ತುಮಕೂರಿನ ವಸಂತನರಸಾಪುರದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್‌ ನಿರ್ಮಾಣ; ಯೋಜನೆ ಕೈಗೊಳ್ಳುವಂತೆ ಸಚಿವ ಬೈರತಿ ಸುರೇಶ್ ಸೂಚನೆ

Date:

ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ ನಗರಾಭಿವೃದ್ಧಿ ಇಲಾಖೆಯಿಂದ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ ಎಸ್ ಸುರೇಶ್(ಬೈರತಿ) ಅವರು ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಬೆಂಗಳೂರು ನಗರದ ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಗರಾಭಿವೃದ್ದಿ ಇಲಾಖೆಯ ಅಡಿಯಲ್ಲಿ ಬರುವ ಹತ್ತು ಮಹಾನಗರ ಪಾಲಿಕೆಗಳು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಳೆದ 3 ತಿಂಗಳಿನಿಂದ ಇವುಗಳಲ್ಲಿ ನಡೆದಿರುವ ಕಾಮಗಾರಿಗಳು ಹಾಗೂ ಕೈಗೊಂಡಿರುವ ಯೋಜನೆಗಳ ಕುರಿತಂತೆ ಸಭೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಮಂಡಿಸಿರುವ ಆಯವ್ಯಯದಲ್ಲಿ ವಸಂತನರಸಾಪುರದ ಬಳಿ ಸುಮಾರು 500 ಎಕರೆ ಪ್ರದೇಶದಲ್ಲಿ Integrated Township ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಲೋಕಸಭಾ ಚುನಾವಣೆಗಳಿಂದಾಗಿ ಈವರೆಗೂ ನೀತಿ ಸಂಹಿತೆ ಜಾರಿಯಲ್ಲಿತ್ತು. ಈಗ ಅದು ಮುಕ್ತಾಯವಾಗಿರುವುದರಿಂದ Township ನಿರ್ಮಾಣದ ಬಗ್ಗೆ ಗಮನ ಹರಿಸಬೇಕು” ಎಂದು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳಿಗೆ ಸಚಿವ ಬೈರತಿ ಸುರೇಶ್ ಅವರು ಸೂಚಿಸಿದರು.

“ಹಾಸನ, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೋಲಾರ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ರಸ್ತೆಗೆ ಡಾಂಬರೀಕರಣ, ರಸ್ತೆ ನಿರ್ಮಾಣ ಹಾಗೂ ರಿಂಗ್ ರಸ್ತೆ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದರು. ಅಲ್ಲದೆ ಮೈಸೂರು ರಿಂಗ್ ರಸ್ತೆ ನಿರ್ಮಾಣ ಮಾಡಲು ಕೆಲ ಅಡೆತಡೆಗಳು ಎದುರಾಗಿದ್ದು, ಮತ್ತೆ Short time Re-tender ಕರೆಯಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇರುವಂತೆಯೇ ಇತರೆ ಮಹಾನಗರ ಪಾಲಿಕೆಗಳಲ್ಲಿಯೂ Corporation ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದ್ದು, ಎಲ್ಲೆಲ್ಲಿ ತೆರೆಯಲು ಸಾಧ್ಯವಿದೆ ಎನ್ನುವುದನ್ನು ಪರಿಶೀಲಿಸಿ. ಅಲ್ಲದೇ, ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ Corporation ಶಾಲೆಗಳನ್ನು ತೆರೆಯಲು ಸಾಧ್ಯವೇ ಎನ್ನುವುದನ್ನು ಪರಿಶೀಲಿಸಿ ತಿಳಿಸಿ” ಎಂದು ಸಚಿವ ಬೈರತಿ ಸುರೇಶ್‌ ಅಧಿಕಾರಿಗಳಿಗೆ ತಿಳಿಸಿದರು.

“ಮಹಾನಗರ ಪಾಲಿಕೆಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಂದು ವೇಳೆ ಹೆಚ್ಚು ಇದ್ದರೆ, ಕಡಿಮೆ ಮಾನವ ಸಂಪನ್ಮೂಲ ಇರುವ ಜಾಗಕ್ಕೆ ನಿಯೋಜನೆ ಮಾಡಲು ಸಾಧ್ಯವೇ ಎನ್ನುವುದನ್ನು ತಿಳಿಸಬೇಕು” ಎಂದು ಕಾರ್ಯದರ್ಶಿಗಳಿಗೆ ಸೂಚಿಸಿದರು.

“ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು ಸೇರಿದಂತೆ ತಾಂತ್ರಿಕ ಸಿಬ್ಬಂದಿಗಳನ್ನು ಎರವಲು ಸೇವೆ ಅಥವಾ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ಬಾಕಿ ಉಳಿದಿರುವ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಪೂರ್ಣಗೊಳಿಸಬೇಕು” ಎಂದು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

“ಅಮೃತ್ 2.0 ಯೋಜನೆಯಡಿಯಲ್ಲಿ ರಾಜ್ಯದ ನಗರ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ತಗುಲುವ ಹಣದ ವೆಚ್ಚ ಕುರಿತಂತೆ ಕ್ರಿಯಾಯೋಜನೆ ರೂಪಿಸಬೇಕು” ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಮನರೇಗಾ ಅಡಿ ಕೆಲಸ ನೀಡುವಂತೆ ಆಗ್ರಹ; ಗ್ರಾ.ಪಂ. ಎದುರು ಗ್ರಾಕೂಸ ಪ್ರತಿಭಟನೆ 

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪ ಚೋಳನ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶರತ್ ಬಿ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ ಲಕ್ಷ್ಮೀಕಾಂತ ರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತ ವೆಂಕಟಾಚಲಪತಿ, ನಗರ ಮತ್ತು ಗ್ರಾಮಾಂತರ ಯೋಜನೆ ನಿರ್ದೇಶಕರಾದ ತಿಪ್ಪೇಸ್ವಾಮಿ, ಪೌರಾಡಳಿತ ನಿರ್ದೇಶನಲಾಯದ ಜಂಟಿ ನಿರ್ದೇಶಕ ವಿಜಯ ಕುಮಾರ್, ಮುಖ್ಯ ಅಭಿಯಂತರ ಚಂದ್ರಪ್ಪ ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...