ತುಮಕೂರಿನಲ್ಲಿ 244.02 ಕೋಟಿ ರೂ.ವೆಚ್ಚದಲ್ಲಿ 3 ಮೇಲ್ಸೇತುವೆ ನಿರ್ಮಾಣ: ಸಚಿವ ವಿ.ಸೋಮಣ್ಣ ಸ್ಥಳ ಪರಿಶೀಲನೆ

Date:

ರಸ್ತೆ ಹಾಗೂ ರೈಲು ಸಾರಿಗೆಯನ್ನು ಇನ್ನಷ್ಟು ಸುಗಮ ಹಾಗೂ ಸುರಕ್ಷಿತವಾಗಿಸಲು ನಗರದಲ್ಲಿ ರೈಲ್ವೆ ಇಲಾಖೆಯಿಂದ ಕ್ಯಾತ್ಸಂದ್ರ, ಬಡ್ಡಿಹಳ್ಳಿ, ಬಟವಾಡಿ ಪ್ರದೇಶಗಳಲ್ಲಿ 244.02 ಕೋಟಿ ರೂ. ವೆಚ್ಚದಲ್ಲಿ 3 ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಜಲ ಶಕ್ತಿ ಮತ್ತು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.

- Advertisement -

ತುಮಕೂರು ನಗರದ ಬಟವಾಡಿ ರೈಲ್ವೇಗೇಟ್ ಬಳಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 5 ಮೇಲ್ಸೇತುವೆ ಕಾಮಗಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ನಗರದಲ್ಲಿ 3, ನಗರದ ಹೊರ ವಲಯದ ಹರಿಯೂರು(ಮಲ್ಲಸಂದ್ರ) ಬಳಿ 1, ಗುಬ್ಬಿ ತಾಲ್ಲೂಕಿನ ನಿಟ್ಟೂರು ರೈಲ್ವೇ ಸ್ಟೇಷನ್ ಬಳಿ 1 ಸೇರಿ ಒಟ್ಟು 5 ರೈಲ್ವೆ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಗರದ ಕ್ಯಾತ್ಸಂದ್ರ ಸ್ಟೇಷನ್-ಮೈದಾಳ ಗೇಟ್ ನಡುವಿನ ಮೇಲ್ಸುತುವೆಗಾಗಿ 57.3 ಕೋಟಿ ರೂ., ಬಡ್ಡಿಹಳ್ಳಿ ಗೇಟ್ ಅಗ್ನಿಶಾಮಕ ದಳದ ಬಳಿ ಮೇಲ್ಸೇತುವೆ ನಿರ್ಮಾಣಕ್ಕಾಗಿ 89.03 ಕೋಟಿ ರೂ., ಬಟವಾಡಿ ಗೇಟ್ ಬಳಿ ಸೇತುವೆ ನಿರ್ಮಾಣಕ್ಕಾಗಿ 97.69 ಕೋಟಿ ರೂ., ಹರಿಯೂರು ರಸ್ತೆ ಬಳಿ ಮೇಲ್ಸೆತುವೆ ನಿರ್ಮಿಸಲು 55.99 ಕೋಟಿ ರೂ., ಹಾಗೂ ತುಮಕೂರು-ಮೈಸೂರು ರಸ್ತೆ ನಿಟ್ಟೂರು ರೈಲ್ವೆ ಸ್ಟೇಷನ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲು 50.57 ಕೋಟಿ ರೂ. ಸೇರಿದಂತೆ 5 ಮೇಲ್ಸೆತುವೆಗಳ ನಿರ್ಮಾಣಕ್ಕೆ ಒಟ್ಟು 350 ಕೋಟಿ ರೂ.ಗಳಿಗೆ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.

ಬಟವಾಡಿ ಬಳಿ ನಿರ್ಮಿಸಲಿರುವ ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರೊಂದಿಗೆ ಚರ್ಚಿಸಿದ ಅವರು, ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕಾಮಗಾರಿ ನಿರ್ಮಾಣ ಮಾಡಲಾಗುವುದು. ಅಭಿವೃದ್ಧಿ ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

ಕಾಮಗಾರಿ ನಡೆಯುವ ಸ್ಥಳಕ್ಕೆ ಸಂಬAಧಿಸಿದ ದಾಖಲೆ, ನೀರಿನ ಪೈಪ್ ಲೈನ್, ವಿದ್ಯುತ್ ಲೈನ್ ಸೇರಿದಂತೆ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಮಹಾನಗರ ಪಾಲಿಕೆ ಇಂಜಿನಿಯರ್‌ಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರ ಶಾಸಕ ಜ್ಯೋತಿ ಗಣೇಶ್, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ರೈಲ್ವೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...