ತಂಪಾದ ಬೆಂಗಳೂರು | 10 ವರ್ಷದ ಬಳಿಕ ಅತ್ಯಂತ ಕಡಿಮೆ ತಾಪಮಾನ ದಾಖಲು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 10 ವರ್ಷದಲ್ಲಿ ಇದೇ ಮೊದಲ ಬಾರಿಗೆ ಮಂಗಳವಾರ ಕನಿಷ್ಠ 17.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಅಕ್ಟೋಬರ್ ತಿಂಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ತಾಪಮಾನವಾಗಿದೆ. ನಗರದಲ್ಲಿ ಸಂಜೆಯಾದರೆ, ಚಳಿಯ ವಾತಾವರಣ ಉಂಟಾಗುತ್ತಿದೆ. ಇದು ಚಳಿಗಾಲದ ಆರಂಭದ ಮುನ್ಸೂಚನೆಯನ್ನು ನೀಡುತ್ತಿದೆ.

- Advertisement -

ಕಳೆದ 2013ರಲ್ಲಿ ದಾಖಲಾಗಿದ್ದ ಚಳಿಯ ವಾತಾವರಣದ ಮಾದರಿಯಲ್ಲಿಯೇ ಈ ವರ್ಷವೂ ಹೆಚ್ಚಿನ ಚಳಿಯ ವಾತಾವರಣ ಅಕ್ಟೋಬರ್‌ನಲ್ಲಿಯೇ ಶುರುವಾಗಿದೆ. ಆದರೆ, ರಾಜ್ಯದಲ್ಲಿ ಈ ವರ್ಷ ವಾಡಿಕೆಯಂತೆ ಮಳೆ ಬಿದ್ದಿಲ್ಲ. ರಾಜ್ಯದ ಹಲವೆಡೆ ಮಳೆ ಕೊರತೆ ಎದುರಾಗಿದೆ. ಜಲಾಶಯಗಳು ನೀರಿನಿಂದ ಭರ್ತಿಯಾಗಿಲ್ಲ. ಈ ವರ್ಷ ಭೀಕರ ಬರಗಾಲ ಎದುರಾಗಿದೆ. ರಾಜ್ಯ ಸರ್ಕಾರ 216 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದೆ. ಇದೀಗ, ಮುಂಗಾರು ಮಳೆಯ ಅವಧಿ ಮುಗಿದು ಹಿಂಗಾರು ಮಳೆ ಆರಂಭವಾಗಿದೆ. ಮಳೆ ಬೀಳುವ ಸಮಯದಲ್ಲಿಯೇ ಚಳಿ ಆರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈಶಾನ್ಯ ಗಾಳಿ ಆರಂಭ ಆಗಿರುವುದನ್ನು ಹವಾಮಾನ ಇಲಾಖೆ ಅಧಿಕೃತಗೊಳಿಸದಿದ್ದರೂ, ಬೆಂಗಳೂರಿನಲ್ಲಿ ಚಳಿ ವಾತಾವರಣ ಶುರುವಾಗಿದೆ.

“2014ರ ಅಕ್ಟೋಬರ್ 31ರಂದು ತಾಪಮಾನವು 17.5 ಡಿಗ್ರಿ ಸೆಲ್ಸಿಯಸ್​​ಗೆ ಇಳಿದಿತ್ತು. ಬಳಿಕ, 2023ರ ಅಕ್ಟೋಬರ್​ 24 ರಂದು 17.1 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ” ಎಂದು ಭಾರತೀಯ ಹವಾಮಾನ ಇಲಾಖೆಯ ತಿಳಿಸಿದೆ.

“ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಕನಿಷ್ಠ ತಾಪಮಾನ 17.2 ಡಿಗ್ರಿ ಸೆಲ್ಸಿಯಸ್​​, ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 17 ಡಿಗ್ರಿ ಸೆಲ್ಸಿಯಸ್​​ ತಾಪಮಾನ ದಾಖಲಾಗಿದೆ” ಎಂದು ಮಾಹಿತಿ ನೀಡಿದೆ.

ಈ ಬಾರಿ ಹೆಚ್ಚು ಮಳೆಯಾಗದೇ ಇದ್ದರೂ ಬೆಂಗಳೂರಿನಲ್ಲಿ ಮಂಗಳವಾರದಂದು ಅಕ್ಟೋಬರ್‌ನಲ್ಲಿ ಅತಿ ಹೆಚ್ಚು ಚಳಿಯನ್ನು ಕಂಡಿದೆ. ಇನ್ನು ಅಕ್ಟೋಬರ್ 18 ಅನ್ನು ಹೊರತುಪಡಿಸಿದರೆ, ಅಕ್ಟೋಬರ್‌ನಲ್ಲಿ ಉಳಿದ ದಿನಗಳಲ್ಲಿ ಬೆಳಗ್ಗೆ ತಾಪಮಾನ 18.6 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕ್ರಮೇಣ 19 ಮತ್ತು 21 ಡಿಗ್ರಿ ಸೆಲ್ಸಿಯಸ್ ನಡುವೆ ತಾಪಮಾನ ಇರುತ್ತದೆ. ಹೀಗಾಗಿ, ನಗರದಲ್ಲಿ ಮಂಗಳವಾರ 17.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿರುವುದು ಒಂದು ರೀತಿಯಲ್ಲಿ ಆಶ್ಚರ್ಯ ಮೂಡಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಲ್ಟಿಪ್ಲೆಕ್ಸ್ ಗೋಲ್ಡ್‌ ಕಾರ್ಡ್‌ ಆಸೆಗೆ ಬಿದ್ದು ₹1 ಲಕ್ಷ ಕಳೆದುಕೊಂಡ ವ್ಯಕ್ತಿ

ಕಡಿಮೆ ತಾಪಮಾನ ಚಳಿಯನ್ನು ಸೂಚಿಸಿದರೆ, ಗರಿಷ್ಠ ತಾಪಮಾನ ಅತ್ಯಂತ ಬಿಸಿಯನ್ನು ಸೂಚಿಸುತ್ತದೆ.

“ಅಕ್ಟೋಬರ್ ತಿಂಗಳಲ್ಲಿ ಇದು ಕನಿಷ್ಠ ತಾಪಮಾನವಾಗಿದೆ. ನವೆಂಬರ್ ಕೊನೆಯ ವಾರದಿಂದ ನಗರದಲ್ಲಿ ಚಳಿಗಾಲದ ಪರಿಣಾಮವ ಬೀರುವ ಸಾಧ್ಯತೆಯಿದೆ. ಎಲ್ ನಿನೋ ಪ್ರಭಾವದಿಂದಾಗಿ ಕಳೆದ ವರ್ಷದಂತೆ ಕಠಿಣ ಚಳಿಗಾಲದ ಸಂಭವನೀಯತೆ ಈ ವರ್ಷ ತುಂಬಾ ಕಡಿಮೆಯಾಗಿದೆ. ನವೆಂಬರ್‌ನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ತಜ್ಞ ಎ ಪ್ರಸಾದ್ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...