ಬಾಗೇಪಲ್ಲಿ ಪುರಸಭೆ | ಕಾಂಗ್ರೆಸ್‌ಗೆ ಒಲಿದ ಅಧ್ಯಕ್ಷಗಾದಿ; ಕಾರ್ಯಕರ್ತರಲ್ಲಿ ಸಂಭ್ರಮ

Date:

ಬಾಗೇಪಲ್ಲಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆಯುವ ಮೂಲಕ ಜಯಭೇರಿ ಸಾಧಿಸಿತು. ಅಧ್ಯಕ್ಷರಾಗಿ 23ನೇ ವಾರ್ಡಿನ ಸದಸ್ಯ ಎ.ಶ್ರೀನಿವಾಸ್, ಉಪಾಧ್ಯಕ್ಷರಾಗಿ 8ನೇ ವಾರ್ಡಿನ‌ ಸದಸ್ಯೆ ಸುಜಾತ ನರಸಿಂಹನಾಯ್ಡು ಅವಿರೋಧ ಅಯ್ಕೆಯಾದರು.

- Advertisement -

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಎ.ಶ್ರೀನಿವಾಸ್, ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನ ಸುಜಾತ ನರಸಿಂಹನಾಯ್ಡು ನಾಮಪತ್ರ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಬಾಗೇಪಲ್ಲಿ ಪಟ್ಟಣ ಅಭಿವೃದ್ದಿ ದೃಷ್ಠಿಯಿಂದ ನಮ್ಮ ಸದಸ್ಯರ ಬೆಂಬಲದೊಂದಿಗೆ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಪಟ್ಟಣದ ಎಲ್ಲಾ ವಾರ್ಡ್‌ಗಳ ನಾಗರೀಕರ ಕಷ್ಟಗಳಿಗೆ ಸ್ಪಂದಿಸಿ, ಮೂಲ ಸೌಕರ್ಯಗಳ ಅಭಿವೃದ್ದಿಗೆ ಕೈಜೋಡಿಸಿ ಎಂದು ಸಲಹೆ ನೀಡಿದರು.

ಬಾಗೇಪಲ್ಲಿಯ ಪುರಸಭೆ ಅದ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾನೂನಿನ ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಪೊಲೀಸ್ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನೂತನ ಅದ್ಯಕ್ಷ, ಉಪಾಧ್ಯಕ್ಷರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ಸದಸ್ಯರಾದ ಶ್ರೀನಿವಾಸ ರೆಡ್ಡಿ, ಅಶೋಕ ರೆಡ್ಡಿ, ಎ.ನಂಜುಂಡಪ್ಪ, ಗಡ್ಡಂ ರಮೇಶ್, ಗುಲ್ನಾಜ್‌ಬೇಗಂ, ಜಭಿವುಲ್ಲಾ ಖಾನ್, ಎ.ಶ್ರೀನಾಥ, ಶಭಾನಾ, ಪದ್ಮ ಮಲ್ಲೇಶ್, ಹಸೀನಾ ಮನ್ಸೂರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ವಿ.ಪ್ರಭಾಕರರೆಡ್ಡಿ, ಮುಖಂಡರಾದ ಗೂಳೂರು ರಮೇಶ್‌ ಬಾಬು, ಜಯಪ್ರಕಾಶ್‌ ನಾರಾಯಣ್, ಎ.ವಿ.ಪೂಜಪ್ಪ, ಮಂಜುನಾಥರೆಡ್ಡಿ, ಲಕ್ಷ್ಮೀ ನರಸಿಂಹಪ್ಪ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...