ಬೆಳಗಾವಿಯ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಬುಧವಾರ ತಡರಾತ್ರಿ (ಏಪ್ರಿಲ್ 03) ಈ ಘಟನೆ ನಡೆದಿದ್ದು ಅಣ್ಣಪ್ಪ ಬಸಪ್ಪ ನಿಂಬಾಳ ಅವರ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.
ಕೊಲೆಯಾದ ಅಣ್ಣಪ್ಪ ಬಸಪ್ಪ ನಿಂಬಾಳ ಅವರು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಆಪ್ತರಾಗಿದ್ದು, ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಮೈಸೂರು | ಎಸ್‌ಡಿಪಿಐ ಕಾರ್ಯಕರ್ತ, ಧಾರ್ಮಿಕ ಮುಖಂಡನ ಭೀಕರ ಹತ್ಯೆ
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಈ ಘಟನೆ ನಡೆದಿದ್ದು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಲ್ಲೆಯ ಭೀಕರತೆಗೆ ಬಸಪ್ಪ ನಿಂಬಾಳ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಈ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಹಣಕಾಸಿನ ವಿಚಾರವಾಗಿ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಥಣಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.