ದೇಶದ್ರೋಹಿಗಳ ಭದ್ರತೆಗೆ ನಿಲ್ಲುತ್ತಿರುವುದು ಅಧಿಕಾರದ ದುರುಪಯೋಗ: ಕಾಂಗ್ರೆಸ್‌ ವಿರುದ್ಧ ಯತ್ನಾಳ್‌ ಕಿಡಿ

Date:

  • ‘ಕಾಂಗ್ರೆಸ್‌ ಆದ್ಯತೆಗಳೇನು ಎಂಬುದು ಸಮಾಜಕ್ಕೆ ಗೊತ್ತಾಗುತ್ತದೆ’
  • ‘ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಭಯೋತ್ಪಾದಕ ಘಟನೆ’

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಗಳಲ್ಲಿ ಬಂಧಿತರಾಗಿರುವ ‘ಅಮಾಯಕ’ರನ್ನು ಬಿಡುಗಡೆಗೊಳಿಸಲು ಉಪಸಮಿತಿ ರಚಿಸಿ ಅವರನ್ನು ಬಂಧ ಮುಕ್ತ ಮಾಡುವ ಉತ್ಸಾಹ, ಉತ್ಸುಕತೆ, ಉಮೇದು ಬಾಂಗ್ಲಾ ನುಸುಳುಕೋರರನ್ನು ಹತ್ತಿಕ್ಕಲು ತೋರದೆ ಇರುವುದು ಇವರ ಆದ್ಯತೆಗಳೇನು ಎಂದು ಸಮಾಜಕ್ಕೆ ಗೊತ್ತಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ.

- Advertisement -

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಭಯೋತ್ಪಾದಕ ಘಟನೆ ಎಂದು ಮಾನ್ಯ ಉಚ್ಚ ನ್ಯಾಯಾಲಯವೇ ಹೇಳಿರುವಾಗ, ಸರ್ಕಾರ ರಾಜ್ಯದ ಆಂತರಿಕ ಭದ್ರತೆ, ನುಸುಳುಕೋರರ ಪತ್ತೆ, ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು, ಬ್ಯಾಂಕ್ ಅವ್ಯವಹಾರಗಳ ತನಿಖೆಗಳನ್ನು ಚುರುಕು ಮಾಡುವ ಬದಲಾಗಿ ದೇಶ ವಿರೋಧಿಗಳ ಪರವಾಗಿ ನಿಂತಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಧಿಕೃತ ಶಾಲೆಗಳಿಗೆ ಬೀಗಮುದ್ರೆ ಶಿಕ್ಷೆ; ಭ್ರಷ್ಟ ಅಧಿಕಾರಿಗಳಿಗೆ ಯಾಕೆ ರಕ್ಷೆ?

“ಸಚಿವ ಸಂಪುಟದಲ್ಲೂ ಇದನ್ನು ಅನುಮೋದಿಸಿಕೊಂಡು ದೇಶದ್ರೋಹಿಗಳ ಭದ್ರತೆಗೆ ನಿಲ್ಲುತ್ತಿರುವುದು ಅಧಿಕಾರದ ದುರುಪಯೋಗ, ಅಲ್ಪಸಂಖ್ಯಾತರ ಓಲೈಕೆ ಹಾಗೂ ರಾಜ್ಯದ ಜನರಿಗೆ ಬಗೆದ ಅನ್ಯಾಯ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರು ಅಮಾಯಕರೇ? ಕಲ್ಲು ಹೊಡೆದು ಹಿಂದೂಗಳ ಮನೆ ಜಖಂ ಮಾಡಿದವರು ಅಮಾಯಕರೇ? ಅಂದಿನ ಕಾಂಗ್ರೆಸ್ ಶಾಸಕರಾದ ದಲಿತ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದವರು ಅಮಾಯಕರೇ? ಡಿಸಿಪಿ ಕಾರ್ ಧ್ವಂಸ ಮಾಡಿದವರು ಅಮಾಯಕರೇ? ಪೋಲೀಸರ ಮೇಲೆ ದಾಳಿ ಮಾಡಿದವ್ರು ಅಮಾಯಾಕರೇ?”ಎಂದು ಲೇವಡಿ ಮಾಡಿದ್ದಾರೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...