ನ್ಯಾಷನಲ್ ಹೆರಾಲ್ಡ್ ಕೇಸ್ ಗೆ ಸಂಬಂಧಿಸಿದಂತೆ ಶ್ರೀಮತಿ ಸೋನಿಯಾ ಹಾಗೂ ರಾಹುಲ್ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು ಪ್ರತಿಪಕ್ಷದ ಮುಖಂಡರನ್ನು ಹಣಿಯುವ ಕೇಂದ್ರ ಸರಕಾರದ ಈ ಷಡ್ಯಂತರವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆದಿಉಡುಪಿಯಲ್ಲಿರುವ ಆದಾಯ ತೆರಿಗೆ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಕೇಂದ್ರ ಬಿಜೆಪಿ ಸರ್ಕಾರವು ದ್ವೇಷ ರಾಜಕಾರಣವನ್ನು ಮಾಡುತ್ತಿದ್ದು ಪ್ರಜಾಪ್ರಭುತ್ವದ ಅಂಗಸಂಸ್ಥೆಗಳಾದ ಈ.ಡಿ, ಸಿ.ಬಿ.ಐ, ಐ.ಟಿ’ಯನ್ನು ದುರುಪಯೋಗ ಪಡಿಸಿಕೊಂಡು ತನ್ನ ಕೈಗೊಂಬೆಗಳಂತೆ ಮಾಡಿ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುವ ಕೆಲಸ ಕೇಂದ್ರ ಬಿಜೆಪಿ ಸರ್ಕಾರ ಮಾಡುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ ಸದಸ್ಯರು, ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ಎಂ ಏ ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾಂಗ್ರೆಸ್ ಪಕ್ಷದ ನಾಯಕರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಶುಭದ್ ರಾವ್, ಗೀತಾ ವಾಘ್ಲೆ, ಸುರೇಶ್ ಶೆಟ್ಟಿ ಬನ್ನಂಜೆ, ಪ್ರಶಾಂತ್ ಜತ್ತನ್ನ, ಜಯಕುಮಾರ್, ಸಜ್ಜನ್ ಶೆಟ್ಟಿ, ಗೋಪಿನಾಥ್ ಭಟ್, ಅರವಿಂದ್ ಪೂಜಾರಿ, ಪ್ರದೀಪ್ ಶೆಟ್ಟಿ, ನವೀನ್ ಚಂದ್ರ ಸುವರ್ಣ, ರಾಘವೇಂದ್ರ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಪಕ್ಷದ ನಾಯಕರಾದ ರಾಜು ಪೂಜಾರಿ, ಮುರಳಿ ಶೆಟ್ಟಿ, ದಿನೇಶ್ ಪುತ್ರನ್, ಹರೀಶ್ ಕಿಣಿ, ಭುಜಂಗ ಶೆಟ್ಟಿ, ಕೀರ್ತಿ ಶೆಟ್ಟಿ, ಅಮೃತ್ ಶೆಣೈ, ಫಾದರ್ ವಿಲಿಯಮ್ ಮಾರ್ಟಿಸ್, ಸದಾಶಿವ ಕಟ್ಟೆಗುಡ್ಡೆ, ಮಹಾಬಲ ಕುಂದರ್, ಕೃಷ್ಣ ಶೆಟ್ಟಿ ಬಜಗೋಳಿ, ವಿಶ್ವಾಸ್ ಅಮೀನ್, ಹಬೀಬ್ ಆಲಿ, ವೆರೋನಿಕಾ ಕರ್ನೇಲಿಯೋ, ಡಾ. ಸುನಿತಾ ಶೆಟ್ಟಿ, ಜ್ಯೋತಿ ಹೆಬ್ಬಾರ್, ಮೀನಾಕ್ಷಿ ಮಾಧವ ಬನ್ನಂಜೆ, ರೋಶ್ನಿ ಒಲಿವರ್, ಸತೀಶ್ ಕೊಡವೂರು, ಸಂಧ್ಯಾ ತಿಲಕ್‌ರಾಜ್, ಸುಕನ್ಯಾ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಸದಸ್ಯರು, ಮಹಿಳಾ ಕಾಂಗ್ರೆಸ್ ಸಮಿತಿಯ ಸದಸ್ಯರು, ಯುವ ಕಾಂಗ್ರೆಸ್ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.