ಬೀದರ್‌ | ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನ ಜೀವಾಳ : ಪ್ರೊ.ಬಿ.ಎಸ್.ಬಿರಾದಾರ್

Date:

Advertisements

ಭಾರತ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನ ಜೀವಾಳ ಹಾಗೂ ಆಧಾರ ಸ್ತಂಭವಾಗಿದೆ. ಹೀಗಾಗಿ ಜಗತ್ತಿನಲ್ಲಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಸದೃಢವಾಗಿ ಆಡಳಿತ ನಡೆಸುತ್ತಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಹೇಳಿದರು.

ಬೀದರ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತಾನಾಡಿ, ʼಸರ್ವರೂ ಸಂವಿಧಾನದ ಆಶಯಗಳನ್ನು ಗೌರವಿಸಬೇಕಾದ ಅಗತ್ಯವಿದೆ. ಯುವಕರು ತಮ್ಮ ಹಕ್ಕುಗಳೊಂದಿಗೆ ತಮ್ಮ ಕರ್ತವ್ಯ ಮರೆಯಬಾರದುʼ ಎಂದು ತಿಳಿಸಿದರು.

ʼಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಭವಿಷ್ಯ ನಿರ್ಮಿಸಿಕೊಳ್ಳಬೇಕು. ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ತಮ್ಮ ಹಕ್ಕುಗಳಂತೆ ಕರ್ತವ್ಯಗಳು ಪಾಲಿಸಬೇಕಾಗಿದೆʼ ಎಂದರು.

Advertisements

ಕುಲಸಚಿವರಾದ (ಆಡಳಿತ) ಸುರೇಖಾ ಕೆ.ಎ.ಎಸ್. ಅವರು ಮಾತನಾಡಿ, ʼಸದೃಢ ಭಾರತದ ನಿರ್ಮಾಣದಲ್ಲಿ ದೇಶದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಿ ಆದರ್ಶ ಭಾರತವನ್ನು ನಿರ್ಮಿಸೋಣʼ ಎಂದರು.

ಇದೇ ಸಂದರ್ಭದಲ್ಲಿ 76ನೆಯ ಗಣರಾಜ್ಯೋತ್ಸವ ಸಮಾರಂಭದ ಪ್ರಯುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರಬಂಧ, ಆಶುಭಾಷಣ, ರಸಪ್ರಶ್ನೆ ಹಾಗೂ ರಂಗೋಲಿ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣರಾಜ್ಯೋತ್ಸವದಲ್ಲಿ ಜೈಶ್ರೀರಾಮ್‌ ಘೋಷಣೆ; ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಭಾವಚಿತ್ರ ಇಡದೆ ಅವಮಾನ

ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ನಾಗಭೂಷಣ ಕಮಠಾಣೆ, ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ.ಟಿ, ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ರವೀಂದ್ರನಾಥ ವಿ.ಗಬಾಡಿ ಹಾಗೂ ಅಧ್ಯಾಪಕರು, ವಿದ್ಯಾರ್ಥಿಗಳು ಹಾಜರಿದ್ದರು. ಡಾ.ಶಾಂತಕುಮಾರ ಚಿದ್ರಿ ವಚನಗಾಯನ ನಡೆಸಿಕೊಟ್ಟರು. ಡಾ.ಮುಸ್ತಾಕೀಮ್‌ ದೇಶಭಕ್ತಿ ಗೀತೆಗಳನ್ನು ಹಾಡಿದರು. ಡಾ.ಕೃಷ್ಣ ಚಕ್ರವರ್ತಿ ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು. ಡಾ.ಅಂಬರೀಶ ವೀರನಾಯಕರ ವಂದಿಸಿದರು. ಡಾ.ರಾಮಚಂದ್ರ ಗಣಾಪೂರ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X