ಬಿಜೆಪಿ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ನುಗ್ಗಿ, ಆತನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕೇಳಿಬಂದಿದೆ.
ಚುನಾವಣೆಗೂ ಮೊದಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಅವರನ್ನು ಬೆಂಬಲಿಸಿದ್ದ ಕಾರ್ಯಕರ್ತನ ಮೇಲೆ ಹಿಂದು ಸಂಘಟನೆ ಕಾರ್ಯಕರ್ತನೊಬ್ಬ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂಬಾತ ಚುನಾವಣೆಗೂ ಮೊದಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಅಲ್ಲದೆ, ಬಿಜೆಪಿ ತೊರೆದ ಕಾಂಗ್ರೆಸ್ ಸೇರಿದ ಅಶೋಕ್ ರೈ ಪರ ಪ್ರಚಾರ ನಡೆಸಿದ್ದರು.
ಆತನ ನಡೆಯಿಂದ ಸಿಟ್ಟಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಬುಧವಾರ ಪ್ರವೀಣ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಗೀಡಾದ ಪ್ರವೀಣ್ಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಇದ್ರೀಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ; ಸಿಎಂ ವಿರುದ್ಧ ಆರೋಪಿ ಪುನೀತ್ ಕೆರೆಹಳ್ಳಿ ವಾಗ್ದಾಳಿ