ನಿರಂತರ ಮಳೆ ಹಿನ್ನೆಲೆ : ಸಂಪೂರ್ಣ ಭರ್ತಿಯಾದ ಬೆಂಗಳೂರಿನ 63 ಕೆರೆಗಳು

Date:

Advertisements

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಭಾನುವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಸಾಯಿ ಲೇಔಟ್‌ ಸೇರಿದಂತೆ ಹಲವು ಪ್ರದೇಶಗಳು ಮುಳುಗಡೆಯಾಗಿವೆ. ಮಳೆ ನೀರಿನ ಪ್ರವಾಹದಿಂದ ಹಾನಿಗೊಳಗಾದ ಸಾಯಿ ಲೇಔಟ್‌ ಸೇರಿದಂತೆ ಎಲ್ಲ ಪ್ರದೇಶಗಳಿಗೆ ಬುಧವಾರವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು, ಅಧಿಕಾರಿಗಳ ತಂಡವೇ ಖುದ್ದಾಗಿ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ.

ಈ ನಡುವೆ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬಿಬಿಎಂಪಿ ವ್ಯಾಪ್ತಿಯಯಲ್ಲಿರುವ 63 ಕೆರೆಗಳು ಈಗ ಸಂಪೂರ್ಣವಾಗಿ ತುಂಬಿರುವುದಾಗಿ ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

63 ಕೆರೆಗಳು ಈಗ ಸಂಪೂರ್ಣವಾಗಿ ತುಂಬಿದೆ, ಇನ್ನೂ 40 ಕೆರೆಗಳು ಬಹುತೇಕ ತುಂಬಿವೆ. ಬಿಬಿಎಂಪಿ ಮಿತಿಯಲ್ಲಿರುವ ಒಟ್ಟು 183 ಕೆರೆಗಳಲ್ಲಿ, ಮಹದೇವಪುರ ವಲಯದ 13 ಕೆರೆಗಳು, ಯಲಹಂಕ ವಲಯದ 19, ರಾಜರಾಜೇಶ್ವರಿ ನಗರದಲ್ಲಿ 16 ಮತ್ತು ಬೊಮ್ಮನಹಳ್ಳಿ ವಲಯದ 7 ಕೆರೆಗಳು ಪೂರ್ಣ ಸಾಮರ್ಥ್ಯವನ್ನು ತಲುಪಿವೆ. ಈ ವಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಭಾರೀ ಮಳೆಯಾಗುತ್ತಿದೆ.

Advertisements
ಲೇಕ್

ಒಟ್ಟು 183 ಕೆರೆಗಳ ಪೈಕಿ 18ರಷ್ಟು ಕೆರೆಗಳು ಶೇ.25ರಷ್ಟು, 20ರಷ್ಟು ಕೆರೆಗಳು ಶೇ.25ರಿಂದ 50ರಷ್ಟು, 42 ಕೆರೆಗಳು ಶೇ.75ರಷ್ಟು, 40 ಕೆರೆಗಳು ಶೇ.75ಕ್ಕಿಂತಲೂ ಹೆಚ್ಚು ನೀರು ತುಂಬಿರುವುದಾಗಿ ಬಿಬಿಎಂಪಿ ಮಾಹಿತಿ ಹಂಚಿಕೊಂಡಿದೆ.

ಕೆರೆಗಳ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿರುವ ಬಿಬಿಎಂಪಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡವು ಕೆರೆಗಳು ಮತ್ತು ಕೆರೆ ಕಾಲುವೆಗಳ ಬಳಿ ಶುಚಿಗೊಳಿಸುವ ಕಾರ್ಯಾಚರಣೆಗಳನ್ನು ಮುಂದುವರಿಸಿದೆ. ನಿರಂತರ ಮಳೆಯಿಂದಾಗಿ ಸಂಗ್ರಹವಾಗಿದ್ದ ಕಸ, ಪ್ಲಾಸ್ಟಿಕ್, ಕಡ್ಡಿಗಳು ಮತ್ತು ಇತರ ತ್ಯಾಜ್ಯ ವಸ್ತುಗಳನ್ನು ತೆಗೆದುಹಾಕುವಲ್ಲಿ ನಿರತವಾಗಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ವಿಪತ್ತು ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ. 24×7 ಕಾರ್ಯನಿರ್ವಹಿಸುವ ಸಹಾಯವಾಣಿ ಸಂಖ್ಯೆ 1533 ಜೊತೆಗೆ ಪಾಲಿಕೆಯ ಎಂಟು ವಲಯಗಳಲ್ಲಿ ಪ್ರತ್ಯೇಕವಾಗಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್‌ಗಳ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಬಿಬಿಎಂಪಿ ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದೆ.

ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

“ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಮಸ್ಯೆಗೆ ಪರಿಹಾರ ನೀಡುವ ಕೆಲಸವಾಗಿಲ್ಲ. ಆದರೂ ವಿರೋಧ ಪಕ್ಷದವರು ಟೀಕೆ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅಂತಿಮವಾಗಿ ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ” ಎಂದು ಡಿಸಿಎಂ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ಪ್ರದಕ್ಷಿಣೆ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಳೆಹಾನಿ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, “ಬೆಂಗಳೂರಿನಲ್ಲಿ ಮಳೆಯಿಂದಾಗಿರುವ ತೊಂದರೆ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಒತ್ತುವರಿ ವಿಚಾರದಲ್ಲಿ ಅವರ ಕಾಲದಲ್ಲಿ ಏನು ಕೆಲಸ ಮಾಡುತ್ತಿದ್ದರು. ಒತ್ತುವರಿ ಮಾಡಿಕೊಂಡವರು ನ್ಯಾಯಲಯಗಳಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ನಾನು ಒತ್ತುವರಿಗಳನ್ನು ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಳೆನೀರಿನಿಂದ ತೊಂದರೆಗೆ ಒಳಗಾಗುತ್ತಿದ್ದ 211 ಪ್ರದೇಶಗಳನ್ನು ಗುರುತಿಸಿ 166 ಕ್ಕೆ ಇಳಿಸಿದ್ದೇವೆ. 44 ಕೆಲಸ ಬಾಕಿಯಿದ್ದು, ಇದರಲ್ಲಿ 24 ಕಡೆ ಕಾರ್ಯಪ್ರಗತಿಯಲ್ಲಿದೆ. ಮೊದಲಿಗಿಂತ ಈಗ ಸಮಸ್ಯೆಗಳನ್ನು ಎದುರಿಸುತ್ತಿರುವ ಪ್ರದೇಶಗಳ ಪ್ರಮಾಣ ಕಡಿಮೆಯಾಗಿದೆ. ಬೆಂಗಳೂರು ನಾಗರಿಕರ ರಕ್ಷಣೆ ಮಾಡಲಾಗುವುದು. ಯಾರೂ ಆತಂಕಪಡುವ ಅಗತ್ಯವಿಲ್ಲ. ನಾವು ಬೆಂಗಳೂರಿಗೆ ಹೊಸ ರೂಪ ನೀಡುತ್ತಿದ್ದೇವೆ. ನಮ್ಮ ಸರ್ಕಾರ ಹಾಗೂ ಅಧಿಕಾರಿಗಳ ತಂಡ ಇದನ್ನು ಸರಿ ಮಾಡುತ್ತೇವೆ” ಎಂದು ತಿಳಿಸಿದರು.

“ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಇಂತಹ ಸಮಸ್ಯೆ ಎದುರಾಗಿದೆ. ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಾನು-ಭಾಸ್ತಿ ಜೋಡಿ- ಕನ್ನಡಕ್ಕೆ ಬೂಕರ್ ಗೆದ್ದ ಮೋಡಿ

“ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕ್ಷೇತ್ರದಲ್ಲೂ ಪರಿಶೀಲನೆ ಮಾಡಿದ್ದೇವೆ. ಅವರು ಈ ಭಾಗದ ರಸ್ತೆ ಅಗಲೀಕರಣ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಎಲ್ಲೆಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಮಸ್ಯೆಯಾಗಿದೆ, ಆ ಜಾಗಗಳ ಫೋಟೋ, ವಿಡಿಯೋ ಮಾಡಿಕೊಂಡು ತುರ್ತು ವರದಿ ಸಲ್ಲಿಕೆ ಮಾಡುವಂತೆ ತಿಳಿಸಿದ್ದೇನೆ. ಆ ಮೂಲಕ ವಿಪತ್ತು ನಿರ್ವಹಣೆ ನಿಯಂತ್ರಣ ಅಡಿಯಲ್ಲಿ ರಸ್ತೆ ಅಗಲೀಕರಣ ಮಾಡಲಾಗುವುದು. ಲಿಂಬಾವಳಿ ಅವರು 150 ಅಡಿ ರಸ್ತೆ ಬಗ್ಗೆ ಪ್ರಸ್ತಾವನೆ ಮಾಡಿದ್ದು, ಕೂಡಲೇ ಅಧಿಕಾರಿಗಳ ಜತೆ ಚರ್ಚೆಸಿ ಸಮಸ್ಯೆ ಬಗೆಹರಿಸಲಾಗುವುದು. ಇನ್ನು ಬಿಎಂಆರ್‍‌ಡಿಎ ವತಿಯಿಂದ 150 ಅಡಿ ಹಾಗೂ 150 ಮೀಟರ್ ರಸ್ತೆಗೆ ಎರಡು ನೋಟಿಫಿಕೇಶನ್ ಆಗಿದ್ದು, ಈ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದು, ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ” ಎಂದರು.

“ಮುಖ್ಯಮಂತ್ರಿಗಳು ಹಾಗೂ ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳ ಜತೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ತಳಮಟ್ಟದ ಪ್ರದೇಶಗಳಲ್ಲಿ ಬೇಸ್‌ಮೆಂಟ್ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ನೀಡದಿರಲು ನೀತಿ ರೂಪಿಸಲಾಗುವುದು. ಬೇಸ್‌ಮೆಂಟ್‌ನಿಂದ ನೀರನ್ನು ಪಂಪ್ ಮೂಲಕ ಹೊರಗೆ ಹಾಕುವಾಗ ದುರ್ಘಟನೆ ನಡೆದು ಜೀವಹಾನಿಯಾಗಿದೆ” ಎಂದು ತಿಳಿಸಿದರು.

ಒತ್ತುವರಿ ತೆರವು ವಿಚಾರವಾಗಿ ಕೇಳಿದಾಗ, “ಒತ್ತುವರಿ ತೆರವು ಕಾರ್ಯ ಶೇ.70ರಷ್ಟು ಮುಗಿದಿದೆ. ಬಾಕಿ ಇರುವ ಒತ್ತುವರಿಯನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X