ದಕ್ಷಿಣ ಕನ್ನಡ | ಕರಾವಳಿಯಲ್ಲಿ 30 ವರ್ಷ ಕಮಲ ನೋಡಿದ ಜನ ಈಗ ಬದಲಾವಣೆ ಬಯಸಿದ್ದಾರೆ: ದಿನೇಶ್ ಗುಂಡೂರಾವ್

Date:

Advertisements

“ಕರಾವಳಿಯಲ್ಲಿ ಕಳೆದ 30 ವರ್ಷದಿಂದ ಕಮಲವನ್ನ ನೋಡಿರುವ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.

ಮಂಗಳೂರಿನಲ್ಲಿ‌ ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ನಾಮಪತ್ರ ಸಲ್ಲಿಕೆ ವೇಳೆ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು‌ ಸಚಿವರು ಮಾತನಾಡುತ್ತಿದ್ದರು.

“ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಹೋರಾಟ ಪ್ರದರ್ಶಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಈ ಬಾರಿ ಕೈ ಕಾರ್ಯಕರ್ತರು ಒಗ್ಗಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪಣ ತೊಟ್ಟಿದ್ದಾರೆ. ಕರಾವಳಿಯ ಜನರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಆಶೀರ್ವಾದ ಮಾಡಬೇಕು” ಎಂದು ಮನವಿ ಮಾಡಿದರು.

Advertisements

ಇದನ್ನು ಓದಿದ್ದೀರಾ?   ದಕ್ಷಿಣ ಕನ್ನಡ | ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ, ಅಮಿತ್ ಶಾ ಸುಳ್ಳು ಹೇಳಿಕೊಂಡು ಹೋಗಿದ್ದಾರೆ: ದಿನೇಶ್ ಗುಂಡೂರಾವ್

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 30 ವರ್ಷಗಳಿಂದ ಜನರು ಬಿಜೆಪಿಯನ್ನು ನೋಡಿ ಆಗಿದೆ. ಈ ಬಾರಿ ಕರಾವಳಿ ಭಾಗದ ಜನರು ಬದಲಾವಣೆ ಬಯಸಿದ್ದಾರೆ. ಚುನಾವಣೆ ಸಂದರ್ಭಗಳಲ್ಲಿ ಬಿಜೆಪಿ ಯಾವ ರೀತಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದನ್ನು ಜನರು ನೋಡುತ್ತಿದ್ದಾರೆ” ಎಂದು ಹೇಳಿದರು.

“ಎಲೆಕ್ಟೋರಲ್ ಬಾಂಡ್ ಬಗ್ಗೆ ಬಿಜೆಪಿಯವರ ಬಳಿ ಉತ್ತರವಿಲ್ಲ. ಕೇಂದ್ರ ಬಿಜೆಪಿ ಸರ್ಕಾರದ ತಾರತಮ್ಯ ನೀತಿಗಳು ಇಂದು ಜನರಿಗೆ ಅರ್ಥವಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ ಸಾಮರಸ್ಯ ನೆಲೆಗೊಳ್ಳಬೇಕು. ಪ್ರಮುಖವಾಗಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಬೆಂಬಲಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಜನರಲ್ಲಿಯೂ ಕೂಡ ಹೊಸ ಆಲೋಚನೆ ಕುಡಿಯೊಡೆದಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.‌

ದಿನೇಶ್ ಗುಂಡೂರಾವ್

ಇದನ್ನು ಓದಿದ್ದೀರಾ?   ದಕ್ಷಿಣ ಕನ್ನಡ | ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರ ಆಶೀರ್ವಾದ ಪಡೆದು ಬಳಿಕ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಿಂದ ಬೃಹತ್‌ ಮೆರವಣಿಗೆಯಲ್ಲಿ ಸಾಗಿ ಪಕ್ಷದ ಮುಖಂಡರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ನಾಮಪತ್ರ ಸಲ್ಲಿಸಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ.ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್, ಮಾಜಿ ಸಚಿವ, ಜಿಲ್ಲಾ ಚುನಾವಣಾ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ, ಅಶೋಕ್ ಕುಮಾರ್ ರೈ, ಮಾಜಿ ಸಚಿವ ಜೆ.ಆರ್‌.ಲೋಬೊ, ಕೆಪಿಸಿಸಿ ಉಪಾಧ್ಯಕ್ಷ ಐವನ್‌ ಡಿಸೋಜ, ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಇನಾಯತ್ ಅಲಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X