ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ ಮುಂದುವರೆದಿದ್ದು, ಅಫಜಲಪುರ ತಾಲೂಕಿನ ಬಾಣಂತಿಯೊಬ್ಬರು ಕಲಬುರಗಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಫಜಲಪುರ ತಾಲೂಕಿನ ಹವಳಗಾ ಗ್ರಾಮದ ಭಾಗ್ಯಶ್ರೀ ಶಿವಾಜಿ(22) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಹೆರಿಗೆ ನೋವಿನಿಂದ ಬಳಲುತ್ತಿದ್ದ ಭಾಗ್ಯಶ್ರೀ ಅವರನ್ನು ಸೋಮವಾರ ಮಧ್ಯಾಹ್ನ ಅಫಜಲಪುರ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಿಗ್ಗೆ 8ರ ಸುಮಾರಿಗೆ ಗಂಡು ಮಗುವಿಗೆ ಜನ್ಮ ನೀಡಿದರು. ಆ ಬಳಿಕ ರಕ್ತದೊತ್ತಡ ಕಡಿಮೆಯಾಯಿತು. ಈ ಹಿನ್ನೆಲೆಯಲ್ಲಿ ಕೂಡಲೇ ಅಲ್ಲಿಂದ ಕರೆತಂದು ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತೆಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಬಾಲ್ಯ ವಿವಾಹ; ಐವರಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ
ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.