ಚಾಮರಾಜನಗರ | ಮತದಾರರ ಪಟ್ಟಿ ಪರಿಷ್ಕರಣೆಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಶ್ರೀರೂಪ

Date:

ಭಾರತ ಚುನಾವಣಾ ಆಯೋಗವು ಪ್ರಕಟಿಸಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸಲು ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಶ್ರೀರೂಪ ಮನವಿ ಮಾಡಿದರು.

- Advertisement -

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೋಂದಾಯಿತ ರಾಷ್ಟ್ರೀಯ ಹಾಗೂ ರಾಜ್ಯ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮತದಾರರ ಪಟ್ಟಿ ಹೆಸರು ಸೇರ್ಪಡೆಗೆ 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದ್ದು, ಜೂನ್ 20ರಿಂದ ಅಕ್ಟೋಬರ್ 7ರವರೆಗೆ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಮುಕ್ತ, ನಿಷ್ಪಕ್ಷಪಾತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ವಿಶ್ವಾಸಾರ್ಹ ಮತದಾರರ ಪಟ್ಟಿಯು ಅತ್ಯಂತ ಮೂಲಭೂತ ಅಗತ್ಯವಾಗಿದ್ದು, ಈ ಕಾರ್ಯದಲ್ಲಿ ರಾಜಕೀಯ ಪಕ್ಷಗಳ ಪಾತ್ರ ಮಹತ್ವದ್ದಾಗಿದೆ ಎಂದರು.

2002ರ ಮತದಾರರ ಪಟ್ಟಿಯಲ್ಲಿದ್ದ ಮತದಾರರನ್ನು 2025ರ ಮತದಾರರ ಪಟ್ಟಿಯೊಂದಿಗೆ ಹೊಂದಾಣಿಕೆ ಮಾಡುವ ಕಾರ್ಯದಲ್ಲಿ ಜಿಲ್ಲೆಯಲ್ಲಿ ಮೇ 30ರ ವೇಳೆಗೆ ಶೇ.96.22ರಷ್ಟು ಮತದಾರರನ್ನು ಮ್ಯಾಪಿಂಗ್ ಮಾಡಲಾಗಿದೆ. ಉಳಿದ ಮತದಾರರ ಮ್ಯಾಪಿಂಗ್ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಹೇಳಿದರು.

ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 983 ಮತಗಟ್ಟೆಗಳಿದ್ದು, ಪ್ರತಿಯೊಂದು ಮತಗಟ್ಟೆಗೆ ಬಿಎಲ್‌ಒಗಳನ್ನು ನೇಮಕ ಮಾಡಲಾಗಿದೆ. ರಾಜಕೀಯ ಪಕ್ಷಗಳು ಎಲ್ಲ ಮತಗಟ್ಟೆಗಳಿಗೆ ಮತಗಟ್ಟೆ ಮಟ್ಟದ ಏಜೆಂಟರನ್ನು (ಬಿಎಲ್‌ಎ) ನೇಮಕ ಮಾಡಿ, ಅವರ ವಿವರಗಳನ್ನು ಎರಡು ದಿನಗಳೊಳಗೆ ಸಲ್ಲಿಸುವಂತೆ ಸೂಚಿಸಿದರು.

ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಯಾವುದೇ ಲೋಪಗಳಾಗದಂತೆ ನೋಡಿಕೊಳ್ಳಲು ಹಾಗೂ ಕರಡು ಮತದಾರರ ಪಟ್ಟಿಯಲ್ಲಿ ದಾಖಲಾಗಿರುವ ಮತದಾರರ ಮಾಹಿತಿ ಪರಿಶೀಲಿಸಲು, ನಿಧನ ಹೊಂದಿರುವ ಮತ್ತು ಸ್ಥಳಾಂತರಗೊಂಡ ಮತದಾರರನ್ನು ಗುರುತಿಸಲು ಬಿಎಲ್‌ಎಗಳ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು. ಮತಗಟ್ಟೆ ಮಟ್ಟದ ಏಜೆಂಟರಿಗೆ ಅಗತ್ಯ ಅರಿವು ಮೂಡಿಸುವ ಉದ್ದೇಶದಿಂದ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ನೋಂದಣಾಧಿಕಾರಿಗಳಿಂದ ಓರಿಯೆಂಟೇಷನ್ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ಎಂದರು.

ಯಾವುದೇ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗದ ಪ್ರಮುಖ ಉದ್ದೇಶವಾಗಿದೆ. ಶೇ.100ರಷ್ಟು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಗೊಳಿಸಲು ರಾಜಕೀಯ ಪಕ್ಷಗಳು ಸಕ್ರಿಯವಾಗಿ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಶ್ರೀರೂಪ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?ಕೊಡಗು | ಸಂರಕ್ಷಿತ ಸ್ಮಾರಕವಾಗಿ ಮಡಿಕೇರಿ ಅರಮನೆ ಘೋಷಣೆ; ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಚುನಾವಣಾ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...