ಬೀದರ್‌ | ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ : ಉನ್ನತ ಮಟ್ಟದ ತನಿಖೆಗೆ ಆಗ್ರಹ

Date:

ಬೀದರ್ ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ಯ ಹಿಂದಿನ ನಿರ್ದೇಶಕರಾಗಿದ್ದ ಡಾ.ಶಿವಕುಮಾ‌ರ್ ಶೆಟಕಾರ್‌ ಅಧಿಕಾರಾವಧಿಯಲ್ಲಿ ನಡೆದ ಭ್ರಷ್ಟಾಚಾರ ಕುರಿತು ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

- Advertisement -

ಈ ಕುರಿತು ಬುಧವಾರ ಬ್ರಿಮ್ಸ್‌ಗೆ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼನಿರ್ದೇಶಕ ಶಿವಕುಮಾರ ಶೆಟಕಾರ ಅಧಿಕಾರಾವಧಿಯಲ್ಲಿ ಬ್ರಿಮ್ಸ್ ಆಸ್ಪತ್ರೆಯ ಸ್ಥಿತಿ ಹದೆಗೆಟ್ಟಿದ್ದು, ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ, ಯಾವುದೇ ಅಧಿಸೂಚನೆ ಹೊರಡಿಸದೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು. ಬೀದರ ಜಿಲ್ಲೆಯ ಜನತೆಗೆ ಆರೋಗ್ಯ ಕಾಪಾಡುವ ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳಿದ್ದರೂ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಹಿಂದಿನ ನಿರ್ದೇಶಕ ಶಿವಕುಮಾರ ಶೆಟಕಾರ ವಿಫಲರಾಗಿದ್ದರುʼ ಎಂದು ದೂರಿದ್ದಾರೆ.

ʼಕರ್ತವ್ಯ ಲೋಪ, ಭ್ರಷ್ಟಾಚಾರ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ತಾವು 15 ದಿವಸಗಳ ಒಳಗಾಗಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದುʼ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ : ಯುವ ರೈತನ ಕೈಹಿಡಿದ ಚೆಂಡು ಹೂವು ಕೃಷಿ

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ರಾಕೇಶ್‌ ಧನರಾಜ್‌, ಜಿಲ್ಲಾಧ್ಯಕ್ಷ ವಿಲ್ಸನ್ ದೊಡ್ಡನಿ, ಯುವ ಘಟಕದ ಅಧ್ಯಕ್ಷ ಗುರುದಾಸ ಅಮದಲಪಾಡ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...