ಶಹಾಪುರದಲ್ಲಿ ಆಗಸ್ಟ್ 9ರಂದು ಸಂವಿಧಾನ ಜನಜಾಗೃತಿ ಸಮಾವೇಶ

Date:

Advertisements

ಆಗಸ್ಟ್ 9ರಂದು ಯಾದಗಿರಿ ಜಿಲ್ಲಾ ಮಟ್ಟದ ಸಂವಿಧಾನ ಜನಜಾಗೃತಿ ಸಮಾವೇಶ ಶಹಾಪುರ ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಪ್ರವಾಸಿ ‌ಮಂದಿರದಲ್ಲಿ ಪ್ರಮುಖರಾದ ಗಿರೆಪ್ಪಗೌಡ ಬಾಣತಿಹಾಳ, ಡಾ. ನೀಲಕಂಠ ಬಡಿಗೇರ, ಶಾಂತಪ್ಪ ಕಟ್ಟಿಮನಿ, ರಾಯಪ್ಪ ಸಾಲಿಮನಿ, ಸೈಯದ್ ಖಾದ್ರಿ ನೇತೃತ್ವದಲ್ಲಿ ಕರ ಪತ್ರ ಬಿಡುಗಡೆ ಮಾಡಲಾಯಿತು.

ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ನೀಲಕಂಠ ಬಡಿಗೇರ ಮಾತನಾಡಿ, “ಸಂವಿಧಾನದ ಪ್ರಸ್ತಾವನೆಯಲ್ಲಿ ಧರ್ಮನಿರಾಪೇಕ್ಷತೆ, ಸಮಾಜವಾದ ಪದಗಳನ್ನು ಉಳಿಸಲು ಹಾಗೂ ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ನೂತನ ವಕ್ಪ್ (ತಿದ್ದುಪಡಿ) ಕಾಯ್ದೆ 2025ನ್ನು ವಿರೋಧಿಸಿ, ಬೌದ್ಧರ ಸಂವಿಧಾನಿಕ ಹಕ್ಕುಗಳನ್ನು ನಿರಾಕರಿಸುವ ಬುದ್ಧಗಯಾ ಟೆಂಪಲ್ ಬಿ ಟಿ ಆಕ್ಟ್ 1949 ರದ್ದತಿಗೆ ಒತ್ತಾಯಿಸಿ ಜನಜಾಗೃತಿ ಸಮಾವೇಶ ಆಯೋಜನೆ ‌ಮಾಡಲಾಗಿದೆʼ ಎಂದು ತಿಳಿಸಿದರು.

ಸಮಾವೇಶದಲ್ಲಿ ಸಂವಿಧಾನ ತಜ್ಞ ವಿಧಾನಸಭೆಯ ಮಾಜಿ‌ ಸ್ಪೀಕರ್ ರಮೇಶಕುಮಾರ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ, ಸಮಾಜ ಕಲ್ಯಾಣ ಸಚಿವ ಡಾ‌.ಹೆಚ್.ಸಿ.ಮಹಾದೇವಪ್ಪಾ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ‌, ಆರ್.ಬಿ.ತಿಮ್ಮಾಪುರ ಸೇರಿದಂತೆ ಅನೇಕ ಗಣ್ಯರು ಆಗಮಿಸಲ್ಲಿದ್ದು, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸಮಾವೇಶದ ನೇತೃತ್ವ ವಹಿಸಲ್ಲಿದ್ದಾರೆʼ ಎಂದರು.

Advertisements

ಅಯ್ಯಣ ಕನ್ಯಾಕೋಳ್ಳುರ್ ಮಾತನಾಡಿ, ʼಸಂವಿಧಾನ ಜನಜಾಗೃತಿ ಸಮಾವೇಶದಲ್ಲಿ ಜಿಲ್ಲೆಯ ಎಲ್ಲಾ ಪ್ರಗತಿಪರ ಚಿಂತಕರು, ಬುದ್ದಿಜೀವಿಗಳು, ಸಾಹಿತಿಗಳು, ಹೋರಾಟಗಾರರು, ಯುವಕರು, ಎಲ್ಲ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕುʼ ಎಂದು ಕೋರಿದರು.

ಈ ಸಂದರ್ಭದಲ್ಲಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ಸಮುದಾಯದ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X