ಯಲ್ಲಾಪುರ ಹಾಗೂ ಮುಂಡಗೋಡನಲ್ಲಿ ನೀಟ್ ಪರೀಕ್ಷೆ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

Date:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ಯಲ್ಲಾಪುರ ಮತ್ತು ಮುಂಡಗೋಡ ತಾಲೂಕಿನಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿಗಳ ವತಿಯಿಂದ ಪ್ರತಿಭಟನೆ ಮಾಡಲಾಯಿತು.

- Advertisement -

ಯಲ್ಲಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರಗೊಂಡಿದೆ. ಹಗಲಿರುಳು ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗಳ ಕನಸಿಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟ ವ್ಯವಸ್ಥೆಯೇ ಕಾರಣ ಎಂದು ಅವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಪ್ರಮುಖರಾದ ಡಾ. ರವಿ ಭಟ್ ಬರಗದ್ದೆ, ನರಸಿಂಹ ನಾಯ್ಕ, ಉಲ್ಲಾಸ್ ಶಾನಭಾಗ, ಫೈರೋಜ್ ಶೇಖ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮೋಧ ಶಿರಸಿಕರ್, ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿಶ್ವಾಸ್ ನಾಯ್ಕ, ತಾಲೂಕಾಧ್ಯಕ್ಷ ಗಣೇಶ ಹೆಗಡೆ, ಉಪಾಧ್ಯಕ್ಷ ಮಹೇಶ್ ನಾಯ್ಕ, ಮಹಿಳಾ ಕಾಂಗ್ರೆಸ್‌ನ ಪೂಜಾ ನೇತ್ರೇಕರ, ಸರಸ್ವತಿ ಗುನಗಾ, ಮುಷರತ್ ಖಾನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜಿ.ಪಂ ಸಿಇಒ ಡಾ. ದಿಲೀಷ್ ಶಸಿ ಅನಿರೀಕ್ಷಿತ ಭೇಟಿ: ನರೇಗಾ ಕೂಲಿಕಾರರ ಸಮಸ್ಯೆ ಆಲಿಕೆ

Advertisements

ಇತ್ತ ಮುಂಡಗೋಡನ ಪ್ರವಾಸಿ ಮಂದಿರದಿಂದ ತಾಲೂಕು ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ನೀಟ್ ಪರೀಕ್ಷೆ ರದ್ದತಿಯಿಂದಾಗಿ ಯುವಕರಿಗೆ ಆಗಿರುವ ಅನ್ಯಾಯ ಮತ್ತು ನಿರಂತರ ಬೆಲೆ ಏರಿಕೆಯ ವಿರುದ್ಧ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಮಹಿಳಾ ಘಟಕದ ಅಧ್ಯಕ್ಷೆ ಶಾರದಾಬಾಯಿ ರಾಠೋಡ, ಸಲ್ಮಾ ಕಿರಣ್ ಶೇರಖಾನೆ, ರಾಜು ಕುಟ್ರಿ, ರಜಾಖಾನ್ ಪಠಾಣ್, ಗೌಸಮೋದ್ದಿನ್ ಮಕಾಂದರ, ಜೈನು ಬೆಂಡಿಗೇರಿ, ಕಿರಣ್ ಶೇರಖಾನೆ, ಹಾಗೂ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಅಭಿಮಾನಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ...

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು...

ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ರೈತರಿಗೆ 12 ತಾಸು ವಿದ್ಯುತ್ ಪೂರೈಸಬೇಕು, ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ...

ಕಲಬುರಗಿ | ಅವಹೇಳನಕಾರಿ ಪೋಸ್ಟ್, ಜೀವ ಬೆದರಿಕೆ ಆರೋಪ; ಶಿವಸೇನಾ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ, ಪತ್ರಿಕಾಗೋಷ್ಠಿಯಲ್ಲಿ ನಿಂದನಾತ್ಮಕ...