ನಾಲತವಾಡ ಪಟ್ಟಣ ಪಂಚಾಯತ್‌: ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅವಿರೋಧ ಆಯ್ಕೆ

Date:

Advertisements

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಆಡಳಿತ ನಿರೀಕ್ಷೆಯಂತೆ ಕಾಂಗ್ರೆಸ್ ಸದಸ್ಯರ ಪಾಲಾಗಿದೆ.

14 ಸದಸ್ಯರ ಬಲದ ಪಟ್ಟಣ ಪಂಚಾಯಿತಿನಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಘೋಷಿಸಲಾಯಿತು.

ಸಾಮಾನ್ಯ ಮಹಿಳೆಗೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ವಿಜಯಲಕ್ಷ್ಮಿ ಇಳಕಲ್, ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಗಂಗನಗೌಡರ ಇವರಿಬ್ಬರು ನಾಮಪತ್ರ ಸಲ್ಲಿಸಿದ್ದರು.‌ ಇಬ್ಬರ ನಾಮಪತ್ರಗಳು ಕ್ರಮಬದ್ಧವಾಗಿದ್ದು, ವಿಜಯಲಕ್ಷ್ಮಿ ಇಳಕಲ್ ಅಧ್ಯಕ್ಷರಾಗಿ, ಬಸವರಾಜ ಗಂಗನಗೌಡರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಹಶೀಲ್ದಾರ್ ಬಲರಾಮ ಕಟ್ಟಿಮನಿ ಘೋಷಿಸಿದರು.

Advertisements

ಪಟ್ಟಣ ಪಂಚಾಯತ್ ಚುನಾವಣಾ ಪ್ರಕ್ರಿಯೆಯಲ್ಲಿ ಸಾಮಾನ್ಯವಾಗಿ ವಿಧಾನಸಭೆ, ಲೋಕಸಭೆ ಸದಸ್ಯರಿಗೆ ಪಾಲ್ಗೊಳ್ಳಲು ಅವಕಾಶವಿರುತ್ತದೆ. ಈ ಹಿನ್ನೆಲೆಯಲ್ಲಿ ಶಾಸಕ ಸಿ ಎಸ್ ನಾಡಗೌಡ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾದರು.

ಅಧ್ಯಕ್ಷ ಸ್ಥಾನಕ್ಕೆ ಎಸ್ ಬಿ ಗಂಗನಗೌಡರ ಸೂಚಕರಾಗಿ ಸಹಿ ಮಾಡಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಸಂಗಣ್ಣ ಬಾರಡ್ಡಿ ಸೂಚಕರಾಗಿ ಸಹಿ ಮಾಡಿದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಈರಣ್ಣ ಕೊಣ್ಣೂರು ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ವಿಜಯೋತ್ಸವ ಸಂದರ್ಭದಲ್ಲಿ ಶಾಸಕರಾದ ಸಿ ಎಸ್ ನಾಡಗೌಡ ಮಾತನಾಡಿ, ನಾಲತವಾಡ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಡವರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಹೊಸದಾಗಿ ಆಯ್ಕೆಯಾಗಿರುವ ಅಧ್ಯಕ್ಷ ಉಪಾಧ್ಯಕ್ಷರಿಗೆ ಕಿವಿಮಾತು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X