ಎಷ್ಟೇ ಕಷ್ಟವಾದರೂ ಸಂವಿಧಾನ ಉಳಿಸಿಕೊಳ್ಳುವ ಅಗತ್ಯವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

  • ರಾಜ್ಯ ವಕೀಲರ ಪರಿಷತ್ ಸಮಾವೇಶ ಉದ್ಘಾಟಿಸಿ ಅಭಿಮತ
  • ‘ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇರಬೇಕು’
  • ‘ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಕಾಲದಲ್ಲೂ ಇದ್ದಾರೆ’

ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ರಾಜ್ಯ ವಕೀಲರ ಪರಿಷತ್ ಶನಿವಾರ ಮೈಸೂರಿನಲ್ಲಿ ಆಯೋಜಿಸಿದ್ದ 10ನೇ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, “ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಭಾಷಣವನ್ನು ಎಲ್ಲರೂ ಓದಿದರೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ. ಸಮಾಜ ನನಗೇನು ಮಾಡಿದೆ ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನು ಮಾಡಿದೆ ಎಂದು ಕೇಳಿಕೊಳ್ಳುವುದು ಮುಖ್ಯ. ಆ ದೃಷ್ಟಿಯಿಂದ ಚಿಂತನೆ ಮಾಡಬೇಕು” ಎಂದರು.

“ಕೆಳ ನ್ಯಾಯಾಲಯಗಳಲ್ಲಿ ಮೀಸಲಾತಿ ಇದೆ. ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇಲ್ಲ. ಅಲ್ಲಿ ಮೀಸಲಾತಿ ಜಾರಿಯಾದರೆ ಹೆಚ್ಚು ಉಪಯುಕ್ತವಾದ ನ್ಯಾಯದಾನ ನೀಡಲು ಸಾಧ್ಯ. ಸಂವಿಧಾನ ಬರುವ ಮುನ್ನ ಒಂದು ರೀತಿಯ ನ್ಯಾಯದಾನ ವ್ಯವಸ್ಥೆ ಇತ್ತು. ಸಂವಿಧಾನ ಬಂದ ನಂತರ ಭಿನ್ನವಾಗಿದೆ. ಬ್ರಿಟಿಷರ ಕಾಲದಲ್ಲಿ ಹಾಗೂ ಸ್ವಾತಂತ್ರ್ಯ ದೊರೆತ ನಂತರ ಭಿನ್ನವಾಗಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಎಲ್ಲರಿಗೂ ಸಮಾನ ನ್ಯಾಯ ದೊರಕಬೇಕೆಂದು ನಮ್ಮ ಸಂವಿಧಾನ ಬಹಳ ಸ್ಪಷ್ಟವಾಗಿ ಹೇಳಿದೆ. ಸುಪ್ರಸಿದ್ಧ ವಕೀಲರನ್ನು ಕರ್ನಾಟಕ ಬಾರ್ ಕೌನ್ಸಿಲ್ ಕಳುಹಿಸಿಕೊಟ್ಟಿರುವುದು ಹೆಮ್ಮೆಯ ವಿಚಾರ. ಬಹಳ ಜನ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿದ್ದಾರೆ, ತಜ್ಞರಾಗಿದ್ದಾರೆ. ಕರ್ನಾಟಕದಲ್ಲಿ ಬಹಳ ಜನ ಪ್ರತಿಭಾವಂತ ವಕೀಲರಿದ್ದಾರೆ. ಯಾರು ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ. ಅವಕಾಶದಿಂದ ವಂಚಿತರಾದವರು ದಡ್ಡರು ಹಾಗೂ ಅವಕಾಶ ದೊರತವರು ಬುದ್ಧಿವಂತರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | 2 ಗಂಟೆ 10 ನಿಮಿಷಗಳ ಕ್ರೌರ್ಯ, 3 ನಿಮಿಷಗಳ ತೋರಿಕೆಯ ಕಾರ್ಯ

“ಸಂವಿಧಾನ ಎಲ್ಲರಿಗೂ ಅವಕಾಶ ಕಲ್ಪಿಸಿಕೊಟ್ಟಿರುವುದರಿಂದ ಕೆಳವರ್ಗದವರೂ ಕೂಡ ಉನ್ನತ ಸ್ಥಾನಗಳಿಗೆ ಹೋಗಲು ಸಾಧ್ಯವಾಗುತ್ತದೆ. ನಾನು ಮೈಸೂರಿಗೆ ಬಂದಾಗ ಕುರುಬರಲ್ಲಿ ನಾನೊಬ್ಬನೇ ವಕೀಲ ಇದ್ದೆ. ಎಲ್ಲ ಮೇಲ್ವರ್ಗದವರೇ ವಕೀಲರಾಗಿದ್ದರು. ಕೆಳಜಾತಿಯವರಿಗೆ ವಕೀಲರಾಗುವುದು ಬೇಡ ಎಂದೂ ಹೇಳುತ್ತಿದ್ದರು. ನನಗೇ ಇದರ ಅನುಭವವಾಗಿದೆ” ಎಂದರು.

“ಶಾನುಭೋಗರೊಬ್ಬರು ಮಗನಿಗೆ ಕಾನೂನು ಕಲಿಸಬೇಡ ಎಂದು ತಮ್ಮ ತಂದೆಗೆ ಹೇಳಿದ್ದರು. ಅವರ ಮಾತು ಕೇಳಿ ಕಾನೂನು ಓದದೇ ಹೋಗಿದ್ದರೆ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ. ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಸಮುದಾಯದಿಂದ ಬಂದವರು. ಅವರಿಗೆ ಬರೋಡಾ ಮಹಾರಾಜರು ವಿದೇಶಕ್ಕೆ ತೆರಳಲು ಅವಕಾಶ ನೀಡದೆ ಹೋಗಿದ್ದರೆ, ಇಂಥ ಸಂವಿಧಾನ ಸಿಗುತ್ತಿರಲಿಲ್ಲ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...