ಬಾಗೇಪಲ್ಲಿ | ಕಾಂಗ್ರೆಸ್ ಬಡವರ ಪರವಾದ ಸರಕಾರ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Date:

Advertisements

ಬಡವರ ಮನೆ ಬಳಿಗೆ ಆಡಳಿತ ಯಂತ್ರಾಂಗವೇ ಆಗಮಿಸಿ, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸವನ್ನು ಕಾಂಗ್ರೆಸ್‌ ಸರಕಾರ ಮಾಡುತ್ತಿದೆ. ಕಾಂಗ್ರೆಸ್‌ ಸರಕಾರ ಬಡವರ ಸರಕಾರ ಎಂದು ಶಾಸಕ ಎಸ್‌.ಎನ್‌ ಸುಬ್ಬಾರೆಡ್ಡಿ ಹೇಳಿದರು.

ಬಾಗೇಪಲ್ಲಿ ತಾಲೂಕಿನ ಕೊತ್ತಕೋಟೆ ಬಳಿ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರಕಾರವು ಗ್ಯಾರೆಂಟಿ ಯೋಜನೆಗಳ ಮೂಲಕ ಮಹಿಳೆಯರ, ಬಡವರ ಪರವಾಗಿ ಎಲ್ಲ ವಂಚಿತ ಸಮುದಾಯಗಳ ಏಳಿಗೆಗೆ ಶ್ರಮಿಸುತ್ತಿದೆ. ಇದರ ಭಾಗವಾಗಿ ಕೊತ್ತಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 10-20 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಮೀನು ವಿವಾದಗಳನ್ನು ಪರಿಹರಿಸಲಾಗುತ್ತಿದೆ. ಈ ಮೂಲಕ ಪೋಡಿ ಮುಕ್ತ ಗ್ರಾಮ ಪಂಚಾಯತಿಯನ್ನಾಗಿಸಲಾಗಿದೆ ಎಂದು ತಿಳಿಸಿದರು.

Advertisements

ಮಧ್ಯವರ್ತಿಗಳ ಹಾವಳಿಗೆ ಕಡಿವಾಣ

ಬಾಗೇಪಲ್ಲಿ ತಹಶೀಲ್ದಾರ್ ಮನಿಷಾ ಮಹೇಶ್ ಎಸ್ ಪತ್ರಿ ಮಾತನಾಡಿ, ಜನಸ್ಪಂದನಾ ಕಾರ್ಯಕ್ರಮವು ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲು ಉತ್ತಮ ಮಾರ್ಗವಾಗಿದೆ. ಜೊತೆಗೆ ನಾಗರೀಕರಿಗೆ ಎಲ್ಲ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಪರಿಹರಿಸಿ, ಸ್ಥಳದಲ್ಲೆ ಸರಕಾರದ ಸೌಲಭ್ಯ ದೊರೆಯುವಂತೆ ಮಾಡಲಾಗುತ್ತಿದೆ. ಸಾರ್ವಜನಿಕರು ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಾಮೂಹಿಕ ಸೀಮಂತ ಕಾರ್ಯಕ್ರಮ

ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಸಿಡಿಪಿಓ ರಾಮಚಂದ್ರಪ್ಪರವರ ನೇತೃತ್ವದಲ್ಲಿ 12 ಮಂದಿ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ನಡೆಸಲಾಯಿತು. ತಹಶೀಲ್ದಾರ್ ಮನಿಷಾ ಮಹೇಶ್ ಎಸ್ ಪತ್ರಿ ಸೇರಿದಂತೆ ಹಲವಾರು ಮಂದಿ ಮಡಿಲು ತುಂಬಿಸಿದರು.

227 ಅರ್ಜಿ, ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ

ಜನಸ್ಪಂದನಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 227 ಅರ್ಜಿಗಳು ಸಲ್ಲಿಕೆಯಾದವು. ಗೃಹಲಕ್ಷ್ಮೀ, ಅನ್ನ ಭಾಗ್ಯ ಪಡಿತರ ಕಾರ್ಡ್, ಜಮೀನು ಸಮಸ್ಯೆ, ಜಮೀನಿಗೆ ರಸ್ತೆ, ವಿದ್ಯುತ್ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಹಲವು ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಇಲಾಖೆ ವ್ಯಾಪ್ತಿಯ 400 ಪೌತಿ ಖಾತೆ, 450 ಪಿಂಚಣಿ ಸೇರಿದಂತೆ ಭಾಗ್ಯಲಕ್ಷ್ಮಿ ಬಾಂಡ್, 90 ಮಂದಿಗೆ ಹಕ್ಕು ಪತ್ರ, ಮನೆ ಮಂಜುರಾತಿ ಕಾರ್ಯಾದೇಶ ಪತ್ರ, ಆಕಸ್ಮಿಕವಾಗಿ ಮರಣ ಹೊಂದಿದವರ ಕುಟುಂಬಸ್ಥರಿಗೆ ಪರಿಹಾರದ ಕಾಸೋಲೆ, ತಾಲೂಕು ಪಂಚಾಯತಿ ವತಿಯಿಂದ ನರೇಗಾ ಜಾಬ್ ಕಾರ್ಡ್, ಎನ್.ಆರ್.ಎಲ್.ಎಮ್ ಯೋಜನೆ ಸೇರಿದಂತೆ ನಾನಾ ಯೋಜನೆಗಳ ಒಂದು ಸಾವಿರದ ಐನೂರಕ್ಕೂ ಹೆಚ್ಚು ಫಲಾನುಭವಿಗಳಿಗೆ ಸೌಲಭ್ಯಗಳ ಆದೇಶ ಪತ್ರಗಳನ್ನು ವಿತರಿಸಲಾಯಿತು.‌

ಜಿಲ್ಲಾ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಸಹಯೋಗದೊಂದಿಗೆ ಅರ್ಹ ವಿಕಲಚೇತರಿಗೆ ವಾಕರ್, ಅಂಧ ವಿದ್ಯಾರ್ಥಿಗೆ ಮೊಬೈಲ್, ಶ್ರವಣ ಸಾಧನ , ಊರುಗೋಲು, ವೈಟ್ ಕ್ಯಾನ್ ಮತ್ತಿತರ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೀಸಲಾತಿಗೇ ಕುತ್ತು ಬಂದಿರುವಾಗ, ಒಳಮೀಸಲಿನ ನಿಜವನ್ನು ಇನ್ನೆಷ್ಟು ಕಾಲ ಮುಂದೂಡುತ್ತೀರಿ?

ಈ ವೇಳೆ ಜಿಪಂ ಮಾಜಿ ಸದಸ್ಯ ನರಸಿಂಹಪ್ಪ, ಕೆಡಿಪಿ ಸದಸ್ಯ ಪಿ.ಮಂಜುನಾಥರೆಡ್ಡಿ, ಇಒ ಜಿ.ವಿ ರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್ ಸತ್ಯನಾರಾಯಣರೆಡ್ಡಿ, ಸಿಡಿಪಿಒ ರಾಮಚಂದ್ರ, ನರೇಗಾ ಸಹಾಯಕ ನಿರ್ದೇಶಕ ನಾರಾಯಣ, ಸಹಾಯಕ ಕೃಷಿ ನಿರ್ದೇಶಕಿ ಲಕ್ಷ್ಮೀ, ಮುಖಂಡರಾದ ಜಯಪ್ರಕಾಶ್ ರೆಡ್ಡಿ, ವಿಷ್ಣುವರ್ಧನರೆಡ್ಡಿ, ರಾಮನಾಥ್, ರವಿ, ಸೀಮಲರಾಮಪ್ಪ, ಶಿವಪ್ಪ, ಹೊನ್ನಂಪಲ್ಲಿ ಸೀನ, ರಂಗಾರೆಡ್ಡಿ, ಉತ್ತಮರೆಡ್ಡಿ, ವೆಂಕಟರಾಮ, ವೆಂಕಟೇಶ್, ವಿಜಯಕುಮಾರ್, ಅಂಜನರೆಡ್ಡಿ, ರಾಮಮೋಹನರೆಡ್ಡಿ, ಮೋಹನರೆಡ್ಡಿ, ಓಬಳರೆಡ್ಡಿ, ಆನಂದ್, ಸೋಮು, ಸೀನ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X