ಔರಾದ್ ಪುರಸಭೆ ಕಾಂಗ್ರೆಸ್ ಸರಕಾರದ ಕೊಡುಗೆ : ಸಚಿವ ಈಶ್ವರ ಖಂಡ್ರೆ

Date:

ಔರಾದ್ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಿರುವುದು ರಾಜ್ಯ ಕಾಂಗ್ರೆಸ್ ಸರಕಾರದ ಕೊಡುಗೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ ಶಿಂಧೆ ನೇತೃತ್ವದಲ್ಲಿ ಭಾನುವಾರ ಭಾಲ್ಕಿಯ ತಮ್ಮ ನಿವಾಸದಲ್ಲಿ ಔರಾದ್ ನಾಗರಿಕರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ʼಔರಾದ್ ಜನತೆಯ ಬಹುದಿನಗಳ ಬೇಡಿಕೆಯನ್ನು ಕಾಂಗ್ರೆಸ್ ಸರಕಾರ ನೇರವೇರಿಸಿದೆ. ಈ‌ ಹಿಂದಿನ ಬಿಜೆಪಿ ಸರಕಾದಿಂದ ಆಗದಿರುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಔರಾದ್‌ ಪಟ್ಟಣದ ಜನರಿಗೆ ಆಶ್ವಾಸನೆ ನೀಡಿದೆ. ಅದರಂತೆ ಔರಾದ್ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮಾಡಿದ್ದೇನೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ʼಈ ಹಿಂದೆ ನಾನು ಪೌರಾಡಳಿತ ಸಚಿವನಾಗಿದ್ದ ವೇಳೆ ನಿಯಮದ‌ ಪ್ರಕಾರ ಎಲ್ಲ ಮಾನದಂಡಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೆ. ಈಗ ಎಲ್ಲವನ್ನು ಸಿದ್ಧಪಡಿಸಿಕೊಂಡು ಸಚಿವ ಸಂಪುಟದಲ್ಲಿ ಪುರಸಭೆ ಘೋಷಣೆಯ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದ ಔರಾದ್ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆʼ ಎಂದು ಹರ್ಷ ವ್ಯಕ್ತಪಡಿಸಿದರು.

ಮುಖಂಡ ಡಾ. ಭೀಮಸೇನರಾವ ಶಿಂಧೆ ಮಾತನಾಡಿ, ʼಲೋಕಸಭೆ ಚುನಾವಣೆಯ ವೇಳೆ ಪುರಸಭೆ ಮೇಲ್ದರ್ಜೆಗೇರಿಸುವ ಭರವಸೆಯೊಂದಿಗೆ, ಔರಾದ್ ಪಟ್ಟಣ ಅಭಿವೃದ್ಧಿಗೆ 5 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದೀರಿ ಎಂದು ನೆನಪಿಸಿದರು. ಅದಕ್ಕೆ ತಕ್ಷಣ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ ಅವರು 5 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ ಅವರು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಅಭಿವೃದ್ಧಿಗಾಗಿ ಶ್ರಮಿಸಬೇಕೆಂದು ತಿಳಿಸಿದರು.‌

ಔರಾದ್‌ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಚನ್ನಪ್ಪ ಉಪ್ಪೆ, ಔರಾದ್ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಬಾಬುರಾವ ತಾರೆ, ಪಟ್ಟಣ ಪಂಚಾಯತಿ ಸದಸ್ಯ ಸುನಿಲಕುಮಾರ ದೇಶಮುಖ ಸೇರಿದಂತೆ ಪ್ರಮುಖರಾದ ಪ್ರಶಾಂತ ಫುಲಾರಿ, ಶರಣಪ್ಪ ಪಾಟೀಲ್, ಶಾಲೊಮನ್ ಮಹೀಮಕರ್, ಸುನಿಲ‌ ಮೀತ್ರಾ, ಅನೀಲ ನಿರ್ಮಳೆ, ಪಪ್ಪು ದೇವಕತ್ತೆ, ಪ್ರವೀಣ ಕರಂಜೆ, ಅನೀಲ ಒಡಿಯಾರ್, ಮಹೋಹರ್, ಬಾಲಾಜಿ, ಕಮಳಮ್ಮ ಚಿಕ್ಲಿ, ವೆಂಕಟರಾವ ಪಾಟೀಲ್, ಸೂರ್ಯಕಾಂತ ಉಡಬಾಳೆ ಸೇರಿದಂತೆ ಮತ್ತಿತರರಿದ್ದರು.

ಔರಾದ್‌ ಪಟ್ಟಣ ಪಂಚಾಯತಿ ಮೇಲ್ದರ್ಜೆಗೇರಿಸುವ ಕುರಿತು 2023ರ ಜೂನ್‌ 23ರಂದು ʼಈದಿನʼ ದಲ್ಲಿ ʼಬೀದರ್ | ಔರಾದ ಪಟ್ಟಣ ಪಂಚಾಯತಿಗೆ ಒಲಿಯುವುದೇ ಪುರಸಭೆ ಭಾಗ್ಯ?ʼ ಎಂಬ ಶೀರ್ಷಿಕೆಯಡಿ ವಿಶೇಷ ಬರಹ ಪ್ರಕಟಿಸಿ ಸರ್ಕಾರದ ಗಮನ ಸೆಳೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...