ಜೆಡಿಎಸ್ 19 ಸ್ಥಾನ ಗೆದ್ದಿದ್ದರೂ ಕಾಂಗ್ರೆಸ್‌ಗೆ ಈಗಲೂ ಭಯವಿದೆ: ಎಚ್‌ ಡಿ ಕುಮಾರಸ್ವಾಮಿ

Date:

  • ‘ರಾಜ್ಯದ ಇಂಟೆಲಿಜೆನ್ಸ್ ಹೇಗೆ ಕೆಲಸ ಮಾಡುತ್ತಿದೆ ಇಲ್ಲೇ ಗೊತ್ತಾಗುತ್ತದೆ’
  • ಕುಟುಂಬ ಸಮೇತ ಹೋಗಿದ್ದು ಯೂರೋಪ್‌ಗೆ ಹೊರತು ಸಿಂಗಾಪುರಕ್ಕಲ್ಲ

ನಮ್ಮ ರಾಜ್ಯದ ಇಂಟೆಲಿಜೆನ್ಸ್ ಹೇಗೆ ಕೆಲಸ ಮಾಡುತ್ತಿದೆ ಎಂದು ಇಲ್ಲೇ ಗೊತ್ತಾಗುತ್ತೆ. ನಾನು ಕುಟುಂಬ ಸಮೇತ ಯೂರೋಪ್ ಪ್ರವಾಸಕ್ಕೆ ಹೋಗಿದ್ದೆವು. ಅದನ್ನೇ ಕೆಲವರು ಸರ್ಕಾರ ಕೆಡವಲು ಸಿಂಗಾಪುರಕ್ಕೆ ಹೋಗಿದ್ದರು ಎಂದು ಬಿಂಬಿಸಿದರೆ ನಾವೇನು ಮಾಡೋಕೆ ಆಗುತ್ತದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದರು.

ವಿದೇಶಿ ಪ್ರವಾಸ ಮುಗಿಸಿಕೊಂಡು ಬಂದಿರುವ ಕುಮಾರಸ್ವಾಮಿ ಗುರುವಾರ ತಡರಾತ್ರಿ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, “ಜೆಡಿಎಸ್ ಪಕ್ಷ 19 ಸ್ಥಾನಗಳನ್ನು ಮಾತ್ರ ಗೆದ್ದಿದ್ದರೂ ಅವರಿಗೆ ನಮ್ಮ ಮೇಲೆ ಭಯ ಎಷ್ಟಿದೆ ಅನ್ನೋದು ಇದನ್ನು ನೋಡಿಯೇ ತಿಳಿಯುತ್ತದೆ” ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ಯಾಂಪಸ್ಸುಗಳಲ್ಲಿ ಜಾತಿ ನಿಂದನೆ- ಬಿಗಿ ಕಾಯಿದೆ ಜಾರಿಯಾಗಲಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಕೆಲವರು ಸಿಂಗಾಪುರಕ್ಕೆ ಹೋಗಿ ಬಿಜೆಪಿ ಜೊತೆಗೆ ಷಡ್ಯಂತ್ರ ನಡೆಸುತ್ತಿದ್ದಾರೆ” ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ ಮಾಡಿದ್ದರು. ಈ ವಿಚಾರವಾಗಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಮುಂದುವರಿದು, “ನಾವು ಯೂರೋಪ್‌ಗೆ ಕುಟುಂಬ ಸಮೇತ ಹೋಗಿದ್ದೆವು. ಕುಟುಂಬ ಸಮೇತ ವಿದೇಶಗಳಿಗೆ ಹೋದಾಗ ಅಲ್ಲೆಲ್ಲಾ ರಾಜಕೀಯ ಮಾಡಲು ಆಗುತ್ತಾ” ಎಂದು ಸುದ್ದಿಗಾರರನ್ನೇ ಪ್ರಶ್ನಿಸಿದರು.

ಪೆನ್ ಡ್ರೈವ್ ಬಿಡಲ್ಲ

ಸದ್ಯಕ್ಕೆ ಯಾವುದೇ ಪೆನ್ ಡ್ರೈವ್ ಕೊಡಲ್ಲ. ಆಯ್ಕೆ ಮಾಡಿ ಅಧಿಕಾರ ಕೊಟ್ಟ ನಾಡಿನ ಜನತೆಗೆ ಎಲ್ಲಾ ಗೊತ್ತಾಗಬೇಕು. ಜನರಿಗೆ ಈ ವರ್ಷ ಎಲ್ಲ ಗ್ಯಾರಂಟಿ ಕೊಡ್ತಾರಾ, ಸಾವಿರಾರು ಕೋಟಿ ಸಾಲ ಮಾಡಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಹರಿಹಾಯ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯುತ್ ದರ ಇಳಿಕೆ; 100 ಯೂನಿಟ್​ಗಿಂತ ಹೆಚ್ಚು ಬಳಸುವ ಗ್ರಾಹಕರಿಗೆ ಮಾತ್ರ ಅನ್ವಯ

ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್​ ನೀಡಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ...

ಬಾಗಲಕೋಟೆ | ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ...

ಕುಡಿಯುವ ನೀರು ಕೊಡದೆ ಯಾವ ಬ್ರ್ಯಾಂಡ್ ಬೆಂಗಳೂರು ಮಾಡ್ತೀರಾ; ಮೋಹನ್ ದಾಸರಿ ಪ್ರಶ್ನೆ

ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ...

ರಾಷ್ಟ್ರೀಯತೆ, ದೇಶಭಕ್ತಿ ಬಗ್ಗೆ ಬಿಜೆಪಿ ನಮಗೆ ಹೇಳಿಕೊಡಬೇಕಿಲ್ಲ: ಸಚಿವ ಎಂ ಬಿ ಪಾಟೀಲ್‌

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಮತ್ತು ದೇಶ ವಿಭಜನೆಯನ್ನು ತಡೆಯಲು ಶಕ್ತಿ ಮೀರಿ...