ಬೀದರ್ ವಿವಿ ಅಭಿವೃದ್ಧಿಗೆ ಸಿಂಡಿಕೇಟ್ ಸದಸ್ಯರ ಸಹಕಾರ ಅವಶ್ಯ : ಪ್ರೊ.ಬಿ.ಎಸ್.ಬಿರಾದಾರ್

Date:

ಬೀದರ್ ವಿಶ್ವವಿದ್ಯಾಲಯ ಅಭಿವೃದ್ಧಿ ಹೊಂದಬೇಕಾದರೆ ಎಲ್ಲಾ ಸಿಂಡಿಕೇಟ್ ಸದಸ್ಯರ ಸಹಕಾರ ಮಾರ್ಗದರ್ಶನದ ಅವಶ್ಯಕತೆಯಿದೆ. ಎಲ್ಲರ ಸಹಕಾರದೊಂದಿಗೆ ಮಾದರಿ ವಿಶ್ವವಿದ್ಯಾಲಯ ಕಟ್ಟೋಣ ಎಂದು ಬೀದರ್ ವಿವಿ ಕುಲಪತಿ ಪ್ರೋ.ಬಿ.ಎಸ್.ಬಿರಾದಾರ್ ಹೇಳಿದರು.

- Advertisement -

ರಾಜ್ಯ ಸರ್ಕಾರ ಬೀದರ ವಿಶ್ವವಿದ್ಯಾಲಯಕ್ಕೆ ನೂತನವಾಗಿ ನೇಮಿಸಿದ ಆರು ಜನ ಸಿಂಡಿಕೇಟ್ ಸದಸ್ಯರು ಶುಕ್ರವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ವರದಿ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನೂತನ ಸಿಂಡಿಕೇಟ್‌ ಸದಸ್ಯರಾದ ಶಿವನಾಥ ಪಾಟೀಲ್ ಮಾಧವರಾವ್ ಪಾಟೀಲ್ (ಸಾಮಾನ್ಯ), ಸಚಿನ್ ಶಿವರಾಜ್ (ಸಾಮಾನ್ಯ), ವಿಠಲ್‌ದಾಸ್‌ ದೇವಿದಾಸ ಪ್ಯಾಗೆ (ಪರಿಶಿಷ್ಟ ಜಾತಿ), ಅರ್ಜುನ್ ಮತೆಪ್ಪ ಕನಕ (ಹಿಂದುಳಿದ ವರ್ಗ), ಅಬ್ದುಲ್ ಸತ್ತಾರ್ ಚಾಂದ್ ಸಾಬ್ (ಅಲ್ಪಸಂಖ್ಯಾತರು) ಹಾಗೂ ವೈಷ್ಣವಿ ಆರ್.ಪಾಟೀಲ್‌ ಅವರು ತಮ್ಮ ಜವಾಬ್ದಾರಿ ವಹಿಸಿಕೊಂಡರು.

ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಬಿ.ಎಸ್.ಬಿರಾದಾರ್‌ ಮಾತನಾಡಿ, ʼನೂತನ ಸದಸ್ಯರ ಆಗಮನದಿಂದ ವಿಶ್ವವಿದ್ಯಾಲಯಕ್ಕೆ ವಿಶೇಷ ಶಕ್ತಿ ಬಂದಂತಾಗಿದೆ. ವಿಶಾಲವಾದ 322 ಎಕರೆಯಲ್ಲಿ ವ್ಯಾಪಿಸಿರುವ ಬೀದರ ವಿಶ್ವವಿದ್ಯಾಲಯವು 124 ಕಾಲೇಜುಗಳ ಸಂಯೋಜನೆಯೊಂದಿಗೆ 14 ಸ್ನಾತಕೋತ್ತರ ಪದವಿ ಕೋರ್ಸ್ ಹಾಗೂ 26,000 ವಿದ್ಯಾರ್ಥಿಗಳು ಪ್ರವೇಶ ಪಡೆದಂತಹ ವಿಶ್ವವಿದ್ಯಾಲಯವಾಗಿದೆʼ ಎಂದರು.

ʼವಿಶ್ವವಿದ್ಯಾಲಯದ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸೋಣ. ಬೀದರ್ ವಿಶ್ವವಿದ್ಯಾಲಯದ ಸರ್ವಾಂಗೀಣ ವಿಕಾಸಕ್ಕೆ ಬದ್ಧರಾಗಿ ನಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಸರ್ಕಾರದಿಂದ ಅನುದಾನವನ್ನು ಪಡೆದು ಸುವ್ಯಸ್ಥಿತವಾದ ವಿಶ್ವವಿದ್ಯಾಲಯದ ಭೌತಿಕ ಸಂಪನ್ಮೂಲ ಹಾಗೂ ಶೈಕ್ಷಣಿಕ ಪ್ರಗತಿಗೆ ಶ್ರಮಿಸೋಣʼ ಎಂದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್‌ನಲ್ಲಿ ಬೀದರ್ ಜಿಲ್ಲೆಗೆ ಸಿಕ್ಕಿದ್ದೇನು, ಯಾರು ಏನಂದ್ರು?

ಆಡಳಿತ ಕುಲಸಚಿವೆ ಸುರೇಖಾ ಕೆ.ಎ.ಎಸ್ ಸ್ವಾಗತಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೋ.ಪರಮೇಶ್ವರ ನಾಯ್ಕ್ ವಂದಿಸಿದರು. ವಿಶ್ವವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...