ವಿಟ್ಲ, ಉಪ್ಪಿನಂಗಡಿಗೆ ಅಗ್ನಿಶಾಮಕ ಠಾಣೆ ನಿರ್ಮಾಣ: 15 ದಿನದೊಳಗೆ ಜಾಗ ಮಂಜೂರಾತಿಗೆ ಅಶೋಕ್ ರೈ ಸೂಚನೆ

Date:

Advertisements

ವಿಟ್ಲ ಮತ್ತು ಉಪ್ಪಿನಂಗಡಿಗೆ ಅಗ್ನಿಶಾಮಕ ಠಾಣೆಯ ಅಗತ್ಯವಿದ್ದು, ಈ ವಿಚಾರವನ್ನು ಅಧಿವೇಶನದಲ್ಲೂ ಸರ್ಕಾರದ ಗಮನಕ್ಕೆ ತಂದಿದ್ದೇನೆಂದು ಹೇಳಿದ ಪುತ್ತೂರು ಶಾಸಕ ಅಶೋಕ್ ರೈ ಅವರು 15 ದಿನಗಳೊಳಗೆ ಜಾಗ ಮಂಜೂರಾತಿ ಮಾಡುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ಮಹಮ್ಮದ್ ಜುಲ್ಫಿಕರ್ ನವಾಝ್ ಕೆ ಪಿಯವರು ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, “ವಿಟ್ಲ ಮತ್ತು ಉಪ್ಪಿನಂಗಡಿಯಲ್ಲಿ ಅಗ್ನಿಶಾಮಕ ದಳ ಠಾಣೆ ನಿರ್ಮಾಣವಾಗುವಲ್ಲಿ ಈಗಾಗಲೇ ವಿಟ್ಲದಲ್ಲಿ ಜಾಗ ಗುರುತಿಸಲಾಗಿದೆ. ಉಪ್ಪಿನಂಗಡಿಯಲ್ಲೂ ಜಾಗದ ಅವಶ್ಯಕತೆ ಇದ್ದು, ಮಂಜೂರಾತಿ ಮಾಡಿಕೊಡಬೇಕು” ಎಂದು ಚರ್ಚಿಸಿದರು.

ಈ ವೇಳೆ ಶಾಸಕರು ಕಂದಾಯ ಅಧಿಕಾರಿಗಳಿಗೆ ಕರೆ ಮಾಡಿ ಅಗ್ನಿ ಶಾಮಕ ಠಾಣೆ ನಿರ್ಮಾಣವಾಗುವಲ್ಲಿ ವಿಟ್ಲ ಮತ್ತು ಉಪ್ಪಿನಂಗಡಿಯಲ್ಲಿ 15 ದಿನದೊಳಗೆ ಜಾಗ ಗುರುತಿಸಿ ಇಲಾಖೆಗೆ ಹಸ್ತಾಂತರ ಮಾಡುವಲ್ಲಿ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಉದ್ಯೋಗದ ಹಕ್ಕಿಗಾಗಿ ಡಿವೈಎಫ್ಐ ಯುವಜನ ಜಾಥಾ: ಎರಡನೇ ದಿನದ ಮೆರವಣಿಗೆ

“ವಿಟ್ಲ ಮತ್ತು ಉಪ್ಪಿನಂಗಡಿಗೆ ಅಗ್ನಿಶಾಮಕ ದಳ ಠಾಣೆ ಅಗತ್ಯವಾಗಿ ಬೇಕಾಗಿದ್ದು, ಈ ಭಾಗದ ಜನರ ಬಹು ವರ್ಷದ ಬೇಡಿಕೆಯೂ ಆಗಿದೆ. ಈ ಬಗ್ಗೆ ಕಳೆದ ಅಧಿವೇಶನದಲ್ಲಿ ಸರ್ಕಾರದ ಗಮನವನ್ನೂ ಸೆಳೆದಿದ್ದೆ. ಇದೀಗ ಸರ್ಕಾರದ ಸೂಚನೆಯಂತೆ ಎರಡೂ ಕಡೆಗಳಲ್ಲಿ ಅಗ್ನಿಶಾಮಕ ದಳ ಠಾಣೆ ನಿರ್ಮಾಣವಾಗಲಿದೆ. ವಿಟ್ಲದಲ್ಲಿ ಠಾಣೆ ನಿರ್ಮಾಣವಾದಲ್ಲಿ ಆ ಭಾಗಕ್ಕೆ ಸೌಲಭ್ಯ ನೀಡಿದಂತಾಗುತ್ತದೆ. ಉಪ್ಪಿನಂಗಡಿಯಲ್ಲಿ ನಿರ್ಮಾಣವಾದರೆ ಉಪ್ಪಿನಂಗಡಿ ಮತ್ತು ಕಡಬ ಭಾಗಕ್ಕೂ ಪ್ರಯೋಜನಕಾರಿಯಾಗಲಿದೆ. ಜಾಗ ಮಂಜೂರಾತಿಯಾದ ತಕ್ಷಣವೇ ಇದಕ್ಕೆ ಅನುದಾನ ಒದಗಿಸಲಾಗುವುದು” ಎಂದು ಪುತ್ತೂರು ಶಾಸಕ ಅಶೋಕ್ ರೈ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X