ಚಿಕ್ಕಬಳ್ಳಾಪುರ | ಸಂಸದರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ಮಾತನಾಡಲಿ : ಭರಣಿ ವೆಂಕಟೇಶ್‌

Date:

ಸಂಸದ ಸುಧಾಕರ್‌ ಅವರು ನೈತಿಕತೆ ಇದ್ದರೆ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆನಂತರ ಮಾತನಾಡಬೇಕು ಎಂದು ಕೋಚಿಮುಲ್‌ ನಿರ್ದೇಶಕ ಭರಣಿ ವೆಂಕಟೇಶ್‌ ಹೇಳಿದರು.

- Advertisement -

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದಾ ವೈಯಕ್ತಿಕ ಟೀಕೆಗಳಿಗೆ ಇಳಿಯುವ ಬಿಜೆಪಿಯವರು ಶಾಸಕರ ತಂದೆ-ತಾಯಿ ಸಾವಿನ ಕುರಿತು ಸುದ್ದಿಗೋಷ್ಠಿಯಲ್ಲಿ ಟೀಕೆ ಮಾಡಿದ್ದಾರೆ. ಇವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಗುಡುಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಎಲ್ಲರೂ ವೈಯಕ್ತಿಕ ನಿಂದನೆಗಳನ್ನು ನಿಲ್ಲಿಸಬೇಕು. ಅಭಿವೃದ್ಧಿ ವಿಚಾರವಾಗಿ ಪ್ರಶ್ನೆ ಮಾಡಿ. ಯಾವುದೇ ಪಕ್ಷದವರೇ ಆಗಲಿ, ವೈಯಕ್ತಿಕ ನಿಂದನೆ ಮಾಡುವುದು ತಪ್ಪು. ವೈಯಕ್ತಿಕ ನಿಂದನೆಗಳಿಂದ ರಾಜಕಾರಣಿಗಳು ತಮ್ಮ ಮೌಲ್ಯ ಕಳೆದುಕೊಳ್ಳುತ್ತಿದ್ದಾರೆ.‌ ಜನರಿಂದ ಅಗೌರವಕ್ಕೆ ಗುರಿಯಾಗುತ್ತಿದ್ದಾರೆ ಎಂದು ವಿಷಾಧ ವ್ಯಕ್ತಪಡಿಸಿದರು.

ಅಭಿವೃದ್ಧಿ ವಿಚಾರವಾಗಿ ಪ್ರಶ್ನೆ ಮಾಡುವ ಬಿಜೆಪಿಯವರಿಗೆ ಚಿಕ್ಕಬಳ್ಳಾಪುರ ನಗರದ ಪೋಶೆಟ್ಟಿಹಳ್ಳಿ, ತೋಂಡೇನಹಳ್ಳಿ, ಮುದ್ದೇನಹಳ್ಳಿ, ದಿಬ್ಬೂರು ರಸ್ತೆ ಸೇರಿದಂತೆ ನಗರದ ಹಲವೆಡೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳೇ ಶಾಸಕರ ಮಾಡುತ್ತಿರುವ ಅಭಿವೃದ್ಧಿಗೆ ಸಾಕ್ಷಿ ಎಂದರು.

ಅದಷ್ಟೇ ಅಲ್ಲದೆ 25 ಕೋಟಿ ವಿಶೇಷ ಅನುದಾನದ ಕ್ರಿಯಾ ಯೋಜನೆ ಸಹ ತಯಾರಿ ಹಂತದಲ್ಲಿದೆ. ಎತ್ತಿನಹೊಳೆ ಯೋಜನೆಯಡಿ ಕಾಂಕ್ರೀಟ್‌ ರಸ್ತೆಗಳ ನಿರ್ಮಾಣಕ್ಕೆ 6 ಕೋಟಿ ರೂಪಾಯಿಯ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ. ಇದು ನಗರ ಶಾಸಕರು ಮಾಡುತ್ತಿರುವ ಅಭಿವೃದ್ಧಿ ಕೆಲಸಗಳು ಎಂದು ಮಾಹಿತಿ ನೀಡಿದರು.

ಮಾನ್ಯ ಸಂಸದರು ಈ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದಾಗ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಎಂ.ಆರ್.‌ಐ ಸ್ಕ್ಯಾನಿಂಗ್‌ ಸೌಲಭ್ಯವನ್ನು ಸಹ ಮಾಡಿಕೊಡಲಿಲ್ಲ. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್‌ ಅವರು ಜಿಲ್ಲಾಸ್ಪತ್ರೆಗೆ ಎಂ.ಆರ್.‌ಐ ಸ್ಕ್ಯಾನಿಂಗ್‌ ಸೌಲಭ್ಯವನ್ನು ಕಲ್ಪಿಸಿದರು ಎಂದು ಕಾಲೆಳೆದರು.

ಇನ್ನು ಆರ್.ಆರ್ ನಗರ ಶಾಸಕ ಮುನಿರತ್ನಂ ನಾಯ್ಡು ಅವರ ವಿಚಾರವಾಗಿ ಮಾತನಾಡಿದ ಭರಣಿ ವೆಂಕಟೇಶ್, ಹೆಣ್ಣುಮಕ್ಕಳನ್ನು ಹೀನಾಯವಾಗಿ ಮಾತಾಡುವ ಬಿಜೆಪಿ ಶಾಸಕರನ್ನು ಆರ್.ಎಸ್.ಎಸ್ ಹೇಗೆ ಸಹಿಸಿಕೊಳ್ಳುತ್ತಿದೆ. ಒಕ್ಕಲಿಗರು ಎಂಬ ಕಾರಣಕ್ಕೆ ಮೂರು ಮಂದಿ ಪಾಲಿಕೆ ಸದಸ್ಯೆಯರ ಮೇಲೆ ಹಲ್ಲೆ ಮಾಡಿಸಿ, ದರ್ಪ ತೋರಿದ್ದಾರೆ. ಪ.ಜಾತಿಯವರ ಕುರಿತು ಜಾತಿ ನಿಂದನೆ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಿಜೆಪಿಯವರು ಯಾವ ರೀತಿ ಸಂದೇಶ ಕೊಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಈ ಕೂಡಲೇ ಶಾಸಕ ಮುನಿರತ್ನಂ ನಾಯ್ಡು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಇಲ್ಲವಾದರೆ ಎಸ್ಸಿ ಮತ್ತು ಒಕ್ಕಲಿಗ ಸಮುದಾಯಗಳು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬ್ಲಾಕ್ ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಕೆ.ಎನ್.ಜಯರಾಮ್‌ ಮಾತನಾಡಿ, ಸಂಸದರು ಬೆಂಗಳೂರಿನ ಏಸ್‌ ಮೈಕ್ರೋಮ್ಯಾಟಿಕ್‌ ಸಮೂಹ ಸಂಸ್ಥೆಯು ಕುಪ್ಪಳ್ಳಿ ಗ್ರಾಪಂ ವ್ಯಾಪ್ತಿಯ ಕುಡುವತಿ ಸರಕಾರಿ ಶಾಲೆಗೆ ಕೊಠಡಿ, ಶೌಚಾಲಯ ನಿರ್ಮಿಸಿಕೊಟ್ಟಿದ್ದು, ಸಂಸದರ ನೇತೃತ್ವದಲ್ಲಿ ಉದ್ಘಾಟನೆಯಾಗಬೇಕು ಎಂಬ ಕಾರಣಕ್ಕೆ, ಕೊಠಡಿ ಉದ್ಘಾಟನೆ ಮಾಡದಂತೆ ಅಡ್ಡಿಪಡಿಸುವ ಮೂಲಕ ತಮ್ಮ ವ್ಯಕ್ತಿತ್ವ ಏನೆಂಬುದನ್ನು ಪ್ರದರ್ಶಿಸಿದ್ದಾರೆ. ಆದರೆ, ನಮ್ಮ ಶಾಸಕರು ಆ ರೀತಿ ಮಾಡದೇ ಉದ್ಘಾಟನೆಗೆ ಅನವು ಮಾಡಿಕೊಟ್ಟಿದ್ದಾರೆ. ಇದು ಶಾಸಕರ ದೊಡ್ಡ ಗುಣ. ಬಿಜೆಪಿಯವರು ವೈಯಕ್ತಿಕ ನಿಂದನೆಗಳನ್ನು ಬಿಡಬೇಕು. ಅಭಿವೃದ್ಧಿ ವಿಚಾರವಾಗಿ ಮಾತಾಡೋಣ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಪ್ರಧಾನಿಯಾಗಿ ನೂರು ದಿನ: ಹಿನ್ನಡೆಯೋ, ಮುನ್ನಡೆಯೋ?

ಸುದ್ದಿಗೋಷ್ಠಿಯಲ್ಲಿ ಅಡ್ಡಗಲ್ಲು ಶ್ರೀಧರ್, ಜನಾರ್ಧನ್, ಆವಲರೆಡ್ಡಿ, ಲಕ್ಷ್ಮಣ್‌ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...