಪಕ್ಷಗಳ ಒಡೆಯಲು ಇರುವ ಸಮಯ ಉದ್ಯೋಗ ಭರ್ತಿಗೆ ಏಕಿಲ್ಲ: ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ
ನಮ್ಮಲ್ಲಿ ಎಲ್ಲರೂ ಸಮರ್ಥರು!
ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, “ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. ಅಷ್ಟರೊಳಗೆ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ಪ್ರತಿಪಕ್ಷದ ನಾಯಕನಾಗಲು ನಮ್ಮಲ್ಲಿರುವ 66 ಜನರು ಸಮರ್ಥರಿದ್ದಾರೆ. ಬಿಟ್ ಕಾಯಿನ್ ಪ್ರಕರಣ ಎಸ್‌ಐಟಿಗೆ ವಹಿಸಿದ್ದು ಒಳ್ಳೆದಾಯಿತು. ಸರ್ಕಾರ ಯಾವುದೇ ರೂಪದಲ್ಲಿ ಬೇಕಾದರೂ ತನಿಖೆ ಮಾಡಿಸಲಿ” ಎಂದರು.
ಬೆಂಕಿ ಇಲ್ಲದೆ ಹೊಗೆಯಾಡಲ್ಲ
ಸಿಎಂ ಕಚೇರಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿ, “ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ ರೂ. ಕೇಳಿದ್ದಾರೆ. ಅಲ್ಲಿ ಕೋಟ್ಯಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ ಅಧಿಕಾರಿ ಬಂದು ವರ್ಗಾವಣೆ ಮಾಡಿಸುವುದು. ಐಎಎಸ್, ಐಪಿಎಸ್ ಅಧಿಕಾರಿಗಳ ಮಾತೆ ಸ್ಪಷ್ಟವಾದ ಸಾಕ್ಷಿ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ” ಎಂದು ಎಚ್‌ಡಿಕೆ ಆರೋಪವನ್ನು ಸಮರ್ಥಿಸಿಕೊಂಡರು.
Nivu hage adalita madsidra sir great 👍 hege satya horagade bartide nodi