ಕಲಬುರಗಿ | ನೀಟ್ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ; ತನಿಖೆಗೆ ಎಐಡಿಎಸ್‌ಒ ಆಗ್ರಹ

Date:

ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರವನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‍ಓ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

- Advertisement -

ಎಐಡಿಎಸ್‍ಓ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್.ಎಚ್. ಮಾತನಾಡಿ, “ನೀಟ್ ಪರೀಕ್ಷೆ ಫಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್.ಕೆ. ಮಾತನಾಡಿ, “ಸರ್ಕಾರದ ನಿಷ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರಿಕರಣದಿಂದಾಗಿ, ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಕ್ರಮಕ್ಕೆ ಒಳಗಾಗುತ್ತಿದೆ, ಇದರಿಂದ ಬಡ ವಿದ್ಯಾರ್ಥಿಗಳು ಬಲಿಪಶುಗಳಾಗಿದ್ದಾರೆ. ಈ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಿ ಪ್ರಕರಣದಲ್ಲಿ ಭಾಗಿಯಾದ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರನೇ ಬಾರಿಗೆ ಪ್ರಧಾನಿಯಾದ ಮೋದಿ, ಹೊಸ ಮನುಷ್ಯರಾಗುವರೇ?

ಪ್ರತಿಭಟನೆಯಲ್ಲಿ ಎಐಡಿಎಸ್‍ಓ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ, ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ, ನಾಗರಾಜ ರಾವುರ, ಸದಸ್ಯರಾದ ಸಿದ್ಧಾರ್ಥ ತಿಪ್ಪನೋರ, ಯುವರಾಜ ರಾಠೋಡ್, ಪೂಜಾ ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...