ಕಲುಷಿತ ನೀರು ಸೇವನೆ ಘಟನೆ; ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

ರಾಯಚೂರು ಜಿಲ್ಲೆಯ ರೇಖಲಮರಡಿ ಬಳಿಕ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ

ಘಟನೆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ದೂರವಾಣಿ ಮೂಲಕ ಸಿಇಒ ಅವರೊಂದಿಗೆ ಮಾತನಾಡಿ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಗಳು, ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ರಾಯಚೂರು ಜಿಲ್ಲೆಯ ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಜನ ಅಸ್ವಸ್ಥರಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು, ಘಟನೆ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಖ್ಯಮಂತ್ರಿಗಳು ಕೊಟ್ಟ ಸೂಚನೆಗಳು…

  • ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು.
  • ನೀರಿನ ಸ್ಯಾಂಪಲ್ ಗಳನ್ನು ಲ್ಯಾಬ್ ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು.
  • ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕುಷ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು.
  • ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು.
  • ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು.
  • ಎಲ್ಲ ಕ್ರಮಗಳನ್ನೂ ಸಮರ್ಪಕವಾಗಿ ತೆಗೆದುಕೊಂಡು ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಚುನಾವಣಾ ಅಖಾಡದಲ್ಲಿ ಒಂದಿಷ್ಟು ಮಾತು – ದೇವನೂರ ಮಹಾದೇವ

ನಾನೀಗ ಹಿಂದಿನದು ಮಾತಾಡಲೋ ಅಥವಾ ಈಗಲದು ಮಾತಾಡಲೋ ಗೊಂದಲದಲ್ಲಿದ್ದೇನೆ. ಹಿಂದಿನದನ್ನು ಹೇಳದಿದ್ದರೆ...

ವಿಜಯಪುರ | ಲೋಕಸಭಾ ಚುನಾವಣೆ; ಅಂತಿಮ ಕಣದಲ್ಲಿ ಎಂಟು ಮಂದಿ ಅಭ್ಯರ್ಥಿಗಳು

ಲೋಕಸಭಾ ಚುನಾವಣೆಗೆ ವಿಜಯಪುರ ಕ್ಷೇತ್ರದಿಂದ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ...

’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’

ದ್ವೇ‍ಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ...