ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ಮತ ಎಣಿಕೆ: ಸ್ಥಳೀಯರಲ್ಲಿ ಕುತೂಹಲ

Date:

ಕೋಲಾರ ತಾಲೂಕಿನ ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಆಗಸ್ಟ್‌ 20ರ ಬುಧವಾರ ಬೆಳಿಗ್ಗೆ 8ರಿಂದ ಆರಂಭಗೊಂಡಿದ್ದು, 10ರ ವೇಳೆಗೆ ಪೂರ್ಣ ಫಲಿತಾಂಶ ಹೊರಬೀಳಲದೆ.

- Advertisement -

ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಎಎಪಿ, ಪಕ್ಷೇತರರು ಸೇರಿದಂತೆ ಒಟ್ಟು 51 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಮತ ಎಣಿಕೆ ನಡೆಯುವ ಕೋಲಾರದ ಬಾಲಕಿಯರ ಪಿಯು ಕಾಲೇಜು ಕೇಂದ್ರಕ್ಕೆ ತಹಶೀಲ್ದಾರ್ ನಯನ ಭೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗಾಗಿ ಎರಡು ಟೇಬಲ್ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 20 ಮಂದಿ ಚುನಾವಣಾ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

ಎಲೆಕ್ಟ್ರಾನಿಕ್ ಮತಯಂತ್ರಗಳಾಗಿರುವುದರಿಂದ ಫಲಿತಾಂಶ ಅತಿ ಶೀಘ್ರ ಹೊರಬೀಳಲಿದ್ದು, ಒಂದು ವಾರ್ಡ್ ಆದ ನಂತರ ಒಂದು ವಾರ್ಡಿನ ಮತ ಎಣಿಕೆ ನಡೆಯುತ್ತಲಿದೆ.

ಈ ಸುದ್ದಿ ಓದಿದ್ದೀರಾ? ಕೆ ಆರ್‌ ಪೇಟೆ | ಇ-ಸ್ವತ್ತು, ಮನರೇಗಾ ಯೋಜನೆಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಕ್ರಮಕ್ಕೆ ಕರವೇ ಆಗ್ರಹ

ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಎಣಿಕೆ ಸಂದರ್ಭದಲ್ಲಿ ಈ ಭಾಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.

ಈ ನಡುವೆ ತಹಶೀಲ್ದಾರ್ ನಯನ, ವೃತ್ತ ನಿರೀಕ್ಷಕ ಲೋಕೇಶ್, ಕಸಬಾ ಕಂದಾಯ ನಿರೀಕ್ಷಕ ರಾಜೇಂದ್ರ ಪ್ರಸಾದ್ ಮತ್ತಿತರರು ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದರಲ್ಲದೇ ಮತ ಯಂತ್ರಗಳನ್ನು ಭದ್ರಪಡಿಸಿರುವ ಸ್ಟಾಂಗ್ ರೂಂ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಭಿಮಾನಿಗಳ ಆಸೆಯಂತೆ ದಸರೆಗೆ ಮರಳಿದ ಅಭಿಮನ್ಯು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಕೊಡಗಿನ ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು...

ದೆಹಲಿಯಲ್ಲಿ ಪತ್ರಕರ್ತೆಯರ ಮೇಲೆ ಪೊಲೀಸ್ ದೌರ್ಜನ್ಯ: ಕ್ರಮಕ್ಕೆ ಶಿವಮೊಗ್ಗ ಕಾನಿಪಸ ಆಗ್ರಹ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜಿನಾಮೆಗೆ ಆಗ್ರಹಿಸಿ ನಡೆಯುತ್ತಿರುವ...

ತೀರ್ಥಹಳ್ಳಿ | ಮತಪಟ್ಟಿಯಿಂದ ಮುಸ್ಲಿಮರ ಹೆಸರು ಅಳಿಸಲು ಬಿಜೆಪಿ ಸಂಚು? ತಹಶೀಲ್ದಾರ್‌ಗೆ ಪತ್ರ ಬರೆದಿದ್ದ ಬಿಜೆಪಿ ಮುಖಂಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ರೋಗಿಗಳನ್ನು ಗ್ರಾಹಕರಂತೆ ಕಾಣದೆ ಮನೆಯ ಸದಸ್ಯರಂತೆ ಉಪಚರಿಸುವ ಚಿತ್ರಕೂಟ: ಡಾ. ಪ್ರದೀಪ್

ರೋಗಿಗಳನ್ನು ಗ್ರಾಹಕರಂತೆ ಕಾಣದೆ ಮನೆಯ ಸದಸ್ಯರಂತೆ ಅಕ್ಕರೆಯಿಂದ ಉಪಚರಿಸುವ ಅಪರೂಪದ ವಾತಾವರಣ...