ಬೀದರ್‌ | ಜೂ 4 ರಂದು ಮತ ಎಣಿಕೆ; ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿ : ಡಿಸಿ ಆದೇಶ

Date:

ಜೂನ್ 4 ರಂದು ಮತ ಎಣಿಕೆ ನಡೆಯಲಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು, ಗಲಭೆ, ಗಲಾಟೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದ ಗೋವಿಂದರೆಡ್ಡಿ ಆದೇಶ ಹೊರಡಿಸಿದ್ದಾರೆ.
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧ ಬೀದರ ನಗರದ ಬಿ.ವ್ಹಿ.ಭೂಮರೆಡ್ಡಿ ವಿದ್ಯಾಲಯದಲ್ಲಿ ಮತ ಎಣಿಕೆ ನಡೆಯಲಿದೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ಜೂ. 4ರ ಬೆಳಿಗ್ಗೆ 6ಗಂಟೆಯಿಂದ ಜೂ.5ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಸಾರ್ವಜನಿಕರು ಸಕಾರಣವಿಲ್ಲದೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮುಂತಾದವುಗಳಲ್ಲಿ ಗುಂಪು ಸೇರುವುದು, ಯಾವುದೇ ವಿಧದ ಆಯುಧಗಳು ಹೊಂದುವುದನ್ನು ಮತ್ತು ಸಾಗಾಟ ಮಾಡುವುದು ನಿಷೇಧಿಸಿದೆ ಹಾಗೂ ಮತ ಎಣಿಕೆ ಕೇಂದ್ರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಈ ಆದೇಶವು ಮದುವೆ, ಶುಭ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳಿಗೆ, ಶವ ಸಂಸ್ಕಾರಕ್ಕೆ ಹಾಗೂ ಸರ್ಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯಿಸುವುದು ಮತ್ತು ಆರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವವಣೆ ವೇಳೆ ಲಾಠಿ/ಬಂದೂಕುಗಳನ್ನು ಉಪಯೋಗಿಸುವುದಕ್ಕೆ ಹಾಗೂ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಸಿಬ್ಬಂದಿಗಳು ಅವರ ಚುನಾವಣಾ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ” ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆ

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ‌ (6ರಿಂದ 8ನೇ) ಸಂಘದ ಔರಾದ್...

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....