ಸಂವಿಧಾನ ಪೀಠಿಕೆ ಜ್ಞಾಪಕ ಜನ ಜಾಥಾ ಅ. 4 ಕ್ಕೆ ತುಮಕೂರಿಗೆ ಆಗಮನ

Date:

ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ,ಹುಬ್ಬಳಿಯಿಂದ ಬೆಂಗಳೂರಿಗೆ ಹೊರಟಿರುವ ಜಾಥಾ ಅಕ್ಟೋಬರ್ 4ರ ಗುರುವಾರ ತುಮಕೂರು ತಲುಪಲಿದ್ದು, ಅಕ್ಟೋಬರ್ 05ರ ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕಿಗೆ ತೆರಳಿ, ಫ್ರೀಡಂ ಪಾರ್ಕಿನಿಂದ ವಿಧಾನಸೌಧದ ವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಕುರುಬರ ಯುವ ವೇದಿಕೆ ಅಧ್ಯಕ್ಷ ಮಹಾಲಿಂಗಯ್ಯ ತಿಳಿಸಿದರು.

- Advertisement -

ತುಮಕೂರು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಅಹಿಂದ ಸಂಘಟನೆಯ ಮುಖಂಡರಾದ ಮುತ್ತಣ್ಣ ಎಸ್.ಶಿವಳ್ಳಿ ಅವರ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಅಹಿಂದ ಕಾರ್ಯಕರ್ತರು,ಮುಖಂಡರು ಅಕ್ಟೋಬರ್ 4ರ ಗುರುವಾರ ಬೆಳಗ್ಗೆ ಸಂವಿಧಾನ ಪೀಠಿಕೆ ಜ್ಞಾಪಕ ಜನ ಜಾತಾಯಾತ್ರೆ ಹೊರಡಲಿದ್ದು, ಗುರುವಾರ ಸಂಜೆ ತುಮಕೂರು ತಲುಪಿ ವಾಸ್ತವ್ಯ ಹೂಡಲಿದೆ.ಅಕ್ಟೋಬರ್ 05ರ ಶುಕ್ರವಾರ ತುಮಕೂರಿನಿಂದ ಹೊರಟು ಫ್ರೀಡಂ ಪಾರ್ಕಿಗೆ ತಲುಪಿ,ಅಲ್ಲಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಯಲಿದೆ.ಇದು ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ತುಂಬುವ ನಿಟ್ಟಿನಲ್ಲಿ ಅಹಿಂದ ವರ್ಗಗಳು ಸೇರಿದಂತೆ ಎಲ್ಲಾ ಶೋಷಿತ ಸಮುದಾಯಗಳು ಒಗ್ಗೂಡಿ ನಡೆಸುತ್ತಿರುವ ಜಾಥಾವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ತಮ್ಮ 45 ವರ್ಷಗಳ ರಾಜಕೀಯ ಜೀವನದಲ್ಲಿ ಒಂದು ಕಪ್ಪುಚುಕ್ಕೆ ಇಲ್ಲದ ಸಿದ್ದರಾಮಯ್ಯ ವಿರುದ್ದ ಮುಡಾ ಮತ್ತು ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಮ್ಮ ಅವರ ವಯುಕ್ತಿಕ ಭೂಮಿ ವಿವಾದವನ್ನು ಎಳೆದುತಂದು, ಅನಗತ್ಯ ಕಿರುಕುಳ ನೀಡುವ ಕೆಲಸವನ್ನು ವಿರೋಧಪಕ್ಷಗಳು ಕೇಂದ್ರ ಸರಕಾರದ ಬೆಂಬಲದೊಂದಿಗೆ ಮಾಡುತ್ತಿವೆ.ಹಾಗಾಗಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಾವಿದ್ದೇವೆ ಎಂಬುದನ್ನು ಸಾರುವ ಉದ್ದೇಶದಿಂದ ಈ ಬೃಹತ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಿದ್ದರಾಮಯ್ಯ ಹಿತೈಷಿಗಳು,ಅಭಿಮಾನಿಗಳು ಅಹಿಂದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಿದ್ದರಾಮಯ್ಯ ಅವರಿಗೆ ನೈತಿಕ ಸ್ಥೆöÊರ್ಯ ತುಂಬುವ ಕೆಲಸ ಮಾಡಬೇಕೆಂದು ಕೆ.ಮಹಾಲಿಂಗಯ್ಯ ಮನವಿ ಮಾಡಿದರು.

ಅಹಿಂದ ಮಹಿಳಾ ಘಟಕದ ಅಧ್ಯಕ್ಷೆ ಸುಕನ್ಯ ಮಾತನಾಡಿ,ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವಿತ ಅವಧಿಯಲ್ಲಿ ಎಂದಿಗೂ ಕಿಚನ್ ಕ್ಯಾಬಿನೆಟ್‌ಗೆ ಅವಕಾಶ ನೀಡಿದವರಲ್ಲ. ಇಂತಹ ವ್ಯಕ್ತಿಯ ವಿರುದ್ದ ಅರಿಸಿನ ಕುಂಕುಮಕ್ಕೆಂದು ಪತ್ನಿಗೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ನೀಡಿದ್ದ ಭೂಮಿಯನ್ನು ವಿವಾದ ಮಾಡಿ, ಅವರ ನೈತಿಕ ಸ್ಥೖರ್ಯ ಕುಗ್ಗಿಸುವ ಕೆಲಸವನ್ನು ಬಿಜೆಪಿ-ಜೆಡಿಎಸ್ ಮಾಡುತ್ತಿದೆ.ಇದನ್ನು ಖಂಡಿಸಿ,ಸಿದ್ದರಾಮಯ್ಯ ಅವರ ಬೆನ್ನಿಗೆ ಅಹಿಂದ ಇದೆ ಎಂಬುದು ತೋರ್ಪಡಿಸುವ ಉದ್ದೇಶದಿಂದ ಈ ಜಾಥಾ ಹಮ್ಮಿಕೊಳ್ಳಲಾಗಿದೆ.ಗ್ಯಾರೆಂಟಿ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳಬೇಕಿದೆ.ಬೆಂಗಳೂರಿನಲ್ಲಿ ನಡೆಯುವ ಪಾದಯಾತ್ರೆಗೆ ತುಮಕೂರಿನಿಂದ ಅಹಿಂದ ಕಾರ್ಯಕರ್ತರು, ಮುಖಂಡರು ಹೊರಡಲು ಸರಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.ಅಹಿಂದ ವರ್ಗದವರು, ಸಿದ್ದರಾಮಯ್ಯ ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಪಾದಯಾತ್ರೆ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಆದಿಲ್,ಅಹಿಂದ ರಾಷ್ಟ್ರೀಯ ಸಂಘಟನೆಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸುನಿತಾ ನಟರಾಜ್, ನಿರ್ದೇಶಕರಾದ ಪ್ರೇಮ,ಲಕ್ಷಿö್ಮನಾರಾಯಣ ರಾಗಿ ಮಲ್ಲೇನಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...